ಸದ್ಯ ಸ್ಮಾರ್ಟ್ಫೋನ್ (Smartphone) ಮಾರುಕಟ್ಟೆಯನ್ನು ಆಳುತ್ತಿರುವ ನಂಬರ್ ಒನ್ ಬ್ರ್ಯಾಂಡ್ ಶವೋಮಿ (Xiaomi) ನೂತನ ಪ್ರಯೋಗಕ್ಕೆ ಕೈ ಹಾಕುತ್ತಿದೆ. 200 ಮೆಗಾ ಫಿಕ್ಸೆಲ್ ಕ್ಯಾಮೆರಾದ (200MP Camera) ಸ್ಮಾರ್ಟ್ಫೋನ್, ಮಡಚುವ ಫೋನ್ ಹೀಗೆ ಅನೇಕ ಹೊಸ ಪ್ರಾಡಕ್ಟ್ಗಳ ತಯಾರಿಕೆ ಒಂದು ಕಡೆ ಆಗುತ್ತಿದ್ದರೆ, ಇದರ ನಡುವೆ ಶವೋಮಿ 11 ಯೂತ್ ವಿಟಾಲಿಟಿ ಆವೃತ್ತಿಯನ್ನು (Xiaomi 11 Youth Vitality Edition) ಮಾರುಕಟ್ಟೆಯಲ್ಲಿ ಅನಾವರಣ ಮಾಡಿದೆ. ಈ ಸ್ಮಾರ್ಟ್ಫೋನ್ ಸಾಕಷ್ಟು ವಿಶೇಷತೆಯಿಂದ ಕೂಡಿದ್ದು, 64 ಮೆಗಾಪಿಕ್ಸೆಲ್ ಸೆನ್ಸಾರ್ ಮುಖ್ಯ ಕ್ಯಾಮೆರಾ ಹೊಂದಿರುವ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಬಲಿಷ್ಠವಾದ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ ಪ್ರೊಸೆಸರ್, ಅತ್ಯುತ್ತಮ ಬ್ಯಾಟರಿ ಸೇರಿದಂತೆ ಅನೇಕ ಫೀಚರ್ಗಳು ಇದರಲ್ಲಿದೆ. ಆದರೆ, ಇದು ಸದ್ಯಕ್ಕೆ ಭಾರದಲ್ಲಿ ಲಭ್ಯವಿಲ್ಲ. ಬದಲಾಗಿ ಚೀನಾದಲ್ಲಿ ಬಿಡುಗಡೆ ಆಗಿದೆ. ಮುಂದಿನ ದಿನಗಳಲ್ಲಿ ಇದು ದೇಶಕ್ಕೂ ಕಾಲಿಡಲಿದೆಯಂತೆ.
ಶವೋಮಿ 11 ಯೂತ್ ವಿಟಾಲಿಟಿ ಆವೃತ್ತಿಯು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟೋ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ f/1.79 ಲೆನ್ಸ್‌ನೊಂದಿಗೆ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೋ ಚಾಟ್‌ಗಳಿಗಾಗಿ 20-ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ f/2.24 ಲೆನ್ಸ್ ಅನ್ನು ಹೊಂದಿದೆ.
ಈ ಸ್ಮಾರ್ಟ್ಫೋನ್ 4,250mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS/ NavIC, ಇನ್ಫ್ರಾರೆಡ್ (IR), ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಹೊಂದಿದೆ.
ಶಿಯೋಮಿ 11 ಯೂತ್ ವಿಟಾಲಿಟಿ ಆವೃತ್ತಿಯು 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ CNY 1,999 (ಸುಮಾರು 23,800ರೂ.) ಬೆಲೆ ನಿಗದಿಪಡಿಸಲಾಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ಆಯ್ಕೆಯ ಬೆಲೆ CNY 2,299 (ಸುಮಾರು 27,300ರೂ.) ಹೊಂದಿರುತ್ತದೆ. ಇದು ಕಪ್ಪು, ನೀಲಿ, ಗುಲಾಬಿ ಮತ್ತು ಬಿಳಿ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ.
(Xiaomi 11 Youth Vitality Edition was launched as the latest model in the Xiaomi 11 series)