Redmi A2: ಬೆಲೆ ಕೇವಲ 7,499 ರೂ.: ಇಂದಿನಿಂದ ರೆಡ್ಮಿ A2 ಫೋನ್ ಹೊಸ ವೇರಿಯಂಟ್​ನಲ್ಲಿ ಲಭ್ಯ

ರೆಡ್ಮಿ ತನ್ನ ಎ ಸರಣಿಯಲ್ಲಿ ಬಜೆಟ್ ಬೆಲೆಗೆ ಕಳೆದ ತಿಂಗಳು ಬಿಡುಗಡೆ ಮಾಡಿದ ರೆಡ್ಮಿ ಎ2 (Redmi A2) ಸ್ಮಾರ್ಟ್‌ಫೋನ್‌ ಇದೀಗ ಹೊಸ ಸ್ಟೋರೇಜ್ ಆಯ್ಕೆಯಲ್ಲಿ ಸಿಗುತ್ತಿದೆ.

Redmi A2: ಬೆಲೆ ಕೇವಲ 7,499 ರೂ.: ಇಂದಿನಿಂದ ರೆಡ್ಮಿ A2 ಫೋನ್ ಹೊಸ ವೇರಿಯಂಟ್​ನಲ್ಲಿ ಲಭ್ಯ
Redmi A2
Follow us
|

Updated on: Jun 20, 2023 | 6:55 AM

ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಕಂಪನಿ ಸ್ಮಾರ್ಟ್​ಫೋನ್ ಕ್ಷೇತ್ರದಲ್ಲಿ ತನ್ನ ನಂಬರ್ ಒನ್ ಸ್ಥಾನವನ್ನು ಭದ್ರ ಪಡಿಸಿಕೊಳ್ಳಲು ಇದೀದ ಒಂದರ ಹಿಂದೆ ಒಂದರಂತೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಅಥವಾ ಈಗಾಗಲೇ ರಿಲೀಸ್ ಆಗಿರುವ ಫೋನ್​ಗಳ ಹೊಸ ವೇರಿಯೆಂಟ್ ಅನಾವರಣ ಮಾಡುತ್ತಿದೆ. ಅದರಂತೆ ಇದೀಗ ರೆಡ್ಮಿ ತನ್ನ ಎ ಸರಣಿಯಲ್ಲಿ ಬಜೆಟ್ ಬೆಲೆಗೆ ಕಳೆದ ತಿಂಗಳು ಬಿಡುಗಡೆ ಮಾಡಿದ ರೆಡ್ಮಿ ಎ2 (Redmi A2) ಸ್ಮಾರ್ಟ್‌ಫೋನ್‌ ಇದೀಗ ಹೊಸ ಸ್ಟೋರೇಜ್ ಆಯ್ಕೆಯಲ್ಲಿ ಸಿಗುತ್ತಿದೆ. ಇಂದು ರೆಡ್ಮಿ A2 ಫೋನಿನ 64GB ಇ-ಕಾಮರ್ಸ್‌ ತಾಣ ಅಮೆಜಾನ್ ಮತ್ತು ಅಧಿಕೃತ Mi.com ತಾಣಗಳಲ್ಲಿ ಮಾರಾಟ ಕಾಣಲಿದೆ.

ಬೆಲೆ ಎಷ್ಟು?:

