Redmi 12: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬಜೆಟ್ ಬೆಲೆಯ ರೆಡ್ಮಿ 12 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ?

|

Updated on: Jun 16, 2023 | 1:31 PM

ಜಾಗತಿಕ ಮಾರುಕಟ್ಟೆಯಲ್ಲಿ ರೆಡ್ಮಿ 12 (Redmi 12) ಫೋನ್‌ ಲಾಂಚ್‌ ಆಗಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

Redmi 12: ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಬಜೆಟ್ ಬೆಲೆಯ ರೆಡ್ಮಿ 12 ಸ್ಮಾರ್ಟ್​ಫೋನ್: ಫೀಚರ್ಸ್ ಏನಿದೆ?
Redmi 12
Follow us on

ಚೀನಾ ಮೂಲದ ಪ್ರಸಿದ್ಧ ಶವೋಮಿ (Xiaomi) ಸಂಸ್ಥೆ ತನ್ನ ರೆಡ್ಮಿ ಬ್ರ್ಯಾಂಡ್​ನ ಅಡಿಯಲ್ಲಿ ಒಂದರ ಹಿಂದೆ ಒಂದರಂತೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುತ್ತಿದೆ. ಮೊನ್ನೆಯಷ್ಟೆ ಭಾರತದಲ್ಲಿ ಅತಿ ಕಡಿಮೆ ಬೆಲೆಗೆ ರೆಡ್ಮಿ A2 ಎಂಬ ಮೊಬೈಲ್ ಅನಾವರಣ ಮಾಡಿದ್ದ ಕಂಪನಿ ಇದೀಗ ಮತ್ತೊಂದು ಹೊಸ ಸ್ಮಾರ್ಟ್​ಫೋನ್ (Smartphone) ಅನಾವರಣಗೊಳಿಸಿದೆ. ಜಾಗತಿಕ ಮಾರುಕಟ್ಟೆಯಲ್ಲಿ ರೆಡ್ಮಿ 12 (Redmi 12) ಫೋನ್‌ ಲಾಂಚ್‌ ಆಗಿದೆ. ಇದೊಂದು ಮಧ್ಯಮ ಬೆಲೆಯ ಫೋನಾಗಿದ್ದು ಅತ್ಯುತ್ತಮ ಕ್ಯಾಮೆರಾ ಸೆಟ್‌ಅಪ್‌, ಬ್ಯಾಟರಿ ಹಾಗೂ ವೇಗದ ಚಾರ್ಜಿಂಗ್‌ ಬೆಂಬಲ ಪಡೆದುಕೊಂಡಿದೆ. ಈ ಫೋನಿನ ಫೀಚರ್ಸ್, ಬೆಲೆ ಕುರಿತ ಮಾಹಿತಿ ಇಲ್ಲಿದೆ.

ಬೆಲೆ ಎಷ್ಟು?:

ರೆಡ್ಮಿ 12 ಫೋನ್ ಎರಡು ಸ್ಟೋರೇಜ್ ಆಯ್ಕೆಯಲ್ಲಿ ಬಿಡುಗಡೆ ಆಗಿದೆ. ಇದರ 4GB RAM + 128GB ಮಾದರಿಗೆ USD 149. ಅಂದರೆ ಭಾರತದಲ್ಲಿ ಇದರ ಬೆಲೆ ಅಂದಾಜು 12,210ರೂ. ಎನ್ನಬಹುದು. ಹಾಗೆಯೇ ಈ ಫೋನ್ 8GB RAM + 128GB ಸ್ಟೋರೇಜ್ ಸಾಮರ್ಥ್ಯದಲ್ಲೂ ಲಭ್ಯವಿದೆ. ಆದರೆ, ಇದರ ಬೆಲೆ ಬಹಿರಂಗಗೊಂಡಿಲ್ಲ. ಇದು ಮಿಡ್‌ನೈಟ್ ಬ್ಲ್ಯಾಕ್, ಸ್ಕೈ ಬ್ಲೂ ಮತ್ತು ಪೋಲಾರ್ ಸಿಲ್ವರ್ ಬಣ್ಣಗಳಲ್ಲಿ ಖರೀದಿಗೆ ಸಿಗಲಿದೆ. ಸದ್ಯದಲ್ಲೇ ರೆಡ್ಮಿ 12 ಫೋನ್ ಭಾರತಕ್ಕೂ ಕಾಲಿಡಲಿದೆ.

ಇದನ್ನೂ ಓದಿ
Samsung Galaxy F13: ಬೆಸ್ಟ್ ಆಫರ್ ಪ್ರೈಸ್​ಗೆ ಸೇಲ್ ಆಗುತ್ತಿದೆ ಗ್ಯಾಲಕ್ಸಿ F13 ಸ್ಮಾರ್ಟ್‌ಫೋನ್‌
Infinix Note 30 VIP: ಇನ್ಫಿನಿಕ್ಸ್ ನೋಟ್‌ 30 VIP 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು
Reliance JioTag: ಏರ್​ಟ್ಯಾಗ್​ಗೆ ಸೆಡ್ಡು ಹೊಡೆಯಲು ಬಂತು ರಿಲಯನ್ಸ್ ಜಿಯೋಟ್ಯಾಗ್
Apple iOS 17: ಹೊಸ ಅಪ್​ಡೇಟ್ ಹಳೆಯ ಐಫೋನ್​ಗೆ ದೊರೆಯುವುದಿಲ್ಲ!

