Xiaomi 11i HyperCharge 5G: 120W ಫಾಸ್ಟ್ ಚಾರ್ಜ್: ಭಾರತದಲ್ಲಿ ಅತೀ ವೇಗವಾಗಿ ಚಾರ್ಜ್ ಆಗುವ ಮೊದಲ ಫೋನ್ ರಿಲೀಸ್

Xiaomi 11i: ಶವೋಮಿ 11i ಹೈಪರ್‌ಚಾರ್ಜ್ 5G ಇದು ಭಾರತದಲ್ಲಿ ಅತ್ಯಂತ ವೇಗವಾಗಿ ಚಾರ್ಜ್ ಆಗುವ ಮೊದಲ ಫೋನ್ ಆಗಿದೆ. ಶವೋಮಿ 11i ಸ್ಮಾರ್ಟ್‌ಫೋನ್‌ 67W ವೇಗದ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ.

Xiaomi 11i HyperCharge 5G: 120W ಫಾಸ್ಟ್ ಚಾರ್ಜ್: ಭಾರತದಲ್ಲಿ ಅತೀ ವೇಗವಾಗಿ ಚಾರ್ಜ್ ಆಗುವ ಮೊದಲ ಫೋನ್ ರಿಲೀಸ್
Xiaomi 11i HyperCharge 5G
Follow us
TV9 Web
| Updated By: Vinay Bhat

Updated on: Jan 07, 2022 | 1:56 PM

ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ಆಳುತ್ತಿರುವ ನಂಬರ್ ಒನ್ ಮೊಬೈಲ್ ಬ್ರ್ಯಾಂಡ್ ಶವೋಮಿ (Xiaomi) ಸಂಸ್ಥೆ ಇತ್ತೀಚೆಗಷ್ಟೆ ಹೊಸ ವರ್ಷಕ್ಕೆ ಶವೋಮಿ 12 ಸರಣಿಯನ್ನು (Xiaomi 12 Series) ಬಿಡುಗಡೆ ಮಾಡಿತ್ತು. ಇದರ ಬೆನ್ನಲ್ಲೆ ಭಾರತದಲ್ಲಿ ಇದೀಗ ಶವೋಮಿ 11i ಹೈಪರ್‌ಚಾರ್ಜ್ 5G (Xiaomi 11i HyperCharge 5G) ಮತ್ತು ಶವೋಮಿ 11i 5G (Xiaomi 11i 5G) ಸ್ಮಾರ್ಟ್‌ಫೋನ್‌ ಬಿಡುಗಡೆ  ಮಾಡಿದೆ. ಈ ಎರಡೂ ಸ್ಮಾರ್ಟ್‌ಫೋನ್‌ಗಳು ಒಂದೇ ರೀತಿಯ ಫೀಚರ್ಸ್‌ಗಳನ್ನು ಒಳಗೊಂಡಿದೆ. ಆದರೆ, ಶವೋಮಿ 11i ಹೈಪರ್‌ಚಾರ್ಜ್ 5G ಫೋನ್‌ ಮಾತ್ರ 120W ವೇಗದ ಚಾರ್ಜಿಂಗ್ ಅನ್ನು ಹೊಂದಿದೆ. ಇದು ಭಾರತದಲ್ಲಿ ಅತ್ಯಂತ ವೇಗವಾಗಿ ಚಾರ್ಜ್ ಆಗುವ ಮೊದಲ ಫೋನ್ ಆಗಿದೆ. ಶವೋಮಿ 11i ಸ್ಮಾರ್ಟ್‌ಫೋನ್‌ 67W ವೇಗದ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ. ಬಲಿಷ್ಠ ಪ್ರೊಸೆಸರ್, ಸಖತ್ ಲುಕ್​ನಿಂದ ಫೋನ್ ಪ್ರಿಯರ ನಿದ್ದೆ ಕದ್ದಿರುವ ಈ ಫೋನ್ ಖರೀದಿಸಲು ಜನರು ಕ್ಯೂ ನಿಂತಿದ್ದಾರೆ.

ಶವೋಮಿ 11i ಹೈಪರ್‌ಚಾರ್ಜ್ 5G

ಶವೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ವರ್ಧಿತ ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಡ್ಯುಯಲ್-ಸೆಲ್ ಲಿಥಿಯಂ ಪಾಲಿಮರ್ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಕೇವಲ 15 ನಿಮಿಷಗಳಲ್ಲಿ ಸಂಪೂರ್ಣ ಶೇ. 100 ಚಾರ್ಜ್ ಆಗುತ್ತದೆ ಎಂದು ಕಂಪನಿ ತಿಳಿಸಿದೆ.

ಬೆಲೆ ಎಷ್ಟು?:

ಭಾರತದಲ್ಲಿ ಶವೋಮಿ 11i ಹೈಪರ್‌ಚಾರ್ಜ್ 5G ಸ್ಮಾರ್ಟ್‌ಫೋನ್‌ ಎರಡು ಆಯ್ಕೆಯಲ್ಲಿ ಖರೀದಿಗೆ ಸಿಗಲಿದೆ. ಇದರ 6GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕಾಗಿ 26,999 ರೂ. ನಿಗದಿ ಮಾಡಲಾಗಿದೆ. ಅಂತೆಯೆ 8GB RAM ಮತ್ತು 128GB ರೂಪಾಂತರ ಆಯ್ಕೆಗೆ 28,999 ರೂ. ಬೆಲೆ ಹೊಂದಿದೆ.

ಶವೋಮಿ 11i 5G:

ಶವೋಮಿ 11i 5G ಸ್ಮಾರ್ಟ್‌ಫೋನ್‌ ಕೂಡ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 108-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಬೆಲೆ ಎಷ್ಟು?:

ಶವೋಮಿ 11i 5G ಸ್ಮಾರ್ಟ್‌ಫೋನ್‌ 6GB RAM ಮತ್ತು 128GB ಮಾದರಿ ಆಯ್ಕೆಗೆ 24,999 ರೂ. ಬೆಲೆ ಹೊಂದಿದೆ. 8GB RAM ಮತ್ತು 128GB ಆಯ್ಕೆಗೆ 26,999 ರೂ. ನಿಗದಿ ಮಾಡಲಾಗಿದೆ. ಎರಡೂ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಜನವರಿ 12 ರಿಂದ ಪ್ರಸಿದ್ಧ ಇ ಕಾಮರ್ಸ್ ತಾಣವಾದ ಫ್ಲಿಪ್‌ಕಾರ್ಟ್‌, ಎಂಐ.ಕಾಮ್‌, ಎಂಐ ಹೋಮ್‌ ಸ್ಟೋರ್‌ಗಳು ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Vivo V23 5G: ಸ್ಮಾರ್ಟ್​ಫೋನ್ ಪ್ರಿಯರ ನಿದ್ದೆ ಕದ್ದ ವಿವೋ ರಿಲೀಸ್ ಮಾಡಿದ ಎರಡು ಹೊಸ ಸ್ಮಾರ್ಟ್​ಫೋನ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