Yellow iPhone 14: ಬಂಪರ್ ಆಫರ್​ನೊಂದಿಗೆ ಐಫೋನ್ 14, ಐಫೋನ್ 14 ಪ್ಲಸ್ ಹಳದಿ ಬಣ್ಣದಲ್ಲಿ ಬಿಡುಗಡೆ: ಬೆಲೆ ಎಷ್ಟು?

iPhone 14 Plus Yellow Colour: ಹಳದಿ ಕಲರ್​ನ ಐಫೋನ್ 14 ಮತ್ತು ಐಫೋನ್ 14 ಪ್ಲಸ್ ಸ್ಮಾರ್ಟ್​ಫೋನ್​ ಪ್ರಸಿದ್ಧ ಇ ಕಾಮರ್ಸ್ ತಾಣಗಳಾದ ಅಮೆಜಾನ್ (Amazon) ಮತ್ತು ಫ್ಲಿಪ್​ಕಾರ್ಟ್ ಮೂಲಕವೂ ಮಾರಾಟ ಕಾಣುತ್ತಿದೆ.

Yellow iPhone 14: ಬಂಪರ್ ಆಫರ್​ನೊಂದಿಗೆ ಐಫೋನ್ 14, ಐಫೋನ್ 14 ಪ್ಲಸ್ ಹಳದಿ ಬಣ್ಣದಲ್ಲಿ ಬಿಡುಗಡೆ: ಬೆಲೆ ಎಷ್ಟು?
iPhone 14 Yellow
Follow us
Vinay Bhat
|

Updated on:Mar 14, 2023 | 2:21 PM

ಕಳೆದ ಕೆಲವು ವಾರಗಳಿಂದ ಮಾರುಕಟ್ಟೆಯಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದ ಹಳದಿ ಬಣ್ಣದ ಐಫೋನ್ 14 (Yellow iPhone 14) ಮತ್ತು ಐಫೋನ್ 14 ಪ್ಲಸ್ ಇದೀಗ ಬಿಡುಗಡೆ ಆಗಿದ್ದು ಖರೀದಿಗೆ ಲಭ್ಯವಾಗುತ್ತಿದೆ. ಆ್ಯಪಲ್ ಕಂಪನಿಯ ಅಧಿಕೃತ ವೆಬ್​ಸೈಟ್ ಸೇರಿದಂತೆ ಪ್ರಸಿದ್ಧ ಇ ಕಾಮರ್ಸ್ ತಾಣಗಳಾದ ಅಮೆಜಾನ್ (Amazon) ಮತ್ತು ಫ್ಲಿಪ್​ಕಾರ್ಟ್ ಮೂಲಕವೂ ಮಾರಾಟ ಕಾಣುತ್ತಿದೆ. ಐಫೋನ್ 14 ಸರಣಿ ಕಳೆದ ವರ್ಷ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿತ್ತು. ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿರುವ ಈ ಫೋನ್ ಈಗಲೂ ಸಖತ್ ಟ್ರೆಂಡಿಂಗ್ (Trending)​ನಲ್ಲಿದೆ. ಹಾಗಾದರೆ ಹಳದಿ ಕಲರ್​ನ ಐಫೋನ್ 14 ಮತ್ತು ಐಫೋನ್ 14 ಪ್ಲಸ್ ಸ್ಮಾರ್ಟ್​ಫೋನ್​ನ ವಿಶೇಷತೆ ಏನು?, ಬೆಲೆ ಎಷ್ಟಿದೆ?, ಆಫರ್ ಏನೇನು? ಎಂಬುದನ್ನು ನೋಡೋಣ.

ಬೆಲೆ-ಆಫರ್ ಏನಿದೆ?:

ಹೊಸ ಬಣ್ಣದ ಐಫೋನ್ 14 ಮತ್ತು ಐಫೋನ್ 14 ಪ್ಲಸ್​ನ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಐಫೋನ್ 14 128GB ರೂಪಾಂತರದ ಬೆಲೆ 79,900 ರೂ. ಮತ್ತು 256GB ಆಯ್ಕೆಯು 88,900 ರೂ. ಇದೆ ಹಾಗೆಯೆ ಇದರ 512GB ಸ್ಟೋರೇಜ್ ಮಾಡೆಲ್ ಬೆಲೆ 1,09,900 ರೂ. ಆಗಿದೆ. ಇನ್ನು ಭಾರತದಲ್ಲಿ ಐಫೋನ್ 14 ಪ್ಲಸ್ ಬೆಲೆ 89,900 ರೂ. ಗಳಿಂದ ಪ್ರಾರಂಭವಾಗುತ್ತದೆ. 256GB ಮತ್ತು 512GB ಸ್ಟೋರೇಜ್ ಮಾದರಿಗಳಿಗೆ ಕ್ರಮವಾಗಿ 99,900 ರೂ. ಮತ್ತು 1,19,900 ರೂ. ನಿಗದಿ ಮಾಡಲಾಗಿದೆ.

