ಸ್ಮಾರ್ಟ್ಫೋನ್ (Smartphone) ಮಾರುಕಟ್ಟೆಯಲ್ಲಿ ಕ್ಯಾಮೆರಾ ಮೊಬೈಲ್ಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶವೋಮಿ ಮೊದಲ ಬಾರಿಗೆ ಅದುಕೂಡ ಅತ್ಯಂತ ಕಡಿಮೆ ಬೆಲೆಗೆ 108 ಮೆಗಾಫಿಕ್ಸೆಲ್ ಕ್ಯಾಮೆರಾ ಫೋನ್ ಪರಿಚಯಿಸಿದ್ದೇ ತಡ ಇತರೆ ಬಹುತೇಕ ಬ್ರ್ಯಾಂಡ್ಗಳು ಮೊಬೈಲ್ನಲ್ಲಿನ ಕ್ಯಾಮೆರಾಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಮುಖ್ಯವಾಗಿ ಭಾರತದಲ್ಲಿ (Xiaomi) ಶವೋಮಿ ಕಂಪನಿಯ ಫೋನ್ಗಳಿಗೆ ಹೆಚ್ಚು ಬೇಡಿಕೆ ಇದೆ. ಅದರಲ್ಲೂ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್ಗಳು ದೇಶದಲ್ಲಿ ಎಗ್ಗಿಲ್ಲದೆ ಮಾರಾಟ ಆಗುತ್ತಿದೆ. ಆದರೆ ಇನ್ನು ನೀವು ಈ 108 ಮೆಗಾಫಿಕ್ಸೆಲ್ನ ಸ್ಮಾರ್ಟ್ಫೋನನ್ನು ಮರೆತು ಬಿಡಿ. ಯಾಕೆಂದರೆ ಈಗಾಗಲೇ ಮಾರುಕಟ್ಟೆಗೆ 200 ಮೆಗಾಫಿಕ್ಸೆಲ್ ಕ್ಯಾಮೆರಾದ (200MP Camera) ಸ್ಮಾರ್ಟ್ಫೋನ್ ಲಗ್ಗೆಯಿಡುತ್ತಿದೆ.
ಇತ್ತೀಚೆಗಷ್ಟೆ ಮೋಟೋ ಕಂಪನಿ ವಿಶ್ವದ ಮೊಟ್ಟ ಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಮೋಟೋರೊಲಾ ಎಡ್ಜ್ 30 ಅಲ್ಟ್ರಾ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಶವೋಮಿ ಸರದಿ. ಇಂದು ಅಕ್ಟೋಬರ್ 4 ರಂದು ಮಾರುಕಟ್ಟೆಗೆ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್ ಅಪ್ಪಳಿಸಲಿದೆ.
Ready to #MakeMomentsMega!
Watch #XiaomiLaunch on our social media platforms on October 4th, 2022! pic.twitter.com/veD7ENAc4v
— Xiaomi (@Xiaomi) September 27, 2022
ಹೌದು, ಶವೋಮಿ ಇದೀಗ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನನ್ನು ಪರಿಚಯಿಸಲು ಮುಂದಾಗಿದೆ. ಶವೋಮಿ ಕಂಪನಿ ತನ್ನ ಶವೋಮಿ 12T ಸರಣಿಯ ಸ್ಮಾರ್ಟ್ಫೋನ್ಗಳನ್ನು ಇಂದು ಬಿಡುಗಡೆ ಮಾಡುತ್ತಿದೆ. ಇಂದು ನಡೆಯಲಿರುವ ಮೇಕ್ ಮೂಮೆಂಟ್ಸ್ ಮೆಗಾ ಎಂಬ ಕಾರ್ಯಕ್ರಮದಲ್ಲಿ ಶವೋಮಿ 12T ಹಾಗೂ ಶವೋಮಿ 12T ಪ್ರೊ ಫೋನ್ ರಿಲೀಸ್ ಆಗಲಿದೆ. ಶವೋಮಿ 12T ಪ್ರೊ 200 ಮೆಗಾಫಿಕ್ಸೆಲ್ ಕ್ಯಾಮೆರಾದೊಂದಿಗೆ ಬಿಡುಗಡೆ ಆಗಲಿದೆ. ಸ್ವತಃ ಶವೋಮಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಖಚಿತ ಪಡಿಸಿದೆ.
ಶವೋಮಿ 12T ಪ್ರೊ ಸ್ಮಾರ್ಟ್ಫೋನ್ನಲ್ಲಿ ಅತ್ಯಂತ ಬಲಿಷ್ಠವಾದ ಸ್ನಾಪ್ಡ್ರಾಗನ್ 8+ Gen 1 ಪ್ರೊಸೆಸರ್ ಇರಲಿದೆಯಂತೆ. 200MP ಮೈನ್ ಕ್ಯಾಮೆರಾದೊಂದಿಗೆ 8 ಮೆಗಾಫಿಕ್ಸೆಲ್ ವೈಡ್ ಆ್ಯಂಗಲ್ ಕ್ಯಾಮೆರಾ ಹಾಗೂ 2 ಮೆಗಾಫಿಕ್ಸೆಲ್ ಮ್ಯಾಕ್ರೊ ಸೆನ್ಸಾರ್ ಕ್ಯಾಮೆರಾ ಅಳವಡಿಸಲಾಗಿದೆಂತೆ. ಈ ಕ್ಯಾಮೆರಾ ಮೂಲಕ ಲೋ ಲೈಟ್ ಇರುವ ಜಾಗದಲ್ಲಿ ತೆಗೆದ ಫೋಟೋ ಕೂಡ ಅದ್ಭುವಾಗಿ ಮೂಡಿಬರುತ್ತಂತೆ. 6.67 ಇಂಚಿನ ಫುಲ್ ಹೆಚ್ಡಿ+ ಅಮೋಲೆಡ್ ಡಿಸ್ಪ್ಲೇ ಇರಲಿದೆ ಎಂಬ ಮಾತುಕೂಡ ಇದೆ.
MIUI 13 ಮೂಲಕ ಆಂಡ್ರಾಯ್ಡ್ 12 ನಲ್ಲಿ ಈ ಫೋನ್ ಕಾರ್ಯನಿರ್ವಹಿಸಲಿದೆಯಂತೆ. 12GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಇರಲಿದೆ. ಮೂಲಗಳ ಪ್ರಕಾರ ಇದು 5000mAh ನ ದೀರ್ಘ ಸಮಯ ಬಾಳಿಕೆ ಬರುವ ಬ್ಯಾಟರಿ ಹೊಂದಿರಲಿದೆ. ಇದಕ್ಕೆ ಪೂರಕವಾಗಿ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡ ಇರಲಿದೆ. ಇನ್ಡಿಸ್ಪ್ಲೇ ಫಿಂಗರ್ ಪ್ರಿಂಟ್ ಅಳವಡಿಸಲಾಗಿದೆಯಂತೆ. ಇದರ ಬೆಲೆ 65,000 ರೂ. ಇರಬಹುದೆಂದು ಅಂದಾಜಿಸಲಾಗಿದೆ.