Xiaomi 13: ಭಾರತಕ್ಕೆ ಬರುತ್ತಿದೆ ವಿದೇಶದಲ್ಲಿ ಧೂಳೆಬ್ಬಿಸಿದ ಶವೋಮಿ 13 ಸರಣಿ: ಇದರ ಫೀಚರ್ಸ್ ಕೇಳಿದ್ರೆ ದಂಗಾಗ್ತೀರ
ಶವೋಮಿ 12 ಸರಣಿಯ ಮುಂದುವರೆಗ ಭಾಗವಾಗಿರುವ ಶವೋಮಿ 13 ಸರಣಿ (Xiaomi 13 Series) ಸದ್ಯದಲ್ಲೇ ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಲಿದೆ. ಈ ನೂತನ ಸರಣಿಯಲ್ಲಿ ಶವೋಮಿ 13 ಮತ್ತು ಶವೋಮಿ 13 ಪ್ರೊ ಎಂಬ ಎರಡು ಸ್ಮಾರ್ಟ್ಫೋನ್ಗಳು ಅನಾವರಣವಾಗಲಿವೆ.
ಸ್ಮಾರ್ಟ್ಫೋನ್ (Smartphone) ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ಚೀನಾ ಮೂಲದ ಶವೋಮಿ ಕಂಪನಿ ಅಪರೂಪಕ್ಕೆ ಮೊಬೈಲ್ಗಳನ್ನು ಬಿಡುಗಡೆ ಮಾಡುತ್ತಿದೆ. ಈ ವರ್ಷದ ಆರಂಭದಲ್ಲಿ ಶವೋಮಿ (Xiaomi) ತನ್ನ ಬ್ರ್ಯಾಂಡ್ನಡಿಯಲ್ಲಿ ಶವೋಮಿ 13 ಸರಣಿಯನ್ನು ವಿದೇಶದಲ್ಲಿ ಅನಾವರಣ ಮಾಡಿ ಧೂಳೆಬ್ಬಿಸಿತ್ತು. ಇದೀಗ ಭಾರತದಲ್ಲಿ ಈ ಸ್ಮಾರ್ಟ್ಫೋನ್ ಸದ್ದು ಮಾಡಲು ಬರುತ್ತಿದೆ. ಶವೋಮಿ 12 ಸರಣಿಯ ಮುಂದುವರೆಗ ಭಾಗವಾಗಿರುವ ಶವೋಮಿ 13 ಸರಣಿ (Xiaomi 13 Series) ಸದ್ಯದಲ್ಲೇ ಭಾರತೀಯ ಮಾರುಕಟ್ಟೆಗೆ ಅಪ್ಪಳಿಸಲಿದೆ. ಈ ನೂತನ ಸರಣಿಯಲ್ಲಿ ಶವೋಮಿ 13 ಮತ್ತು ಶವೋಮಿ 13 ಪ್ರೊ ಎಂಬ ಎರಡು ಸ್ಮಾರ್ಟ್ಫೋನ್ಗಳು ಅನಾವರಣವಾಗಲಿವೆ. ಈ ಎರಡೂ ಫೋನ್ಗಳಲ್ಲಿ ಹುಬ್ಬೇರಿಸುವಂತಹ ಫೀಚರ್ಗಳು ಅಡಕವಾಗಿದೆ.
ಶವೋಮಿ 13:
ಶವೋಮಿ 13 ಸ್ಮಾರ್ಟ್ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.36 ಇಂಚಿನ ಫುಲ್ ಹೆಚ್ಡಿ ಪ್ಲಸ್ OLED ಡಿಸ್ ಪ್ಲೇ ಹೊಂದಿದೆ. ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಪಡೆದುಕೊಂಡಿದ್ದು, ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 Gen 2 SoC ಪ್ರೊಸೆಸರ್ ಅಳವಡಿಸಲಾಗಿದೆ. ಹಾಗೆಯೇ 12GB RAM ಮತ್ತು 512GB ಇನ್ಬಿಲ್ಟ್ ಸ್ಟೋರೇಜ್ ಪಡೆದುಕೊಂಡಿದೆ.
ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ಇದು ಲೈಕಾ-ಕ್ಯಾಮೆರಾ ಲೆನ್ಸ್ನ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಅಳವಡಿಸಲಾಗಿದೆ. 4500mAh ಸಾಮರ್ಥ್ಯದ ಬ್ಯಾಟರಿಗೆ 67W ವೈರ್ಡ್ ಮತ್ತು 50W ವೈರ್ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.
Best Smartphones: 10,000 ರೂ. ಒಳಗಿನ ಹೊಚ್ಚ ಹೊಸ ಬೊಂಬಾಟ್ ಸ್ಮಾರ್ಟ್ಫೋನ್ ಬೇಕೇ?: ಇಲ್ಲಿದೆ ನೋಡಿ
ಶವೋಮಿ 13 ಪ್ರೊ:
ಶವೋಮಿ 13 ಪ್ರೊ ಸ್ಮಾರ್ಟ್ಫೋನ್ 6.7-ಇಂಚಿನ LTPO OLED ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ನಿಂದ ಕೂಡಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಪಡೆದಿದೆ. ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8 Gen 2 SoC ಪ್ರೊಸೆಸರ್ ಹೊಂದಿದೆ. 12GB RAM ಮತ್ತು 512GB ಇನ್ಬಿಲ್ಟ್ ಸ್ಟೋರೇಜ್ ಪಡೆದುಕೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ಅಪ್ ಹೊಂದಿದೆ. ಇದರಲ್ಲಿರುವ ಮೂರೂ ಕ್ಯಾಮೆರಾಗಳು 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. 4820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೈರ್ಡ್ ಮತ್ತು 50W ವೈರ್ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ.
ಸದ್ಯಕ್ಕೆ ಈ ಎರಡೂ ಸ್ಮಾರ್ಟ್ಫೋನ್ಗಳು ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿವೆ. ಮುಂದಿನ ವರ್ಷದ ಆರಂಭದಲ್ಲಿ ಭಾರತಕ್ಕೂ ಕಾಲಿಡುವ ನಿರೀಕ್ಷೆಯಿದೆ. ಚೀನಾದಲ್ಲಿ ಶವೋಮಿ 13 8GM RAM ಮತ್ತು 128GB ಸ್ಟೋರೇಜ್ ಮಾಡೆಲ್ ಬೆಲೆ CNY 3,999, ಅಂದರೆ ಭಾರತದಲ್ಲಿ ಸುಮಾರು 47,300ರೂ. ಎನ್ನಬಹುದು. ಹಾಗೆಯೇ 12GB RAM ಮತ್ತು 512GB ಸಂಗ್ರಹದ ಬೆಲೆ CNY 4,999 (ಸುಮಾರು 60,000ರೂ.). ಇನ್ನು ಶವೋಮಿ 13 ಪ್ರೊ 8GB RAM ಮತ್ತು 128GB ಸ್ಟೋರೇಜ್ ಆವೃತ್ತಿಗೆ CNY 4,999 (ಸುಮಾರು 60,000ರೂ.), 12GB RAM ಮತ್ತು 512GB ಸ್ಟೋರೇಜ್ ಮಾದರಿಯ ಬೆಲೆ CNY 6,299 (ಸುಮಾರು 74,500ರೂ) ಆಗಿದೆ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