AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Xiaomi 12T Pro: ಮೋಟೋ ಬಳಿಕ ಶವೋಮಿ ಸರದಿ: ಬರುತ್ತಿದೆ 200MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್

ಕಳೆದ ವಾರವಷ್ಟೆ ಮೋಟೋ ಕಂಪನಿ ವಿಶ್ವದ ಮೊಟ್ಟ ಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಮೋಟೋರೊಲಾ ಎಡ್ಜ್ 30 ಅಲ್ಟ್ರಾ​ (Moto Edge 30 Ultra) ಸ್ಮಾರ್ಟ್​​ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಶವೋಮಿ ಸರದಿ.

Xiaomi 12T Pro: ಮೋಟೋ ಬಳಿಕ ಶವೋಮಿ ಸರದಿ: ಬರುತ್ತಿದೆ 200MP ಕ್ಯಾಮೆರಾದ ಮತ್ತೊಂದು ಸ್ಮಾರ್ಟ್​ಫೋನ್
Xiaomi 12T Pro
TV9 Web
| Updated By: Vinay Bhat|

Updated on:Sep 18, 2022 | 1:28 PM

Share

ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ಕ್ಯಾಮೆರಾ ಮೊಬೈಲ್​ಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಶವೋಮಿ ಮೊದಲ ಬಾರಿಗೆ ಅದುಕೂಡ ಅತ್ಯಂತ ಕಡಿಮೆ ಬೆಲೆಗೆ 108 ಮೆಗಾಫಿಕ್ಸೆಲ್ ಕ್ಯಾಮೆರಾ ಫೋನ್ ಪರಿಚಯಿಸಿದ್ದೇ ತಡ ಇತರೆ ಬಹುತೇಕ ಬ್ರ್ಯಾಂಡ್​ಗಳು ಮೊಬೈಲ್​​ನಲ್ಲಿನ ಕ್ಯಾಮೆರಾಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಮುಖ್ಯವಾಗಿ ಭಾರತದಲ್ಲಿ (Xiaomi) ಶವೋಮಿ ಕಂಪನಿಯ ಫೋನ್​ಗಳಿಗೆ ಹೆಚ್ಚು ಬೇಡಿಕೆ ಇದೆ. ಅದರಲ್ಲೂ 108 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನ್​ಗಳು ದೇಶದಲ್ಲಿ ಎಗ್ಗಿಲ್ಲದೆ ಮಾರಾಟ ಆಗುತ್ತಿದೆ. ಆದರೆ ಇನ್ನು ನೀವು ಈ 108 ಮೆಗಾಫಿಕ್ಸೆಲ್​ನ ಸ್ಮಾರ್ಟ್​​ಫೋನನ್ನು ಮರೆತು ಬಿಡಿ. ಯಾಕೆಂದರೆ ಈಗಾಗಲೇ ಮಾರುಕಟ್ಟೆಗೆ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಸ್ಮಾರ್ಟ್​​ಫೋನ್ ಲಗ್ಗೆಯಿಡುತ್ತಿದೆ. ಕಳೆದ ವಾರವಷ್ಟೆ ಮೋಟೋ ಕಂಪನಿ ವಿಶ್ವದ ಮೊಟ್ಟ ಮೊದಲ 200 ಮೆಗಾಫಿಕ್ಸೆಲ್ ಕ್ಯಾಮೆರಾ ಹೊಂದಿರುವ ಮೋಟೋರೊಲಾ ಎಡ್ಜ್ 30 ಅಲ್ಟ್ರಾ​ (Moto Edge 30 Ultra) ಸ್ಮಾರ್ಟ್​​ಫೋನ್ ಅನ್ನು ಬಿಡುಗಡೆ ಮಾಡಿತ್ತು. ಇದೀಗ ಶವೋಮಿ ಸರದಿ.

