Xiaomi 12 Series: ಸ್ಮಾರ್ಟ್‌ಫೋನ್ ಮಾರುಕಟ್ಟೆಯನ್ನೇ ನಡುಗಿಸಿದ ಶವೋಮಿ 12 ಸರಣಿ ಬಿಡುಗಡೆ: ಬೆಲೆ ಎಷ್ಟು?
Xiaomi 12, Xiaomi 12 Pro and Xiaomi 12X: ತನ್ನ ಬೊಂಬಾಟ್ ಫೀಚರ್ಗಳಿಂದ ಮೊಬೈಲ್ ಮಾರುಕಟ್ಟೆಯನ್ನೇ ನಡುಗಿಸಿದ ಶವೋಮಿ 12, ಶವೋಮಿ 12 ಪ್ರೊ ಮತ್ತು ಶವೋಮಿ 12X ಸ್ಮಾರ್ಟ್‌ಫೋನ್ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ.
ಸ್ಮಾರ್ಟ್‌ಫೋನ್ (Smartphone) ಮಾರುಕಟ್ಟೆಯನ್ನು ಆಳುತ್ತಿರುವ ಶವೋಮಿ ಸಂಸ್ಥೆ ಕಳೆದ ಡಿಸೆಂಬರ್ ಅಂತ್ಯದಲ್ಲಿ ಹೊಸ ವರ್ಷಕ್ಕೆಂದು ಶವೋಮಿ 12 ಸರಣಿ (Xiaomi 12 Series) ಫೋನ್ ಅನ್ನು ಅನಾವರಣ ಮಾಡಿತ್ತು. ತನ್ನ ಬೊಂಬಾಟ್ ಫೀಚರ್ಗಳಿಂದ ಮೊಬೈಲ್ ಮಾರುಕಟ್ಟೆಯನ್ನೇ ನಡುಗಿಸಿದ ಶವೋಮಿ 12, ಶವೋಮಿ 12 ಪ್ರೊ ಮತ್ತು ಶವೋಮಿ 12X ಸ್ಮಾರ್ಟ್‌ಫೋನ್ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿದೆ. ಹೊಚ್ಚ ಹೊಸ ಪವರ್ಫುಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್, 120W ಫಾಸ್ಟ್ ಚಾರ್ಜರ್ (120W Fast Charger), ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್, ಇದರಲ್ಲಿ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಪ್ರೈಮರಿ ಕ್ಯಾಮೆರಾ ಸೇರಿದಂತೆ ಭರ್ಜರಿ ಫೀಚರ್ಗಳಿಂದ ಈ ಮೂರು ಫೋನ್ಗಳು ಒಳಗೊಂಡಿದೆ. ಹಾಗಾದ್ರೆ ಇದರ ಬೆಲೆ ಎಷ್ಟು? ಎಂಬ ಬಗೆಗಿನ ಮಾಹಿತಿ ನೋಡೋಣ.
ಶವೋಮಿ 12 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ $ 749, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜಿ ಸುಮಾರು 57,200 ರೂ. ಎನ್ನಬಹುದು. ಇನ್ನು ಶವೋಮಿ 12 ಪ್ರೊ 8GB RAM + 256GB ಸ್ಟೋರೇಜ್ ರೂಪಾಂತರಕ್ಕಾಗಿ $999 (ಸುಮಾರು 76,300ರೂ) ಬೆಲೆ ಪಡೆದಿದೆ. ಆದರೆ ಶವೋಮಿ 12X ಫೋನ್ 8GB RAM + 128GB ಸ್ಟೋರೇಜ್ ರೂಪಾಂತರಕ್ಕಾಗಿ $649 (ಸುಮಾರು 49,600ರೂ)ಬೆಲೆಯನ್ನು ನಿಗದಿ ಮಾಡಲಾಗಿದೆ.ಈ ಮೂರು ಸ್ಮಾರ್ಟ್‌ಫೋನ್‌ಗಳು ನೀಲಿ, ಬೂದು ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
ಶವೋಮಿ 12 ಸ್ಮಾರ್ಟ್‌ಫೋನಿನ ವಿಶೇಷತೆ ಬಗ್ಗೆ ಗಮನಿಸುವುದಾದರೆ, ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.28 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC, ಇನ್ಫ್ರಾರೆಡ್ (IR), ಮತ್ತು USB ಟೈಪ್-C ಪೋರ್ಟ್ ಸೇರಿದೆ.
ಶವೋಮಿ 12 ಪ್ರೊ ಸ್ಮಾರ್ಟ್‌ಫೋನ್ 6.73 ಇಂಚಿನ WQHD+ E5 ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆ್ಯಪಲ್ ತನ್ನ ಪ್ರೀಮಿಯಂ ಐಫೋನ್ ಮಾದರಿಗಳಲ್ಲಿ ಬಳಸುವ ಕಡಿಮೆ-ತಾಪಮಾನದ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ಬ್ಯಾಕ್‌ಪ್ಲೇನ್ ತಂತ್ರಜ್ಞಾನವನ್ನು ಸಹ ಒಳಗೊಂಡಿದೆ. ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಪ್ರೈಮೆರಿ ಸೆನ್ಸಾರ್ನಿಂದ ಕೂಡಿದೆ. ಜೊತೆಗೆ ಇದು 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಫೋನ್ 4,600mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು120W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಫೋನ್ 50W ವೈರ್‌ಲೆಸ್ ಚಾರ್ಜಿಂಗ್ ಮತ್ತು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, GPS/ A-GPS, NFC, ಇನ್ಫ್ರಾರೆಡ್ (IR), ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿದೆ.
ಕೊನೆಯದಾಗಿ ಶವೋಮಿ 12X ಸ್ಮಾರ್ಟ್‌ಫೋನ್ ಅದೇ 6.28 ಇಂಚಿನ ಫುಲ್ HD+ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 10W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಪಡೆದುಕೊಂಡಿದೆ.
iQoo Z6 5G: ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ಐಕ್ಯೂ Z6 5G ಸ್ಮಾರ್ಟ್‌ಫೋನ್ ಬಿಡುಗಡೆ: ಏನು ವಿಶೇಷತೆ?