Kannada News Technology Xiaomi 12 Pro 5G 50MP triple rear camera 120W fast charging support Phone first sale started check price and specs
Xiaomi 12 Pro 5G: 120W ಹೈಪರ್ ಚಾರ್ಜ್, 50MP ಕ್ಯಾಮೆರಾದ ಶವೋಮಿ 12 ಪ್ರೊ ಫೋನ್ ಮಾರಾಟ ಆರಂಭ: ಬೆಲೆ?
ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್ 4,600mAh ಲಿ-ಪಾಲಿಮರ್ ಬ್ಯಾಟರಿಯನ್ನು ಹೊಂದಿದೆ. ಇದು 120W ಶವೋಮಿ ಹೈಪರ್ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 18 ನಿಮಿಷಗಳಲ್ಲಿ 0-100 % ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿದೆ.
ಭಾರತೀಯ ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಚೀನಾ ಮೂಲದ ಪ್ರಸಿದ್ಧ ಶವೋಮಿ ಕಂಪನಿ ಈಗಾಗಲೇ ತನ್ನ ರೆಡ್ಮಿ(Redmi), ಎಂಐ ಫೋನ್ಗಳನ್ನು ಬಿಡುಗಡೆ ಮಾಡಿ ಭರ್ಜರಿ ಯಶಸ್ಸು ಕಂಡಿದೆ. ಈ ವರ್ಷ ಎಂಐ ಬದಲಾಗಿ ಶವೋಮಿ ಹೆಸರಿನಲ್ಲಿ ಆಕರ್ಷಕ ಮೊಬೈಲ್ಗಳನ್ನು ಪರಿಚಯಿಸುತ್ತಿರುವ ಕಂಪನಿ ವಾರದ ಹಿಂದೆಯಷ್ಟೆ ಭಾರತದಲ್ಲಿ ಶವೋಮಿ 12 ಪ್ರೊ 5ಜಿ (Xiaomi 12 Pro 5G) ಸ್ಮಾರ್ಟ್‌ಫೋನ್ ಲಾಂಚ್ ಮಾಡಿತ್ತು. 120Hz ರಿಫ್ರೆಶ್ ರೇಟ್ ಸಾಮರ್ಥ್ಯ, 120W ಹೈಪರ್ ಚಾರ್ಜರ್ ಸಪೋರ್ಟ್, 50 ಮೆಗಾಫಿಕ್ಸೆಲ್ ಸಾಮರ್ಥ್ಯದ ಕ್ಯಾಮೆರಾ ಹೊಂದಿರುವ ಈ ಸ್ಮಾರ್ಟ್‌ಫೋನ್ ಇದೀಗ ಖರೀದಿಗೆ ಸಿಗುತ್ತಿದೆ. ಹಾಗಾದ್ರೆ ಈ ಫೋನಿನ ಬೆಲೆ ಎಷ್ಟು? ಏನೆಲ್ಲ ಫೀಚರ್ಸ್ ಇದೆ?, ಎಲ್ಲಿ ಖರೀದಿಸಬಹುದು? ಎಂಬುದನ್ನು ನೋಡೋಣ.
ಭಾರತದಲ್ಲಿ ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್ ಒಟ್ಟು ಎರಡು ಸ್ಟೋರೆಜ್ ಆಯ್ಕೆಯಲ್ಲಿ ರಿಲೀಸ್ ಆಗಿದೆ. ಇದರ ಬೇಸ್ ಮಾಡೆಲ್ 8GB RAM ಮತ್ತು 256GB ಮಾದರಿಗೆ 62,999 ರೂ. ನಿಗದಿ ಮಾಡಲಾಗಿದೆ. ಹಾಗೆಯೇ 12GB RAM ಮತ್ತು 256GB ರೂಪಾಂತರದ ಆಯ್ಕೆಗೆ 66,999 ರೂ. ಇದೆ. ಇನ್ನು ಈ ಫೋನ್ ಕೌಚರ್ ಬ್ಲೂ, ನಾಯ್ರ್ ಬ್ಲಾಕ್ ಮತ್ತು ಒಪೆರಾ ಮೌವ್ ಬಣ್ಣಗಳ ಆಯ್ಕೆಯಲ್ಲಿ ಬಂದಿದೆ. ಇದೀಗ ಈ ಫೋನ್ ಅಮೆಜಾನ್ ಮತ್ತು ಶವೋಮಿಯ ಅಧಿಕೃತ ವೆಬ್ಸೈಟ್ನಲ್ಲಿ ಸೇಲ್ ಕಾಣುತ್ತಿದೆ.
ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್ 6.72 ಇಂಚಿನ WQHD+ E5 ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,440×3,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ, 1Hz ಮತ್ತು 120Hz ನಡುವಿನ ರಿಫ್ರೆಶ್ ರೇಟ್ ಬೆಂಬಲಿಸಲಿದೆ.
ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 12 ಅನ್ನು MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಸೆನ್ಸಾರ್ ಅನ್ನು ಹೊಂದಿದ್ದು, ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಅನ್ನು ಬೆಂಬಲಿಸುವ f/1.8 ಲೆನ್ಸ್ ನೀಡಲಾಗಿದೆ.
ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆತಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಸಹ ಒಳಗೊಂಡಿದೆ. ಇನ್ನು ರಿಯರ್ ಕ್ಯಾಮೆರಾ 24fps ಫ್ರೇಮ್ ರೇಟ್‌ನಲ್ಲಿ 8K ವೀಡಿಯೊ ರೆಕಾರ್ಡಿಂಗ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗದೆ.
ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್ 4,600mAh ಲಿ-ಪಾಲಿಮರ್ ಬ್ಯಾಟರಿಯನ್ನು ಹೊಂದಿದೆ. ಇದು 120W ಶವೋಮಿ ಹೈಪರ್ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು 18 ನಿಮಿಷಗಳಲ್ಲಿ 0-100 % ಚಾರ್ಜ್ ಆಗುತ್ತದೆ ಎಂದು ಕಂಪನಿ ಹೇಳಿದೆ.
ಇದಲ್ಲದೆ, ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್ 50W ವೈರ್‌ಲೆಸ್ ಟರ್ಬೊ ಚಾರ್ಜಿಂಗ್ ಅನ್ನು ಒಳಗೊಂಡಿದೆ. ಉಳಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS/ NavIC, ಇನ್ಫ್ರಾರೆಡ್ (IR) ಬ್ಲಾಸ್ಟರ್, NFC, ಮತ್ತು USB ಟೈಪ್-C ಪೋರ್ಟ್ ಸಪೋರ್ಟ್ ಪಡೆದುಕೊಂಡಿದೆ.