Year Ender 2022: ಈ ವರ್ಷ 15,000 ರೂ. ಒಳಗೆ ರಿಲೀಸ್ ಆದ ಟಾಪ್ 5 ಸ್ಮಾರ್ಟ್ಫೋನ್ಗಳು ಇಲ್ಲಿದೆ ನೋಡಿ
SmartPhones Under 15,000: ಈ ವರ್ಷ 15,000 ರೂ. ಒಳಗೆ ಬಿಡುಗಡೆ ಆಗಿ ಯಶಸ್ಸುಕಂಡ ಪ್ರಮುಖ 5 ಸ್ಮಾರ್ಟ್ಫೋನ್ಗಳು ಯಾವುವು ಎಂಬುದನ್ನು ನೋಡೋಣ.
2023 ಹೊಸ ವರ್ಷದ ಆಗಮನಕ್ಕೆ ಇನ್ನೇನು ಕೆಲವು ದಿನಗಳಷ್ಟೆ ಬಾಕಿಯಿದೆ. ಹೀಗಿರುವಾಗ 2022ನೇ (Year Ender 2022) ವರ್ಷದ ಸ್ಮಾರ್ಟ್‌ಫೋನ್ ಜಗತ್ತನ್ನು ಮೆಲುಕಿ ಹಾಕಿ ನೋಡಿದಾಗ ಈ ವರ್ಷ ತಿಂಗಳಿಗೆ ಕಡಿಮೆ ಎಂದರೂ ಮೂರರಿಂದ ಐದು ಫೋನ್ಗಳು ಬಿಡುಗಡೆ ಆಗಿವೆ. ಇದರಲ್ಲಿ ಲೋ ಬಜೆಟ್ನಿಂದ (Budget Phone) ಹಿಡಿದು ಹೈ ರೇಂಜ್ ಮಾದರಿಯವರೆಗೂ ಇದೆ. ಈ ಪೈಕಿ ಕೆಲವು ಫೋನ್ಗಳು ಕ್ಲಿಕ್ ಆದರೆ, ಇನ್ನೂ ಕೆಲವು ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಿವೆ. ಈ ವರ್ಷ ಸಾಲು ಸಾಲು ಸ್ಮಾರ್ಟ್ಫೋನ್ಗಳು (Smartphones) ಬಿಡುಗಡೆ ಆಗಿವೆಯಾದರೂ ಅತಿ ಹೆಚ್ಚು ಸೇಲ್ ಕಂಡು ಜನರ ಮನ್ನಣೆಗೆ ಪಾತ್ರವಾಗಿದ್ದು ಕೆಲವೇ ಕೆಲವು ಮೊಬೈಲ್ಗಳು ಮಾತ್ರ. ಹಾಗಾದ್ರೆ ಈ ವರ್ಷ 15,000 ರೂ. ಒಳಗೆ ಬಿಡುಗಡೆ ಆಗಿ ಯಶಸ್ಸುಕಂಡ ಪ್ರಮುಖ 5 ಸ್ಮಾರ್ಟ್ಫೋನ್ಗಳು ಯಾವುವು ಎಂಬುದನ್ನು ನೋಡೋಣ.
iQOO Z6 Lite 5G: ಈ ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ನಿಂದ ಕೂಡಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್ ಹೊಂದಿದೆ. 16 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಆರಂಭಿಕ ಬೆಲೆ 13,999 ರೂ.
Samsung Galaxy M13 4G: ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಎಲ್ಸಿಡಿ ಡಿಸ್ ಪ್ಲೇ ಹೊಂದಿದೆ. ಎಕ್ಸಿನೋಸ್ 850 SoC ಪ್ರೊಸೆಸರ್ನಿಂದ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಬರೋಬ್ಬರಿ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನಿನ ಬೆಲೆ 10,749 ರೂ. ಆಗಿದೆ.
Moto G42: ಈ ಸ್ಮಾರ್ಟ್‌ಫೋನ್ 6.4 ಇಂಚಿನ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇ ಹೊಂದಿದೆ. ಸ್ನಾಪ್‌ಡ್ರಾಗನ್ 680 ಪ್ರೊಸೆಸರ್ ಅನ್ನು ಒಳಗೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 20W ಟರ್ಬೋಪವರ್ ಫಾಸ್ಟ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರರ್ನಲ್ಲಿದೆ. ಇದು ಕ್ವಾಡ್ ಪಿಕ್ಸೆಲ್ ಟೆಕ್ನಾಲಜಿ ಹೊಂದಿರುವುದು ವಿಶೇಷ. 16 ಮೆಗಾಫಿಕ್ಸೆಲ್ನ ಸೆಲ್ಫೀ ಕ್ಯಾಮೆರಾ ಕೂಡ ಇದೆ. ಈ ಫೋನಿನ ಬೆಲೆ 11,999 ರೂ.
Poco M4 5G: ಪೋಕೋ M4 5G ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಇದರಲ್ಲಿದೆ. ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್, 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದರ ಬೆಲೆ 13,499 ರೂ. ಆಗಿದೆ.
Realme 9i 5G: ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 5G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ನೀಡಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಅಪರ್ಚರ್ ಲೆನ್ಸ್, ಪೋರ್ಟ್ರೇಟ್ ಶೂಟರ್ ಹಾಗೂ ಮಾಕ್ರೋ ಕ್ಯಾಮೆರಾ ಹೊಂದಿದೆ. 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಕೂಡ ನೀಡಲಾಗಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಇದಕ್ಕೆ ಪೂರಕವಾಗಿ 18W ಕ್ವಿಕ್ ಚಾರ್ಜ್ ಟೆಕ್ನಾಲಜಿಯನ್ನು ಅಳವಡಿಸಲಾಗಿದೆ. ಈ ಫೋನಿನ ಬೆಲೆ 14,999 ರೂ.
ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:05 pm, Mon, 12 December 22