Infinix Note 30 5G: ಭಾರತದಲ್ಲಿಂದು 108MP ಕ್ಯಾಮೆರಾದ ಇನ್ಫಿನಿಕ್ಸ್‌ ನೋಟ್‌ 30 5G ಸ್ಮಾರ್ಟ್‌ಫೋನ್‌ ಬಿಡುಗಡೆ

ಫೀಚರ್ಸ್ ಏನಿದೆ?:

ಈ ಫೋನ್ 1080×2400 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.79 ಇಂಚಿನ FHD+ ಎಲ್‌ಸಿಡಿ ಡಿಸ್‌ಪ್ಲೇ ಹೊಂದಿದೆ. 90Hz ರಿಫ್ರೆಶ್ ರೇಟ್​ನಿಂದ ಕೂಡಿದೆ. ಬೆಲೆಗೆ ತಕ್ಕಂತೆ ಆಕ್ಟಾ ಕೋರ್ ಮೀಡಿಯಾ ಟೆಕ್ ಹೆಲಿಯೊ G88 12nm ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದ್ದು, ಇದು ಡ್ಯುಯಲ್ 2GHz ಕಾರ್ಟೆಕ್ಸ್-A75 +ಹೆಕ್ಸಾ 2GHz 6xಕಾರ್ಟೆಕ್ಸ್-A55 ಸಿಪಿಯುಗಳನ್ನು ಹೊಂದಿದೆ. ಜೊತೆಗೆ ಎಆರ್‌ಎಮ್‌ ಮಾಲಿ G52 2EEMC2 ಜಿಪಿಯು ಅಳವಡಿಸಲಾಗಿದೆ.

ಕ್ಯಾಮೆರಾ ವಿಚಾರಕ್ಕೆ ಬರುವುದಾದರೆ ರೆಡ್ಮಿ 12 ಫೋನ್ ಟ್ರಿಪಲ್‌ ರಿಯರ್ ಕ್ಯಾಮೆರಾ ಆಯ್ಕೆ ಹೊಂದಿದೆ. ಇದರಲ್ಲಿ f/1.8 ದ್ಯುತಿರಂಧ್ರದೊಂದಿಗೆ 50 ಮೆಗಾಪಿಕ್ಸೆಲ್‌ ಮುಖ್ಯ ಕ್ಯಾಮೆರಾ ನೀಡಲಾಗಿದೆ. ಅಂತೆಯೆ f/2.2 ದ್ಯುತಿರಂಧ್ರದೊಂದಿಗೆ 8 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಕ್ಯಾಮೆರಾ, 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾ ಇದೆ. ಜೊತೆಗೆ ಎಲ್‌ಇಡಿ ಫ್ಲ್ಯಾಶ್‌ ಲೈಟ್‌ ಆಯ್ಕೆ ನೀಡಲಾಗಿದೆ. ಮುಂಭಾಗ ವಿಡಿಯೋ ಕರೆ ಮತ್ತು ಸೆಲ್ಫಿಗಾಗಿ 8 ಮೆಗಾಪಿಕ್ಸೆಲ್‌ ಕ್ಯಾಮೆರಾ ಆಯ್ಕೆ ನೀಡಲಾಗಿದೆ.

ಈ ಫೋನ್​ನಲ್ಲಿ ದೀರ್ಘ ಸಮಯ ಬಾಳಕೆ ಬರುವ 5000mAh ಸಾಮರ್ಥ್ಯದ ಬ್ಯಾಟರಿ ಅಳವಡಿಸಲಾಗಿದ್ದು, ಇದು 18W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ನೀಡಲಿದೆ. ಜೊತೆಗೆ ಹೈಬ್ರಿಡ್ ಡ್ಯುಯಲ್ ಸಿಮ್ ಆಯ್ಕೆ, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯ, ಧೂಳು ಮತ್ತು ಸ್ಪ್ಲಾಶ್ ನಿರೋಧಕಕ್ಕಾಗಿ IP53 ರೇಟಿಂಗ್‌ ಹೊಂದಿದ್ದು, 3.5 ಎಂಎಂ ಆಡಿಯೊ ಜಾಕ್, ಬ್ಲೂಟೂತ್ 5.1, ಯುಎಸ್‌ಬಿ ಟೈಪ್-ಸಿ ಸೇರಿದಂತೆ ಇತ್ತೀಚಿನ ಎಲ್ಲ ಕನೆಕ್ಟಿಟಿವಿ ಆಯ್ಕೆ ಸೌಲಭ್ಯವಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