AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Xiaomi 13 Series: ಬಹುನಿರೀಕ್ಷಿತ ಶವೋಮಿ 13 ಸರಣಿ ಸ್ಮಾರ್ಟ್​ಫೋನ್ ಲಾಂಚ್​ಗೆ ದಿನಾಂಕ ಫಿಕ್ಸ್: ಏನು ಫೀಚರ್ಸ್?, ಬೆಲೆ?

Xiaomi 13 and Xiaomi 13 Pro: ಶವೋಮಿ 13 ಸರಣಿ ಮಾರುಕಟ್ಟೆಗೆ ಅಪ್ಪಳಿಸಲು ತಯಾರಾಗಿದೆ. MIUI 14 ಔಟ್-ಆಫ್-ಬಾಕ್ಸ್‌ನೊಂದಿಗೆ ಬರಲಿರುವ ಈ ನೂತನ ಸರಣಿಯಲ್ಲಿ ಶವೋಮಿ 13 ಮತ್ತು ಶವೋಮಿ 13 ಪ್ರೊ ಎಂಬ ಎರಡು ಸ್ಮಾರ್ಟ್​ಫೋನ್​ಗಳು ಇರಲಿದೆ.

Xiaomi 13 Series: ಬಹುನಿರೀಕ್ಷಿತ ಶವೋಮಿ 13 ಸರಣಿ ಸ್ಮಾರ್ಟ್​ಫೋನ್ ಲಾಂಚ್​ಗೆ ದಿನಾಂಕ ಫಿಕ್ಸ್: ಏನು ಫೀಚರ್ಸ್?, ಬೆಲೆ?
Xiaomi 13 Series
TV9 Web
| Edited By: |

Updated on: Nov 29, 2022 | 2:04 PM

Share

ಸ್ಮಾರ್ಟ್​​ಫೋನ್ (Smartphone) ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಚೀನಾ ಮೂಲದ ಶವೋಮಿ ಕಂಪನಿ ಅಪರೂಪಕ್ಕೆ ಮೊಬೈಲ್​ಗಳನ್ನು ಬಿಡುಗಡೆ ಮಾಡುತ್ತಿದೆ. ಕಳೆದ ವರ್ಷಾಂತ್ಯದಲ್ಲಿ ಶವೋಮಿ (Xiaomi) ತನ್ನ ಬ್ರ್ಯಾಂಡ್​ನಡಿಯಲ್ಲಿ ಶವೋಮಿ 12 ಸರಣಿಯನ್ನು ಅನಾವರಣ ಮಾಡಿ ಧೂಳೆಬ್ಬಿಸಿತ್ತು. ಭಾರತದಲ್ಲೂ ಈ ಸ್ಮಾರ್ಟ್​ಫೋನ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ಈ ಸರಣಿಯ ಮುಂದುವರೆಗ ಭಾಗವಾಗಿ ಶವೋಮಿ 13 ಸರಣಿ (Xiaomi 13 Series) ಮಾರುಕಟ್ಟೆಗೆ ಅಪ್ಪಳಿಸಲು ತಯಾರಾಗಿದೆ. MIUI 14 ಔಟ್-ಆಫ್-ಬಾಕ್ಸ್‌ನೊಂದಿಗೆ ಬರಲಿರುವ ಈ ನೂತನ ಸರಣಿಯಲ್ಲಿ ಶವೋಮಿ 13 ಮತ್ತು ಶವೋಮಿ 13 ಪ್ರೊ ಎಂಬ ಎರಡು ಸ್ಮಾರ್ಟ್​ಫೋನ್​ಗಳು ಇರಲಿದೆ ಎಂದು ಹೇಳಲಾಗಿದೆ. ಹುಬ್ಬೇರಿಸುವಂತಹ ಫೀಚರ್​ಗಳು ಇದರಲ್ಲಿ ಅಡಕವಾಗಿದ್ದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿರುವ ಸಾಧ್ಯತೆ ಇದೆ. ಜೊತೆಗೆ ಆಕರ್ಷಕ ಕ್ಯಾಮೆರಾ ಕೂಡ ಇರಲಿದೆ. ಶವೋಮಿ 13 ಸರಣಿ ಡಿಸೆಂಬರ್ 1 ರಂದು ಚೀನಾದಲ್ಲಿ ಬಿಡುಗಡೆ ಆಗಲಿದೆ. ಹೊಸ ವರ್ಷಕ್ಕೆ ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ.

ಈ ಸ್ಮಾರ್ಟ್​​ಫೋನ್​ಗಳ ಫೀಚರ್ಸ್ ಬಗ್ಗೆ ಖಚಿತ ಮಾಹಿತಿ ಹೊರಬಿದ್ದಿಲ್ಲ. ಆದರೆ, ಮೂಲಗಳ ಪ್ರಕಾರ ಶವೋಮಿ 13 6.2 ಇಂಚಿನ ಅಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿರಬಹುದು. ಡಿಸ್‌ಪ್ಲೇ 120Hz ರಿಫ್ರೆಶ್‌ ರೆಟ್‌ ಮತ್ತು ಡಾಲ್ಬಿ ವಿಷನ್ ಬೆಂಬಲವನ್ನು ಪಡೆದಿದೆ. ಇದರಲ್ಲಿ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 ಆಕ್ಟಾ-ಕೋರ್‌ ಪ್ರೊಸೆಸರ್‌ ಇರುವುದು ಖಚಿತವಾಗಿದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. 12GB RAM-256GB, 8GB RAM-128GB ಮತ್ತು 512GB ಸ್ಟೋರೇಜ್‌ ಆಯ್ಕೆಯೊಂದಿಗೆ ಖರೀದಿಗೆ ಸಿಗಲಿದೆ.

Fact Check ಸ್ನಾಪ್​​ಚಾಟ್​​ ಖರೀದಿಸಲು ಎಲಾನ್​​ ಮಸ್ಕ್​​​ ಚಿಂತನೆ ಎಂಬ ವೈರಲ್ ಸ್ಕ್ರೀನ್​​ಶಾಟ್ ಫೇಕ್

ಇದನ್ನೂ ಓದಿ
Image
ವಾಟ್ಸ್​ಆ್ಯಪ್​ನಿಂದ ಬಂತು ಅಪ್ಡೇಟ್: ಹೇಗೆ ಉಪಯೋಗಿಸುವುದು?
Image
ದೇಶದಾದ್ಯಂತ ಜಿಯೋ ನೆಟ್​ವರ್ಕ್ ಡೌನ್: ಕಾಲ್ ಹೋಗ್ತಿಲ್ಲ
Image
YouTube Ambient Mode: ಏನಿದು ಯೂಟ್ಯೂಬ್ ಆಂಬಿಯೆಂಟ್ ಮೋಡ್?: ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
Image
Tech Tips: ಗೂಗಲ್​ನಲ್ಲಿ ನಿಮ್ಮ ಫೋಟೋ ಕಾಣಿಸಬೇಕೇ?: ಹಾಗಿದ್ರೆ ಈ ಟ್ರಿಕ್ ಫಾಲೋ ಮಾಡಿ

ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX800 ಸೆನ್ಸಾರ್‌, ಎರಡನೇ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ ಬಗ್ಗೆ ಮಾಹಿತಿಯಿಲ್ಲ. 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಇರಬಹುದು. 120W ಫಾಸ್ಟ್ ಚಾರ್ಜರ್ ಸೌಲಭ್ಯದೊಂದಿಗೆ ಬರಲಿದೆ. ರಿವರ್ಸ್ ಚಾರ್ಜಿಂಗ್ ಮತ್ತು ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಕೂಡ ನೀಡಿದರೆ ಅಚ್ಚರಿ ಪಡಬೇಕಿಲ್ಲ.

ಇತ್ತ ಶವೋಮಿ 13 ಪ್ರೊ 6.7 ಇಂಚಿನ ಸ್ಯಾಮ್‌ಸಂಗ್ E6 ಅಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿರುವ ಸಾಧ್ಯತೆಯಿದೆ. ಇದುಕೂಡ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 ಆಕ್ಟಾ-ಕೋರ್‌ ಪ್ರೊಸೆಸರ್‌ ವೇಗವನ್ನು ಹೊಂದಿದೆ. ಆಂಡ್ರಾಯ್ಡ್ 13 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕಾರ್ಯನಿರ್ವಹಿಸುತ್ತದೆ.

Flipkart Black Friday Sale: 20,000 ರೂ. ಒಳಗೆ ಸಿಗುತ್ತಿದೆ ಈ ಬೊಂಬಾಟ್ ಸ್ಮಾರ್ಟ್​ಫೋನ್​ಗಳು

ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೋನಿ IMX989 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿರಬಹುದು. ಇದಲ್ಲದೆ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಶವೋಮಿ 13 ಪ್ರೊ ಬ್ಯಾಟರಿ 4,800mAh ಸಾಮರ್ಥ್ಯ ಇರಬಹುದು. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಬಹುದು ಎಂದು ನಿರೀಕ್ಷಿಸಲಾಗಿದೆ. ಜತೆಗೆ ರಿವರ್ಸ್ ಚಾರ್ಜಿಂಗ್ ಮತ್ತು ವೈರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಬೆಂಬಲ ಪಡೆದಿರುವ ಜೊತೆತೆ ವೈಫೈ, ಬ್ಲೂಟೂತ್ 5.2, USB ಟೈಪ್-C ಪೋರ್ಟ್‌ ಅನ್ನು ಬೆಂಬಲಿಸುತ್ತಿದೆ. ಈ ಎರಡೂ ಫೋನುಗಳ ಬೆಲೆ ಇನ್ನಷ್ಟು ಬಹಿರಂಗವಾಗಬೇಕಿದೆ.

ಹೆಚ್ಚಿನ ಟೆಕ್ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?