Best Smartphones: 30,000 ರೂ. ಒಳಗಿನ ಈ ಐದು ಸ್ಮಾರ್ಟ್‌ಫೋನ್ ಖರೀದಿಸಲು ಮುಗಿಬೀಳುತ್ತಿದ್ದಾರೆ ಜನರು
Best Phones Under Rs 30,000: ಇತ್ತೀಚೆಗಷ್ಟೆ 30,000 ರೂ. ಒಳಗೆ ಬಿಡುಗಡೆ ಆಗಿ ಸದ್ಯ ಭರ್ಜರಿ ಸೇಲ್ ಕಾಣುತ್ತಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನ ಈ ಲೇಖನದಲ್ಲಿ ನೋಡೋಣ.
ಮೊಬೈಲ್ (Mobile) ವ್ಯಾಪಾರದಲ್ಲಿ ದೊಡ್ಡ ಮಾರುಕಟ್ಟೆಯನ್ನೇ ಹೊಂದಿರುವ ಭಾರತ ಅನೇಕ ಸ್ಮಾರ್ಟ್ ಫೋನ್ (Smartphone) ಬ್ರ್ಯಾಂಡ್ಗಳ ನೆಚ್ಚಿನ ತಾಣವಾಗಿದೆ. ವಿವಿಧ ಬೆಲೆಗಳ ಆಯ್ಕೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಇಲ್ಲಿ ಲಭ್ಯವಿದೆ. ಬಜೆಟ್ ಬೆಲೆಯ ಜೊತೆಗೆ ಮಧ್ಯಮ ಮತ್ತು ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಖರೀದಿಸಬಹುದಾಗಿದೆ. ಭಾರತದಲ್ಲಿ ಕಡಿಮೆ ಎಂದರೂ ವಾರಕ್ಕೆ ಮೂರರಿಂದ ನಾಲ್ಕು ಹೊಸ ಫೋನ್ಗಳು ಲಗ್ಗೆಯಿಡುತ್ತವೆ. ಇದರಲ್ಲಿ ಹೆಚ್ಚಿನ ಜನರು ಮಧ್ಯ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ಮುಂದಾಗುತ್ತಾರೆ. ಇವುಗಳಲ್ಲಿ 30,000 ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು (Smartphone Under RS. 30,000) ಸಾಕಷ್ಟು ಸಂಚಲನ ಸೃಷ್ಟಿಸಿವೆ. ಹಾಗಾದ್ರೆ ಇತ್ತೀಚೆಗಷ್ಟೆ 30,000 ರೂ. ಒಳಗೆ ಬಿಡುಗಡೆ ಆಗಿ ಸದ್ಯ ಭರ್ಜರಿ ಸೇಲ್ ಕಾಣುತ್ತಿರುವ ಸ್ಮಾರ್ಟ್‌ಫೋನ್‌ಗಳು ಯಾವುವು ಎಂಬುದನ್ನ ಈ ಲೇಖನದಲ್ಲಿ ನೋಡೋಣ.
ರಿಯಲ್‌ಮಿ 9 ಪ್ರೊ+ 5G:
ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್ 6.43 ಇಂಚಿನ 90Hz AMOLED ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್ ಜೊತೆಗೆ 16MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಆರಂಭಿಕ ಬೆಲೆ 24,999 ರೂ. ಆಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G:
ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7 ಇಂಚಿನ ಫುಲ್ ಹೆಚ್‌ಡಿ + ಸೂಪರ್ AMOLED ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 778G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ ಆಧಾರಿತ ಒನ್ ಯುಐ ಮೇಲೆ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000 mAh ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದರ ಬೆಲೆ ಆರಂಭಿಕ ಬೆಲೆ 24,999 ರೂ.
Oppo K10 5G: 17,499 ರೂ.: ಈ ಅದ್ಭುತ ಕ್ಯಾಮೆರಾ ಫೋನ್ ಖರೀದಿಸಿದ್ರೆ ನೀವು ಫಿದಾ ಆಗೋದು ಗ್ಯಾರೆಂಟಿ
ಒಪ್ಪೋ ರೆನೋ 7:
ಒಪ್ಪೋ ರೆನೋ 7 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಹೆಚ್‌ಡಿ + ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ ಪಡೆದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಲರ್ ಒಎಸ್ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮರಾ ಹೊಂದಿದೆ. 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 65W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಆರಂಭಿಕ ಬೆಲೆ 28,999 ರೂ. ಇದೆ.
ಒನ್‌ಪ್ಲಸ್ ನಾರ್ಡ್ CE 2 5G:
ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ ಇದು 16MP ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ 23,999 ರೂ. ಬೆಲೆಗೆ ಲಭ್ಯವಾಗಲಿದೆ.
ಶವೋಮಿ 11i:
ಶವೋಮಿ 11i 5G ಸ್ಮಾರ್ಟ್‌ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಬೇಸ್ ಮಾಡೆಲ್ ಬೆಲೆ 24,999 ರೂ. ಆಗಿದೆ.
ತಂತ್ರಜ್ಞಾನ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:36 am, Thu, 16 June 22