ಇದನ್ನೂ ಓದಿ
Image
Realme C33 2023: ಭಾರತದಲ್ಲಿ ಊಹಿಸಲಾಗದ ಬೆಲೆಗೆ ರಿಯಲ್ ಮಿಯಿಂದ ಹೊಸ ಸ್ಮಾರ್ಟ್​ಫೋನ್ ಬಿಡುಗಡೆ
Image
IQoo Z7i: ಸದ್ದಿಲ್ಲದೆ ಮಾರುಕಟ್ಟೆಗೆ ದಿಢೀರ್ ಹೊಸ ಸ್ಮಾರ್ಟ್​ಫೋನ್ ಪರಿಚಯಿಸಿದ ಐಕ್ಯೂ: ಪ್ರೊಸೆಸರ್ ಕಂಡು ದಂಗಾದ ಟೆಕ್ ಪ್ರಿಯರು
Image
WhatsApp New Feature: ವಾಟ್ಸ್​ಆ್ಯಪ್ ಪ್ರಿಯರಿಗೆ ಬಂಪರ್ ಸುದ್ದಿ: 21 ಹೊಸ ಎಮೋಜಿ ಸೇರ್ಪಡೆ
Image
Moto G72: ನೀವು ಫೋಟೋಗ್ರಫಿ ಮಾಡ್ತೀರಾ?: 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ

Moto G72: ನೀವು ಫೋಟೋಗ್ರಫಿ ಮಾಡ್ತೀರಾ?: 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ ಈಗ ಅತಿ ಕಡಿಮೆ ಬೆಲೆಗೆ ಲಭ್ಯ

ವಿಶೇಷವಾಗಿ ಆ್ಯಪಲ್ ಟ್ರೇಡ್-ಇನ್ ಆಫರ್ ಅನ್ನು ನೀಡುತ್ತಿದ್ದು, ಬಳಕೆದಾರರು ತಮ್ಮ ಹಳೆಯ ಐಫೋನ್ ಅನ್ನು ಹೊಸದಕ್ಕೆ ವಿನಿಮಯ ಮಾಡಿಕೊಳ್ಳುವ ಮೂಲಕ ರಿಯಾಯಿತಿಯನ್ನು ಪಡೆಯಬಹುದು. ಬಳಕೆದಾರರು ಐಫೋನ್‌ನ ಮಾದರಿ ಮತ್ತು ಸ್ಥಿತಿಯನ್ನು ಅವಲಂಬಿಸಿ 57,800 ರೂ. ವರೆಗೆ ಎಕ್ಸ್​ಚೇಂಜ್ ಆಫರ್ ಪಡೆದುಕೊಳ್ಳಬಹುದು. ಆಯ್ದ ಬ್ಯಾಂಕ್‌ಗಳೊಂದಿಗೆ ಯಾವುದೇ ವೆಚ್ಚವಿಲ್ಲದ EMI ಆಯ್ಕೆಯೂ ಇದೆ. ಅಮೆಜಾನ್​ನಲ್ಲಿ ಐಫೋನ್ 14 ಮೇಲೆ ಶೇ. 9ರಷ್ಟು ಡಿಸ್ಕೌಂಟ್ ಕೂಡ ಘೋಷಣೆ ಮಾಡಲಾಗಿದೆ.

ಐಫೋನ್ 14 ಫೀಚರ್ಸ್:

ಐಫೋನ್ 14 ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು ಸೂಪರ್ ರೆಟಿನಾ 6.1 ಇಂಚಿನ XDR OLED ಡಿಸ್‌ಪ್ಲೇ ಹೊಂದಿದ್ದು, 1200nits ಬ್ರೈಟ್ನಸ್‌ ಸಪೋರ್ಟ್‌ ಪಡೆದುಕೊಂಡಿದೆ. A15 ಬಯೋನಿಕ್ ಚಿಪ್ಸೆಟ್ ​ನಿಂದ ಕಾರ್ಯನಿರ್ವಹಿಸುತ್ತದೆ. ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಎರಡೂ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗದಲ್ಲಿ ಕೂಡ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 128GB, 256GB ಮತ್ತು 512GB ಸ್ಟೋರೇಜ್‌ ಆಯ್ಕೆಗಳಲ್ಲಿದೆ. ಈ ಫೋನ್ 5G ಕನೆಕ್ಟಿವಿಟಿ ಸೌಲಭ್ಯ ಪಡೆದಿದ್ದು ಇ-ಸಿಮ್ ಆಯ್ಕೆಯನ್ನು ನೀಡಲಾಗಿದೆ.

ಐಫೋನ್ 14 ಪ್ಲಸ್ ಫೀಚರ್ಸ್:

ಇನ್ನು ಐಫೋನ್ 14 ಪ್ಲಸ್‌ 6.7 ಇಂಚಿನ OLED ಡಿಸ್‌ಪ್ಲೇ ಹೊಂದಿದೆ. ಡ್ಯುಯಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಮುಂಭಾಗ ಕೂಡ 12 ಮೆಗಾ ಪಿಕ್ಸಲ್‌ನ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಈ ಫೋನ್ ದೀರ್ಘ ಸಮಯ ಬಾಳಿಕೆ ಬರುವ ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದೆ. ಅಲ್ಲದೆ ತುರ್ತು ಸಂದರ್ಭಕ್ಕೆ Emergency SOS via satellite ಫೀಚರ್ಸ್‌ ನೀಡಲಾಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:21 pm, Tue, 14 March 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು