Xiaomi Super Sale: 108MP ಕ್ಯಾಮೆರಾ, 120W ಫಾಸ್ಟ್ ಚಾರ್ಜರ್: ಶವೋಮಿಯ ಈ ಫೋನ್ ಖರೀದಿಗೆ ಕ್ಯೂ ನಿಂತ ಜನರು

Xiaomi 11T Pro: ಶವೋಮಿ ತನ್ನ ಅಧಿಕೃತ ವೆಬ್​ಸೈಟ್ ಎಂಐ.ಕಾಮ್​ನಲ್ಲಿ ಶವೋಮಿ ಸೂಪರ್ ಸೇಲ್ (Xiaomi Super Sale) ಮೇಳವನ್ನು ಹಮ್ಮಿಕೊಂಡಿದೆ. ಇದರಲ್ಲಿ  ಕಂಪನಿಯು ಈ ವರ್ಷ ಜನವರಿಯಲ್ಲಿ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಶವೋಮಿ 11ಟಿ ಪ್ರೊ ಫೋನ್ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಿದೆ.

Xiaomi Super Sale: 108MP ಕ್ಯಾಮೆರಾ, 120W ಫಾಸ್ಟ್ ಚಾರ್ಜರ್: ಶವೋಮಿಯ ಈ ಫೋನ್ ಖರೀದಿಗೆ ಕ್ಯೂ ನಿಂತ ಜನರು
Xiaomi 11T Pro
Follow us
TV9 Web
| Updated By: Vinay Bhat

Updated on:Mar 14, 2022 | 2:55 PM

ಚೀನಾ ಮೂಲದ ಪ್ರಸಿದ್ಧ ಎಲೆಕ್ಟ್ರಾನಿಕ್ ಸಂಸ್ಥೆ ಶವೋಮಿ ಭಾರತದಲ್ಲಿ ಅತಿ ಹೆಚ್ಚು ಸ್ಮಾರ್ಟ್​​ಫೋನ್​ಗಳನ್ನು ಬಿಡುಗಡೆ ಮಾಡಿ ದೇಶದ ನಂಬರ್ ಒನ್ ಮೊಬೈಲ್ ಕಂಪನಿಯಾಗಿ ಹೊರಹೊಮ್ಮಿದೆ. ಇದೀಗ ಶವೋಮಿ ತನ್ನ ಅಧಿಕೃತ ವೆಬ್​ಸೈಟ್ ಎಂಐ.ಕಾಮ್​ನಲ್ಲಿ ಶವೋಮಿ ಸೂಪರ್ ಸೇಲ್ (Xiaomi Super Sale) ಮೇಳವನ್ನು ಹಮ್ಮಿಕೊಂಡಿದೆ. ಇದರಲ್ಲಿ  ಶವೋಮಿ ಕಂಪನಿಯ ಬಹುತೇಕ ಎಲ್ಲ ಸ್ಮಾರ್ಟ್​​ಫೋನ್​ಗಳಿಗೆ ಬಂಪರ್ ಡಿಸ್ಕೌಂಟ್ ಘೋಷಿಸಿದೆ. ಅದರಲ್ಲೂ ಕಂಪನಿಯು ಈ ವರ್ಷ ಜನವರಿಯಲ್ಲಿ ಬಿಡುಗಡೆ ಮಾಡಿ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿದ್ದ ಶವೋಮಿ 11ಟಿ ಪ್ರೊ (Xiaomi 11T Pro) ಫೋನ್ ಮೇಲೆ ಆಕರ್ಷಕ ರಿಯಾಯಿತಿ ಘೋಷಿಸಿದೆ. ಇದು 2022 ರಲ್ಲಿ ಶವೋಮಿ ಕಂಪನಿ ಭಾರತದಲ್ಲಿ ಲಾಂಚ್‌ ಮಾಡಿದ ಮೊದಲ ಪ್ರೀಮಿಯಂ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. 120W ವೇಗದ ಚಾರ್ಜಿಂಗ್ ಬೆಂಬಲ, 108 ಮೆಗಾಪಿಕ್ಸೆಲ್‌ (108 MP Camera) ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾ ಇದರ ಹೈಲೇಟ್. ಹಾಗಾದ್ರೆ ಈ ಫೋನ್ ಆಫರ್ ಮೂಲಕ ಎಷ್ಟು ರೂಪಾಯಿಗೆ ಮಾರಾಟ ಆಗುತ್ತಿದೆ ಎಂಬುದನ್ನು ನೋಡೋಣ.

