Xiaomi 12T Pro: ಮಾರುಕಟ್ಟೆಗೆ ಬಂತು 200MP ಕ್ಯಾಮೆರಾದ ಎರಡನೇ ಸ್ಮಾರ್ಟ್​ಫೋನ್: ಶವೋಮಿಯಿಂದ ವಿನೂತನ ಪ್ರಯತ್ನ

Xiaomi 12T: ಶವೋಮಿ ಮಾರುಕಟ್ಟೆಗೆ ತನ್ನ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಮೊಟ್ಟ ಮೊದಲ ಸ್ಮಾರ್ಟ್​​ಫೋನ್ ಅನ್ನು ಪರಿಚಯಿಸಿದೆ. ಶವೋಮಿ 12T ಮತ್ತು ಶವೋಮಿ 12T ಪ್ರೊ ಎಂಬ ಎರಡು ಹೊಸ ಫೋನ್​ಗಳನ್ನು ಜಾಗತೀಕ ಮಾರುಕಟ್ಟೆಯಲ್ಲಿ ಬಿಡುಗಡೆ.

Xiaomi 12T Pro: ಮಾರುಕಟ್ಟೆಗೆ ಬಂತು 200MP ಕ್ಯಾಮೆರಾದ ಎರಡನೇ ಸ್ಮಾರ್ಟ್​ಫೋನ್: ಶವೋಮಿಯಿಂದ ವಿನೂತನ ಪ್ರಯತ್ನ
Xiaomi 12T and Xiaomi 12T Pro
Follow us
TV9 Web
| Updated By: Vinay Bhat

Updated on: Oct 06, 2022 | 12:53 PM

ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ಕ್ಯಾಮೆರಾ ಮೊಬೈಲ್​ಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೆ ಮೋಟೋ ಕಂಪನಿ ವಿಶ್ವದ ಮೊಟ್ಟ ಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಮೋಟೋರೊಲಾ ಎಡ್ಜ್ 30 ಅಲ್ಟ್ರಾ​ ಸ್ಮಾರ್ಟ್​​ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಶವೋಮಿ ಸರದಿ. ಚೀನಾ ಮೂಲದ ಪ್ರಸಿದ್ಧ ಟೆಕ್ ಸಂಸ್ಥೆ ಶವೋಮಿ ಮಾರುಕಟ್ಟೆಗೆ ತನ್ನ 200 ಮೆಗಾಫಿಕ್ಸೆಲ್ ಕ್ಯಾಮೆರಾದ (200MP Camera) ಮೊಟ್ಟ ಮೊದಲ ಸ್ಮಾರ್ಟ್​​ಫೋನ್ ಅನ್ನು ಪರಿಚಯಿಸಿದೆ. ಶವೋಮಿ 12T ಮತ್ತು ಶವೋಮಿ 12T ಪ್ರೊ (Xiaomi 12T Pro) ಎಂಬ ಎರಡು ಹೊಸ ಫೋನ್​ಗಳನ್ನು ಜಾಗತೀಕ ಮಾರುಕಟ್ಟೆಯಲ್ಲಿ ಬಿಡುಗಡೆ. ಇದರಲ್ಲಿ ಶವೋಮಿ 12T ಪ್ರೊ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿದೆ. ಅಷ್ಟೇ ಅಲ್ಲದೆ 120W ಹೈಪರ್‌ಚಾರ್ಜ್ ಸೌಲಭ್ಯ ನೀಡಲಾಗಿದ್ದು ಇದು ಕೆಲವೇ ನಿಮಿಷಗಳಲ್ಲಿ ಫುಲ್ ಚಾರ್ಜ್ ಮಾಡುತ್ತದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಪೂರ್ಣ ಮಾಹಿತಿ ಇಲ್ಲಿದೆ.

ಶವೋಮಿ 12T:

ಶವೋಮಿ 12T ಸ್ಮಾರ್ಟ್‌ಫೋನ್‌ 2712 x 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಕ್ರಿಸ್ಟಲ್ ರೆಸ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಬಲಿಷ್ಠವಾದ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಅಲ್ಟ್ರಾ SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸುತ್ತದೆ.

