Redmi 12C: ಶವೋಮಿಯಿಂದ ಅತಿ ಕಡಿಮೆ ಬೆಲೆಗೆ ರೆಡ್ಮಿ 12C ಸ್ಮಾರ್ಟ್‌ಫೋನ್ ಬಿಡುಗಡೆ: ಎಷ್ಟು ರೂ. ಗೊತ್ತೇ?
ಹೆಚ್ಚಾಗಿ ಬಜೆಟ್ ಬೆಲೆಗೆ ರೆಡ್ಮಿ ಫೋನನ್ನು ರಿಲೀಸ್ ಮಾಡುವ ಶವೋಮಿ ಇದೀಗ ಹೊಸ ರೆಡ್ಮಿ 12ಸಿ (Redmi 12C) ಎಂಬ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದೆ.
ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿ ತನ್ನ ರೆಡ್ಮಿ ಬ್ರ್ಯಾಂಡ್ನಡಿಯಲ್ಲಿ ಹೊಸ ಸ್ಮಾರ್ಟ್ಫೋನ್ಗಳನ್ನು ಘೋಷಣೆ ಮಾಡುತ್ತಿದ್ದು ಅನೇಕ ಮೊಬೈಲ್ಗಳು ಬಿಡುಗಡೆಗೆ ತಯಾರಾಗಿ ನಿಂತಿದೆ. ಹೆಚ್ಚಾಗಿ ಬಜೆಟ್ ಬೆಲೆಗೆ ರೆಡ್ಮಿ ಫೋನನ್ನು ರಿಲೀಸ್ ಮಾಡುವ ಶವೋಮಿ ಇದೀಗ ಹೊಸ ರೆಡ್ಮಿ 12ಸಿ (Redmi 12C) ಎಂಬ ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದೆ. ಹೀಗಿದ್ದರೂ ಅತ್ಯುತ್ತಮ ಬ್ಯಾಟರಿ, ಪ್ರೊಸೆಸರ್, ಕ್ಯಾಮೆರಾದಿಂದ ಆವೃತ್ತವಾಗಿದೆ. ಗ್ಲೋಬಲ್ ವೇರಿಯೆಂಟ್ ಆಯ್ಕೆಯು ಮೂಲಕ ಜಾಗತಿಕ ಮಾರುಕಟ್ಟೆಯಲ್ಲಿ ಲಾಂಚ್ ಆರುವ ಈ ಫೋನಿನ (Phone) ಬೆಲೆ ಎಷ್ಟು?, ಏನಿದೆ ಫೀಚರ್ಸ್ ಎಂಬುದನ್ನು ನೋಡೋಣ.
- ನೂತನ ರೆಡ್ಮಿ 12C ಸ್ಮಾರ್ಟ್‌ಫೋನ್ ಸದ್ಯಕ್ಕೆ ಒಂದು ಮಾದರಿಯಲ್ಲಷ್ಟೆ ಇಂಡೋನೇಷ್ಯಾದಲ್ಲಿ ಬಿಡುಗಡೆ ಆಗಿದೆ. ಅಲ್ಲಿ ಇದರ 4GB RAM + 128GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆಗೆ IDR 1,599,000 ನಿಗದಿ ಮಾಡಲಾಗಿದೆ. ಅದೇ ಭಾರತದಲ್ಲಿ ಇದರ ಬೆಲೆ ಅಂದಾಜು 8,500ರೂ. ಇರಬಹುದು.
- ಈ ಸ್ಮಾರ್ಟ್‌ಫೋನ್ ಶಾಡೋ ಬ್ಲಾಕ್, ಸೀ ಬ್ಲೂ, ಮಿಂಟ್ ಗ್ರೀನ್ ಮತ್ತು ಲ್ಯಾವೆಂಡರ್ ಕಲರ್ ಆಯ್ಕೆಗಳಲ್ಲಿ ಬರಲಿದೆ. ಈ ತಿಂಗಳ ಅಂತ್ಯದ ಹೊತ್ತಿಗೆ ರೆಡ್ಮಿ 12C ಭಾರತದಲ್ಲೂ ಅನಾವರಣಗೊಳ್ಳುವ ನಿರೀಕ್ಷೆಯಿದೆ.
- ಇದು 1650 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.71 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ 20.6:9 ರಚನೆಯ ಅನುಪಾತವನ್ನು ಒಳಗೊಂಡಿದೆ.
- ಬೆಲೆಗೆ ತಕ್ಕಂತೆ ಮಿಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 12 ಆಧಾರಿತ MIUI 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.
- ವಿಶೇಷ ಎಂದರೆ ಇದು ಎರಡು ವರ್ಷಗಳ ಆಂಡ್ರಾಯ್ಡ್ ಅಪ್ಡೇಟ್ಸ್ ಮತ್ತು ಮೂರು ವರ್ಷಗಳ ಸೆಕ್ಯುರಿಟಿ ಅಪ್ಡೇಟ್ ಅನ್ನು ಪಡೆದಿದೆ. ಹಾಗೆಯೇ 4GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
- ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಿಂದ ಕೂಡಿದೆ.
- 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಅಳವಡಿಸಲಾಗಿದೆ. ರಿಯರ್ ಕ್ಯಾಮೆರಾ ಮೂಲಕ ಪ್ರತಿ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ (fps) 1080p ವರೆಗಿನ ವಿಡಿಯೋ ರೆಕಾರ್ಡ್ ಮಾಡಬಹುದು ಎಂದು ಕಂಪನಿ ಹೇಳಿದೆ.
- ರೆಡ್ಮಿ 12C ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಬೆಂಬಲಿಸುತ್ತದೆ.
- ಕನೆಕ್ಟಿವಿಟಿ ಆಯ್ಕೆಗಳಲ್ಲಿ AI ಕ್ರಿಯೇಟ್ ಅನ್‌ಲಾಕ್, ಡ್ಯುಯಲ್ ಸಿಮ್ ಬೆಂಬಲ, ವೈ-ಫೈ, ಬ್ಲೂಟೂತ್ 5.1, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಆಡಿಯೊ ಜಾಕ್ ಅನ್ನು ಬೆಂಬಲಿಸಲಿದೆ. 5ಜಿ ಬೆಂಬಲ ಪಡೆದುಕೊಂಡಿಲ್ಲ.
ಇದನ್ನೂ ಓದಿ
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:17 am, Sat, 11 March 23