ಹೌದು, ಶವೋಮಿ ಇದೀಗ ಬರೋಬ್ಬರಿ 200 ಮೆಗಾಫಿಕ್ಸೆಲ್ ಕ್ಯಾಮೆರಾದ ಫೋನನ್ನು ಪರಿಚಯಿಸಲು ಮುಂದಾಗಿದೆ. ಶವೋಮಿ ಕಂಪನಿ ತನ್ನ ಶವೋಮಿ 12T ಪ್ರೊ ಫೋನನ್ನು 200 ಮೆಗಾಫಿಕ್ಸೆಲ್ ಕ್ಯಾಮೆರಾದೊಂದಿಗೆ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದೆ. ಪ್ರಸಿದ್ಧ ಟೆಕ್ ಮಾಹಿತಿಗಾರರೊಬ್ಬರು ಈ ಬಗ್ಗೆ ಖಚಿತ ಪಡಿಸಿದ್ದು, ಶವೋಮಿ 12T ಪ್ರೊ ಸ್ಮಾರ್ಟ್​​ಫೋನ್​ನ ಮುಖ್ಯ ಕ್ಯಾಮೆರಾ 200 ಮೆಗಾಫಿಕ್ಸೆಲ್​ನಿಂದ ಕೂಡಿರಲಿದೆ ಎಂದು ಹೇಳಿದ್ದಾರೆ. ಈ ಕ್ಯಾಮೆರಾ ಮೂಲಕ ಲೋ ಲೈಟ್ ಇರುವ ಜಾಗದಲ್ಲಿ ತೆಗೆದ ಫೋಟೋ ಕೂಡ ಅದ್ಭುವಾಗಿ ಮೂಡಿಬರುತ್ತಂತೆ.

ಶವೋಮಿ 12T ಪ್ರೊ ಸ್ಮಾರ್ಟ್​​ಫೋನ್​ನಲ್ಲಿ ಅತ್ಯಂತ ಬಲಿಷ್ಠವಾದ ಸ್ನಾಪ್​ಡ್ರಾಗನ್ 8+ Gen 1 ಪ್ರೊಸೆಸರ್ ಇರಲಿದೆಯಂತೆ. 200MP ಮೈನ್ ಕ್ಯಾಮೆರಾದೊಂದಿಗೆ 8 ಮೆಗಾಫಿಕ್ಸೆಲ್ ವೈಡ್ ಆ್ಯಂಗಲ್ ಕ್ಯಾಮೆರಾ ಹಾಗೂ 2 ಮೆಗಾಫಿಕ್ಸೆಲ್ ಮ್ಯಾಕ್ರೊ ಸೆನ್ಸಾರ್ ಕ್ಯಾಮೆರಾ ಅಳವಡಿಸಲಾಗಿದೆಂತೆ. 6.67 ಇಂಚಿನ ಫುಲ್ ಹೆಚ್​ಡಿ+ ಅಮೋಲೆಡ್ ಡಿಸ್​ಪ್ಲೇ ಇರಲಿದೆ ಎಂಬ ಮಾತುಕೂಡ ಇದೆ.

ಇದನ್ನೂ ಓದಿ
Image
Facebook: ಯಾರ ದಾಂಪತ್ಯ ಹೇಗಿದೆ ಎಂಬುದು ನಿಮಗೆ ಹೇಗೆ ತಿಳಿಯುತ್ತೆ? ನ್ಯಾಯಾಧೀಶರ ಹೇಳಿಕೆಗೆ ಫೇಸ್​ಬುಕ್ ಪ್ರತಿನಿಧಿ ತಬ್ಬಿಬ್ಬು
Image
12 ನಿಮಿಷಗಳಲ್ಲಿ ಶೇ. 50 ಚಾರ್ಜ್: ಭಾರತದಲ್ಲಿ ರಿಯಲ್‌ ಮಿ GT ನಿಯೋ 3T ಬಿಡುಗಡೆ
Image
Google Chrome: ಗೂಗಲ್ ಕ್ರೋಮ್ ಬಳಕೆದಾರರೇ ಎಚ್ಚರ..!
Image
SOVA Virus Alert: ಹೊಸ ಮೊಬೈಲ್ ಬ್ಯಾಂಕಿಂಗ್ ವೈರಸ್ ಹರಡುತ್ತಿದೆ, ಎಚ್ಚರಿಕೆ ನೀಡಿದ ಸರ್ಕಾರ

MIUI 13 ಮೂಲಕ ಆಂಡ್ರಾಯ್ಡ್ 12 ನಲ್ಲಿ ಈ ಫೋನ್ ಕಾರ್ಯನಿರ್ವಹಿಸಲಿದೆಯಂತೆ. 12GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯ ಇರಲಿದೆ. ಮೂಲಗಳ ಪ್ರಕಾರ ಇದು 5000mAh ನ ದೀರ್ಘ ಸಮಯ ಬಾಳಿಕೆ ಬರುವ ಬ್ಯಾಟರಿ ಹೊಂದಿರಲಿದೆ. ಇದಕ್ಕೆ ಪೂರಕವಾಗಿ 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡ ಇರಲಿದೆ. ಇನ್​ಡಿಸ್​ಪ್ಲೇ ಫಿಂಗರ್ ಪ್ರಿಂಟ್ ಅಳವಡಿಸಲಾಗಿದೆಯಂತೆ. ಇದರ ಬೆಲೆ ಎಷ್ಟಿರಬಹುದು ಎಂಬ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

Published On - 1:28 pm, Sun, 18 September 22