ಇದೀಗ ರೆಡ್ಮಿA2 ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ಸಿಗುತ್ತಿದೆ ಇದರ 2GB + 32GB ಆಯ್ಕೆಗೆ 5,999 ರೂ., 2GB + 64GBಗೆ 6,499 ರೂ. ಮತ್ತು 4GB + 64GB ಆಯ್ಕೆಗೆ 7,499 ರೂ. ನಿಗದಿ ಮಾಡಲಾಗಿದೆ. ಈ ಫೋನ್ ಅಮೆಜಾನ್‌,ಮಿ.ಕಾಮ್‌, ಮೀ ಹೋಮ್ಸ್‌ ಮತ್ತು ಆದ್ಯತೆಯ ಪಾಲುದಾರ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಇದನ್ನೂ ಓದಿ
Image
Galaxy A73: 108MP ಕ್ಯಾಮೆರಾದ ಗ್ಯಾಲಕ್ಸಿ A73 5G ಸ್ಮಾರ್ಟ್‌ಫೋನ್‌ ಮೇಲೆ 10,000 ರೂ. ಡಿಸ್ಕೌಂಟ್: ಖರೀದಿಸಬಹುದೇ?
Image
Asus Zenfone 10: ರೋಚಕತೆ ಸೃಷ್ಟಿಸುತ್ತಿದೆ ಏಸಸ್‌ ಜೆನ್‌ಫೋನ್‌ 10: ಜೂನ್ 29ಕ್ಕೆ ಬಿಡುಗಡೆ
Image
Tech Tips: ವಾಟ್ಸ್​ಆ್ಯಪ್​ನಲ್ಲಿ ಚಾಟ್ ತೆರೆಯದೆ ಮೆಸೇಜ್ ಓದುವ ಟ್ರಿಕ್ ನಿಮಗೆ ಗೊತ್ತೇ?
Image
Best Camera Phones: ಕೇವಲ 10,000 ರೂ. ಒಳಗೆ ಸಿಗುತ್ತಿರುವ ಅದ್ಭುತ ಕ್ಯಾಮೆರಾದ ಸ್ಮಾರ್ಟ್​ಫೋನ್ ಬೇಕಿದ್ದರೆ ಇಲ್ಲಿದೆ ನೋಡಿ

iQoo Neo 7 Pro: ಗೇಮಿಂಗ್ ಪ್ರಿಯರು ಸಿದ್ಧರಾಗಿ: ಬರುತ್ತಿದೆ ಬಲಿಷ್ಠ ಪ್ರೊಸೆಸರ್​ನ ಐಕ್ಯೂ ನಿಯೋ 7 ಪ್ರೊ ಸ್ಮಾರ್ಟ್​ಫೋನ್

ಏನಿದೆ ವಿಶೇಷತೆ?:

ರೆಡ್ಮಿ A2 ಸ್ಮಾರ್ಟ್‌ಫೋನ್‌ 1600 x 720 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.52 ಇಂಚಿನ LCD ಡಿಸ್‌ ಪ್ಲೇಯನ್ನು ಹೊಂದಿವೆ. ಈ ಡಿಸ್‌ ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದ್ದು, ವಾಟರ್‌ಡ್ರಾಪ್ ನಾಚ್‌ ವಿನ್ಯಾಸದಿಂದ ಕೂಡಿದೆ. ಪ್ರೊಸೆಸರ್ ಕೂಡ ಸೇಮ್ ಇದೆ. ಮೀಡಿಯಾಟೆಕ್‌ ಹಿಲಿಯೋ G36SoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು ಆಂಡ್ರಾಯ್ಡ್‌ 12 (Go Edition) ಬೆಂಬಲ ನೀಡಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ, ರೆಡ್ಮಿ A2 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿವೆ. ಮುಖ್ಯ ಕ್ಯಾಮೆರಾ 8MP ಸೆನ್ಸಾರ್‌ ಹೊಂದಿದ್ದು, LED ಫ್ಲ್ಯಾಷ್ ಅನ್ನು ಒಳಗೊಂಡಿದೆ. 0.08 ಮೆಗಾಫಿಕ್ಸೆಲ್​ನ ಡೆಪ್ತ್ ಸೆನ್ಸಾರ್ ನೀಡಲಾಗಿದೆ. ಇದಲ್ಲದೆ ವಿಡಿಯೋ ಕರೆಗಳು ಮತ್ತು ಸೆಲ್ಫಿಗಳಿಗಾಗಿ 5MP ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ರೆಡ್ಮಿ A2 5000mAh ಸಾಮರ್ಥ್ಯದ ಬ್ಯಾಟರಿಯನ್ನು ಬೆಂಬಲಿಸಲಿದೆ. ಇದು ಮೈಕ್ರೋ-ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಲ್ಲಿ 10W ಚಾರ್ಜಿಂಗ್ ನೀಡಲಾಗಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್, 4G, 2.4GHz ವೈಫೈ, ಬ್ಲೂಟೂತ್ 5.0, GPS, ಗ್ಲೋನಾಸ್ ಮತ್ತು ಗೆಲಿಲಿಯೋವನ್ನು ಬೆಂಬಲಿಸುತ್ತವೆ. 5ಜಿ ಸಪೋರ್ಟ್ ನೀಡಲಾಗಿಲ್ಲ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