Kannada News Technology Xiaomi Redmi 9 Activ smartphone price in India has dropped in Amazon Check new price
Amazon: 9,499 ರೂ. ವಿನ ರೆಡ್ಮಿ 9 ಆಕ್ಟೀವ್ ಫೋನ್ ಮೇಲೆ ಮತ್ತಷ್ಟು ಡಿಸ್ಕೌಂಟ್: ಇದು ಲಿಮಿಟೆಡ್ ಆಫರ್
Redmi 9 Activ: ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಬಿಡುಗಡೆ ಮಾಡಿದ್ದ ರೆಡ್ಮಿ 9 ಸರಣಿಯ (Redmi 9 Series) ರೆಡ್ಮಿ 9 ಆಕ್ಟಿವ್ (Redmi 9 Activ) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ರಿಯಾಯಿತಿ ಘೋಷಿಸಿದೆ.
ಚೀನಾ ಮೂಲದ ಶವೋಮಿ (Xiaomi) ಕಂಪನಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುತ್ತವೆ. ಅದಕ್ಕಾಗಿ ಇದು ಭಾರತದ ನಂಬರ್ ಒನ್ ಬ್ರ್ಯಾಂಡ್ ಆಗಿ ಕಾಣಿಸಿಕೊಂಡಿದೆ. ತನ್ನ ಬ್ರ್ಯಾಂಡ್ನಡಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡುವಾಗ ಶವೋಮಿ ಕಂಪನಿಯ ಪ್ರಚಾರವೂ ಜೋರಾಗಿಯೇ ಇರುತ್ತದೆ. ಶವೋಮಿ ಹೊಸ ಫೋನ್ ರಿಲೀಸ್ ಮಾಡುತ್ತಿದೆ ಎಂಬೊತ್ತಿಗೆ ತನ್ನ ಹಳೆಯ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ ಮಾಡುತ್ತದೆ. ಇದೀಗ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಬಿಡುಗಡೆ ಮಾಡಿದ್ದ ರೆಡ್ಮಿ 9 ಸರಣಿಯ (Redmi 9 Series) ರೆಡ್ಮಿ 9 ಆಕ್ಟಿವ್ (Redmi 9 Activ) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ರಿಯಾಯಿತಿ ಘೋಷಿಸಿದೆ. ಬಜೆಟ್ ಬೆಲೆಯ ಈ ಫೋನನ್ನು ನೀವು ಮತ್ತಷ್ಟು ಕಡಿಮೆ ಬೆಲೆಗೆ ಖರೀದಿಸಬಹುದು.
ಹೌದು, ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನಿನ ಒಟ್ಟು 4GB RAM ಮತ್ತು 64GB ಸ್ಟೋರೆಜ್ ಸಾಮರ್ಥ್ಯದ ಫೋನಿಗೆ 9,499 ರೂ.ಇದೆ. ಆದರೀಗ ಆಫರ್ನಲ್ಲಿ ಇದನ್ನು ನೀವು 8,799 ರೂ. ಗೆ ನಿಮ್ಮದಾಗಿಸಬಹುದು.
ಈ ಫೋನ್ ಕಾರ್ಬನ್ ಬ್ಲ್ಯಾಕ್, ಕೋರಲ್ ಗ್ರೀನ್ ಮತ್ತು ಮೆಟಾಲಿಕ್ ಪರ್ಪಲ್ ಬಣ್ಣಗಳ ಆಯ್ಕೆ ಒಳಗೊಂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ನಲ್ಲಿ ಈ ಫೋನ್ ಸೇಲ್ ಕಾಣುತ್ತಿದೆ.
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ 1080 x 2340 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.53 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ.
ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಅದಕ್ಕೆ ಪೂಕರವಾಗಿ ಆಂಡ್ರಾಯ್ಡ್ 10 ಓಎಸ್ ಬೆಂಬಲ ಪಡೆದಿದೆ.
ಇದನ್ನೂ ಓದಿ
Poco X4 GT: ಮಾರುಕಟ್ಟೆಗೆ ಲಗ್ಗೆಯಟ್ಟಿದೆ ಪವರ್ಫುಲ್ ಸ್ಮಾರ್ಟ್‌ಫೋನ್: ಇದರ ವಿಶೇಷತೆ ಇಲ್ಲಿದೆ ನೋಡಿ
Galaxy M52 5G: ಈ ಆಫರ್ ಮತ್ತೆ ಬರಲ್ಲ: ಗ್ಯಾಲಕ್ಸಿ M52 5G ಫೋನಿನ ಬೆಲೆಯಲ್ಲಿ 9,000 ರೂ. ಖಡಿತ
Flipkart: ಫ್ಲಿಪ್ಕಾರ್ಟ್ನಲ್ಲಿ ಶುರುವಾಗಿದೆ ಎಲೆಕ್ಟ್ರಾನಿಕ್ ಸೇಲ್: ಸ್ಮಾರ್ಟ್ಫೋನ್ಗಳಿಗೆ ಬಂಪರ್ ಡಿಸ್ಕೌಂಟ್
ಇನ್ನೂ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ರಚನೆಯನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಕೆಂಡರಿ ಕ್ಯಾಮೆರಾವು 2ಎಂಪಿಯ ಸೆನ್ಸಾರ್ ಕ್ಯಾಮೆರಾ ಹೊಂದಿದೆ. ಸೆಲ್ಫಿಗಾಗಿ 5ಎಂಪಿ ಸೆನ್ಸಾರ್ ಕ್ಯಾಮೆರಾ ನೀಡಲಾಗಿದೆ.
ರೆಡ್ಮಿ 9 ಆಕ್ಟೀವ್ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬಲಿಷ್ಠ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಇದರೊಂದಿಗೆ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಒದಗಿಸಲಾಗಿದೆ.
ಇದರೊಂದಿಗೆ ಸೈಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ವೈಫೈ, ಬ್ಲೂಟೂತ್, ಹಾಟ್‌ಸ್ಟಾಪ್ ಸೇರಿದಂತೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G VOLET, ವೈ-ಫೈ 802.11 ಎ / ಬಿ / ಜಿ / ಎನ್, ಬ್ಲೂಟೂತ್ ವಿ 5.0, ಜಿಪಿಎಸ್ / ಎ-ಜಿಪಿಎಸ್, ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿದಂತೆ ಇತ್ತೀಚೆಗಿನ ಪ್ರಮುಖ ಆಯ್ಕೆಯನ್ನು ನೀಡಲಾಗಿದೆ.