ಇದನ್ನೂ ಓದಿ
Image
Google Contact: ಸ್ಮಾರ್ಟ್​ಫೋನ್​ನಲ್ಲಿ ಗೂಗಲ್ ಅಕೌಂಟ್​ನಿಂದ ಕಾಂಟಾಕ್ಟ್​ಗಳನ್ನು ಬ್ಯಾಕಪ್ ಮತ್ತು ಮರಳಿ ಪಡೆಯುವುದು ಹೇಗೆ?
Image
Cryogenic Engine: ಎಚ್​ಎಎಲ್​ನಲ್ಲಿ ಕ್ರಯೊಜೆನಿಕ್ ಎಂಜಿನ್ ಉತ್ಪಾದನಾ ಘಟಕ ಆರಂಭ: ಹಲವು ವೈಶಿಷ್ಟ್ಯ
Image
Robot: ಮೆಕ್ಯಾನಿಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯುಧ ಪೂಜೆ ನೆರವೇರಿಸಲು ರೋಬೋಟ್‌, ಇಲ್ಲಿದೆ ವಿಡಿಯೋ
Image
SOVA Trojan; ಆಂಡ್ರಾಯ್ಡ್ ಬಳಕೆದಾರರಿಗೆ ಎಚ್ಚರಿಕೆ ನೀಡಿದ ಬ್ಯಾಂಕ್​ಗಳು, SOVA ಟ್ರೋಜನ್​ ವಂಚಕರಿಂದ ನಿಮ್ಮ ಹಣವನ್ನು ಉಳಿಸಿಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್‌ ನೀಡಲಾಗಿದೆ. ಜೊತೆಗೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ.

5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 120W ಹೈಪರ್‌ಚಾರ್ಜ್ ಸೌಲಭ್ಯದೊಂದಿಗೆ ಬರುತ್ತದೆ. ಇದು ಕೇವಲ 19 ನಿಮಿಷಗಳಲ್ಲಿ ಫುಲ್ ಚಾರ್ಜ್‌ ಮಾಡುತ್ತದೆ ಎಂದು ಕಂಪನಿ ಹೇಳಿದೆ. ಶವೋಮಿ 12T ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಯುರೋಪ್‌ನಲ್ಲಿ EUR 599, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 48,800 ರೂ. ಎನ್ನಬಹುದು.

ಶವೋಮಿ 12T ಪ್ರೊ:

ಶವೋಮಿ 12T ಪ್ರೊ ಸ್ಮಾರ್ಟ್‌ಫೋನ್‌ ಕೂಡ 2712 x 1220 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಕ್ರಿಸ್ಟಲ್ ರೆಸ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಬಲಿಷ್ಠವಾದ ಸ್ನಾಪ್‌ಡ್ರಾಗನ್ 8 ಜೆನ್‌ 1 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ ಬರೋಬ್ಬರಿ 200 ಮೆಗಾ ಪಿಕ್ಸೆಲ್ HP1 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಫುಲ್ ಹೆಚ್​ಡಿಯೊಂದಿಗೆ 8K ವಿಡಿಯೋ ರೆಕಾರ್ಡ್ ಮಾಡುತ್ತದೆ.

ಇದುಕೂಡ ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಹೈಪರ್‌ಚಾರ್ಜ್ ಸೌಲಭ್ಯದೊಂದಿಗೆ ಬರುತ್ತದೆ. ಇದು ಕೇವಲ 19 ನಿಮಿಷಗಳಲ್ಲಿ ಫುಲ್ ಚಾರ್ಜ್‌ ಮಾಡುತ್ತದೆ ಎಂದು ಕಂಪನಿ ಹೇಳಿದೆ. ಶವೋಮಿ 12T ಪ್ರೊ ಫೋನ್‌ 8GB RAM ಮತ್ತು 128GB ಸ್ಟೋರೇಜ್ ಆಯ್ಕೆಗೆ ಯುರೋಪ್‌ನಲ್ಲಿ EUR 749, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 60,500 ರೂ. ಎನ್ನಬಹುದು. ಕೆಲ ತಿಂಗಳ ಬಳಿಕ ಇದು ಭಾರತದಲ್ಲಿ ಬಿಡುಗಡೆ ಆಗಲಿದೆ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್