Xiaomi 12 Pro 5G: 120W ಹೈಪರ್‌ ಚಾರ್ಜ್, 50MP ಕ್ಯಾಮೆರಾದ ಶವೋಮಿ 12 ಪ್ರೊ ಫೋನ್ ಮಾರಾಟ ಆರಂಭ: ಬೆಲೆ?

ಶವೋಮಿ 12 ಪ್ರೊ ಸ್ಮಾರ್ಟ್​ಫೋನ್​ 4,600mAh ಲಿ-ಪಾಲಿಮರ್ ಬ್ಯಾಟರಿಯನ್ನು ಹೊಂದಿದೆ. ಇದು 120W ಶವೋಮಿ ಹೈಪರ್ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 18 ನಿಮಿಷಗಳಲ್ಲಿ 0-100 % ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿದೆ.

Xiaomi 12 Pro 5G: 120W ಹೈಪರ್‌ ಚಾರ್ಜ್, 50MP ಕ್ಯಾಮೆರಾದ ಶವೋಮಿ 12 ಪ್ರೊ ಫೋನ್ ಮಾರಾಟ ಆರಂಭ: ಬೆಲೆ?
Xiaomi 12 Pro 5G
Follow us
| Updated By: Vinay Bhat

Updated on: May 02, 2022 | 12:53 PM

ಭಾರತೀಯ ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಚೀನಾ ಮೂಲದ ಪ್ರಸಿದ್ಧ ಶವೋಮಿ ಕಂಪನಿ ಈಗಾಗಲೇ ತನ್ನ ರೆಡ್ಮಿ (Redmi), ಎಂಐ ಫೋನ್​ಗಳನ್ನು ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಕಂಡಿದೆ. ಈ ವರ್ಷ ಎಂಐ ಬದಲಾಗಿ ಶವೋಮಿ ಹೆಸರಿನಲ್ಲಿ ಆಕರ್ಷಕ ಮೊಬೈಲ್​ಗಳನ್ನು ಪರಿಚಯಿಸುತ್ತಿರುವ ಕಂಪನಿ ವಾರದ ಹಿಂದೆಯಷ್ಟೆ ಭಾರತದಲ್ಲಿ ಶವೋಮಿ 12 ಪ್ರೊ 5ಜಿ (Xiaomi 12 Pro 5G) ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿತ್ತು. 120Hz ರಿಫ್ರೆಶ್‌ ರೇಟ್‌ ಸಾಮರ್ಥ್ಯ, 120W ಹೈಪರ್‌ ಚಾರ್ಜರ್ ಸಪೋರ್ಟ್​, 50 ಮೆಗಾಫಿಕ್ಸೆಲ್ ಸಾಮರ್ಥ್ಯದ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್​​ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್​ ಇದೆ?, ಎಲ್ಲಿ ಖರೀದಿಸಬಹುದು? ಎಂಬುದನ್ನು ನೋಡೋಣ.

  1. ಭಾರತದಲ್ಲಿ ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್‌ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ ಬೇಸ್‌ ಮಾಡೆಲ್‌ 8GB RAM ಮತ್ತು 256GB ಮಾದರಿಗೆ 62,999 ರೂ. ನಿಗದಿ ಮಾಡಲಾಗಿದೆ. ಹಾಗೆಯೇ 12GB RAM ಮತ್ತು 256GB ರೂಪಾಂತರದ ಆಯ್ಕೆಗೆ 66,999 ರೂ. ಇದೆ. ಇನ್ನು ಈ ಫೋನ್‌ ಕೌಚರ್ ಬ್ಲೂ, ನಾಯ್ರ್ ಬ್ಲಾಕ್ ಮತ್ತು ಒಪೆರಾ ಮೌವ್ ಬಣ್ಣಗಳ ಆಯ್ಕೆಯಲ್ಲಿ ಬಂದಿದೆ. ಇದೀಗ ಈ ಫೋನ್ ಅಮೆಜಾನ್ ಮತ್ತು ಶವೋಮಿಯ ಅಧಿಕೃತ ವೆಬ್​ಸೈಟ್​​ನಲ್ಲಿ ಸೇಲ್ ಕಾಣುತ್ತಿದೆ.
  2. ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.72 ಇಂಚಿನ WQHD+ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440×3,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ, 1Hz ಮತ್ತು 120Hz ನಡುವಿನ ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ.
  3. ಆಕ್ಟಾ-ಕೋರ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಅನ್ನು MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.
  4. ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಬೆಂಬಲಿಸುವ f/1.8 ಲೆನ್ಸ್‌ ನೀಡಲಾಗಿದೆ.
  5. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆತಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಸಹ ಒಳಗೊಂಡಿದೆ. ಇನ್ನು ರಿಯರ್‌ ಕ್ಯಾಮೆರಾ 24fps ಫ್ರೇಮ್ ರೇಟ್‌ನಲ್ಲಿ 8K ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗದೆ.
  6. ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 4,600mAh ಲಿ-ಪಾಲಿಮರ್‌ ಬ್ಯಾಟರಿಯನ್ನು ಹೊಂದಿದೆ. ಇದು 120W ಶವೋಮಿ ಹೈಪರ್‌ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 18 ನಿಮಿಷಗಳಲ್ಲಿ 0-100 % ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿದೆ.
  7. ಇದಲ್ಲದೆ, ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 50W ವೈರ್‌ಲೆಸ್ ಟರ್ಬೊ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಉಳಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS/ NavIC, ಇನ್ಫ್ರಾರೆಡ್ (IR) ಬ್ಲಾಸ್ಟರ್, NFC, ಮತ್ತು USB ಟೈಪ್-C ಪೋರ್ಟ್ ಸಪೋರ್ಟ್​ ಪಡೆದುಕೊಂಡಿದೆ.

ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