Redmi 10A: ಬಿಡುಗಡೆ ಆಯಿತು ರೆಡ್ಮಿಯ ಹೊಸ ಸ್ಮಾರ್ಟ್‌ಫೋನ್: ಈ ಬಾರಿ ಏನು ವಿಶೇಷತೆ?
ಶವೋಮಿ ಕಂಪನಿಯು ಜಾಗತೀಕ ಮಾರುಕಟ್ಟೆಯಲ್ಲಿ ತನ್ನ ಬಹುನಿರೀಕ್ಷಿತ ರೆಡ್ಮಿ 10A ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಹಾಗಂತ ಇದರ ಬೆಲೆ ದುಬಾರಿಯೇನಿಲ್ಲ. ಅತ್ಯಂತ ಕಡಿಮೆ ಬೆಲೆಯ ಬಜೆಟ್ ಫೋನ್ ಇದಾಗಿದೆ.
ವಿಶ್ವದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮೊಬೈಲ್ಗಳನ್ನು ಬಿಡುಗಡೆ ಮಾಡಿ ನಂಬರ್ ಒನ್ ಸ್ಥಾನದಲ್ಲಿರುವ ಶವೋಮಿ (Xiaomi) ಕಂಪನಿ ಇದೀಗ ತನ್ನ ರೆಡ್ಮಿ 10 ಸರಣಿಯಲ್ಲಿ ಮತ್ತೆ ಧೂಳೆಬ್ಬಿಸಲು ಬಂದಿದೆ. ಕಂಪನಿಯು ಜಾಗತೀಕ ಮಾರುಕಟ್ಟೆಯಲ್ಲಿ ತನ್ನ ಬಹುನಿರೀಕ್ಷಿತ ರೆಡ್ಮಿ 10ಎ (Redmi 10A) ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಆಕರ್ಷಕ ಫೀಚರ್ಗಳನ್ನು ಪಡೆದುಕೊಂಡಿರುವ ಈ ಫೋನ್ನಲ್ಲಿ 5000mAh ಬ್ಯಾಟರಿ ಬ್ಯಾಕ್‌ಅಪ್, ಮೀಡಿಯಾ ಟೆಕ್ ಹಿಲಿಯೋ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ, ಫಿಂಗರ್‌ಸೆನ್ಸಾರ್ ಸೇರಿದಂತೆ ಅನೇಕ ಆಯ್ಕೆಗಳಿವೆ. ಹಾಗಂತ ಇದರ ಬೆಲೆ ದುಬಾರಿಯೇನಿಲ್ಲ. ಅತ್ಯಂತ ಕಡಿಮೆ ಬೆಲೆಯ ಬಜೆಟ್ ಫೋನ್ ಇದಾಗಿದೆ. ಸದ್ಯಕ್ಕೆ ವಿದೇಶದಲ್ಲಿ ಬಿಡುಗಡೆ ಆಗಿರುವ ರೆಡ್ಮಿ 10A ಕೆಲವೇ ತಿಂಗಳುಗಳಲ್ಲಿ ಭಾರತಕ್ಕೂ ಕಾಲಿಡಲಿದೆ. ಹಾಗಾದ್ರೆ ಈ ಸ್ಮಾರ್ಟ್ಫೋನ್ನ (Smartphone) ಬೆಲೆ ಎಷ್ಟು?, ಏನು ವಿಶೇಷತೆ ಎಂಬ ಬಗೆಗಿನ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ.
ರೆಡ್ಮಿ 10A ಸ್ಮಾರ್ಟ್‌ಫೋನ್ ಒಟ್ಟು ಮೂರು ಸ್ಟೋರೆಜ್ ಮಾದರಿಯಲ್ಲಿ ಬಿಡುಗಡೆ ಆಗಿದೆ. ಅವುಗಳು 4GB + 64GB, 4GB + 128GB, ಮತ್ತು 6GB + 128GB. ಈ ಪೈಕಿ ಇದರ 4GB RAM ಮತ್ತು 64GB ಸ್ಟೋರೆಜ್ ರೂಪಾಂತರಕ್ಕೆ RMB 649, ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 7,740 ರೂ. ಎನ್ನಬಹುದು. 4GB RAM ಮತ್ತು 128GB ಮತ್ತು 6GB RAM ಮತ್ತು 128GB ಸ್ಟೋರೆಜ್ ಸಾಮರ್ಥ್ಯಕ್ಕೆ ಕ್ರಮವಾಗಿ RMB 799 (ಅಂದಾಜು ರೂ. 9,500) ಮತ್ತು RMB 899 (ಅಂದಾಜು ರೂ. 10,720) ನಿಗದಿ ಮಾಡಲಾಗಿದೆ. ಈ ಫೋನಿನ ಹಿಂಭಾಗದಲ್ಲಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಜೋಡಿಸಲಾಗಿದ್ದು 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಸಹ ನೀಡಲಾಗಿದೆ.
ಇನ್ನು ರೆಡ್ಮಿ 10A ಸ್ಮಾರ್ಟ್ಫೋನ್ನ ವಿಶೇಷತೆ ಬಗ್ಗೆ ನೋಡುವುದಾದರೆ ಇದು 1600 × 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಫುಲ್ ಹೆಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಮೀಡಿಯಾ ಟೆಕ್ ಹಿಲಿಯೋ G25 ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದಕ್ಕೆ ಪೂರಕವಾಗಿ ಇತ್ತೀಚಿನ ಆಂಡ್ರಾಯ್ಡ್ ಓಎಸ್ ಸಪೋರ್ಟ್ ಪಡೆದಿದೆ.
ವಿಶೇಷವಾಗಿ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಜೊತೆಗೆ ಎಲ್‌ಇಡಿ ಫ್ಲ್ಯಾಶ್ ಸೌಲಭ್ಯ ಸಹ ನೀಡಲಾಗಿದೆ. ಇವೆಲ್ಲದರ ಜೊತೆಗೆ ದೀರ್ಘ ಸಮಯ ಬಾಳಿಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಇದರಲ್ಲಿದೆ. ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸಪೋರ್ಟ್ ಸಹ ಪಡೆದಿದೆ. ಇದು ಚಾರ್ಜಿಂಗ್ ಮತ್ತು ಡೇಟಾ ವರ್ಗಾವಣೆಗಾಗಿ ಮೈಕ್ರೋ-ಯುಎಸ್‌ಬಿ ಪೋರ್ಟ್ ಅನ್ನು ಹೊಂದಿದೆ.
IPL 2022: ಜಿಯೋ ದಿಂದ ಡಿಸ್ನಿ+ ಹಾಟ್ಸ್ಟಾರ್ ಚಂದಾದಾರಿಕೆಯ ಬಂಪರ್ ಪ್ಲಾನ್ ಬಿಡುಗಡೆ: ಇಲ್ಲಿದೆ ಮಾಹಿತಿ
Oppo K10: ಕಡಿಮೆ ಬೆಲೆ, ಬಂಪರ್ ಫೀಚರ್ಸ್: ಇಂದಿನಿಂದ ಒಪ್ಪೋ K10 ಖರೀದಿಗೆ ಲಭ್ಯ: ಈ ಫೋನ್ ಮಿಸ್ ಮಾಡ್ಬೇಡಿ
Published On - 2:07 pm, Tue, 29 March 22