ಶವೋಮಿ 11T ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಮೂರು ಮಾದರಿಯಲ್ಲಿ ಬಿಡುಗಡೆ ಆಗಿತ್ತು. ಇದರ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 39,999 ರೂ., 8GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 41,999 ರೂ., 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 43,999 ರೂ. ಹೊಂದಿದೆ. ಇದೀಗ ಶವೋಮಿ ಸೂಪರ್ ಸೇಲ್​ನಲ್ಲಿ ಈ ಫೋನಿನ ಬೇಸ್ ಮಾಡೆಲ್ ಅನ್ನು ಕೇವಲ 33,999 ರೂ. ಗೆ ಖರೀದಿ ಮಾಡಬಹುದು. ಅಂದರೆ 6,000 ರೂ. ಗಳ ಡಿಸ್ಕೌಂಟ್ ಸಿಗಲಿದೆ. ಇದರಲ್ಲದೆ ಹೆಚ್​ಡಿಎಫ್​ಸ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೂಲಕ ಖರೀದಿಸಿದರೆ 5,000 ರೂ. ರಿಯಾಯಿತಿ ದೊರೆಯುತ್ತದೆ. ಇದರ ಜೊತೆಗೆ 1,000 ರೂ. ಗಳ ಎಂಐ ಕೂಪನ್ ಲಭ್ಯವಿದೆ.

ಶವೋಮಿ 11T ಪ್ರೊ 5G ಸ್ಮಾರ್ಟ್‌ಫೋನ್‌ 1,080×2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್‌ ಹೊಂದಿದ್ದು, 10-ಬಿಟ್ ಟ್ರೂಲಿ ಕಲರ್‌ ಫ್ಲಾಟ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಆಕ್ಟಾ-ಕೋರ್ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 888 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ.

ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ HM2 ಸೆನ್ಸಾರ್‌ f/1.75 ವೈಡ್-ಆಂಗಲ್ ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾ-ವೈಡ್ ಎಫ್/2.2 ಲೆನ್ಸ್‌ 120 ಡಿಗ್ರಿಗಳ ಫೀಲ್ಡ್-ಆಫ್-ವ್ಯೂ (FoV) ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಟೆಲಿಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ನಲ್ಲಿ ಟೈಮ್-ಲ್ಯಾಪ್ಸ್, ಸಿನಿಮಾಟಿಕ್ ಫಿಲ್ಟರ್‌ಗಳು ಮತ್ತು ಆಡಿಯೊ ಜೂಮ್‌ನಂತಹ 50 ಕ್ಕೂ ಹೆಚ್ಚು ಡೈರೆಕ್ಟರ್ ಮೋಡ್‌ಗಳೊಂದಿಗೆ ಪ್ರೀ ಲೋಡ್ ಆಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ಹೈಪರ್‌ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS/ NavIC, NFC, ಇನ್ಫ್ರಾರೆಡ್ (IR) ಬ್ಲಾಸ್ಟರ್, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸೆಲೆರೊಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟಿಕ್ ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌, ಆಂಬಿಯೆಂಟ್ ಲೈಟ್ ಸೆನ್ಸರ್, ಬ್ಯಾರೋಮೀಟರ್ ಸೇರಿವೆ.

Realme 9 5G: ಇದೇ ಮೊದಲ ಬಾರಿಗೆ ಭರ್ಜರಿ ಆಫರ್​​ನಲ್ಲಿ ಸೇಲ್ ಕಾಣುತ್ತಿದೆ ರಿಯಲ್‌ ಮಿ 9 5G, ರಿಯಲ್‌ ಮಿ 9 5G SE

Flipkart Big Saving Days Sale: ಕಳೆದ ಬಾರಿಗಿಂತ ಮತ್ತಷ್ಟು ಕಡಿಮೆ ಬೆಲೆಗೆ ಸಿಗುತ್ತಿದೆ ಐಫೋನ್: ಮಿಸ್ ಮಾಡ್ಬೇಡಿ

Published On - 2:23 pm, Mon, 14 March 22

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್