Best Smartphones: 10,000 ರೂ. ಒಳ​ಗಿನ ಹೊಚ್ಚ ಹೊಸ ಬೊಂಬಾಟ್ ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ

TV9 Digital Desk

| Edited By: Vinay Bhat

Updated on:Jan 20, 2023 | 3:12 PM

Best Smartphones Under RS 10,000: ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುವವರಿಗೆ ಅನೇಕ ಆಯ್ಕೆಗಳಿವೆ. ಅದರಂತೆ ಸದ್ಯ 10 ಸಾವಿರಕ್ಕಿಂತ ಕಡಿಮೆ ಬೆಲೆಗೆ ದೊರಕುವ ಸ್ಮಾರ್ಟ್​ಫೋನ್​ಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

Best Smartphones: 10,000 ರೂ. ಒಳ​ಗಿನ ಹೊಚ್ಚ ಹೊಸ ಬೊಂಬಾಟ್ ಸ್ಮಾರ್ಟ್​ಫೋನ್ ಬೇಕೇ?: ಇಲ್ಲಿದೆ ನೋಡಿ
Smartphones

ಭಾರತೀಯ ಸ್ಮಾರ್ಟ್​ಫೋನ್​ (Smartphone) ಮಾರುಕಟ್ಟೆಯಲ್ಲಿ ಈಗ ಬಜೆಟ್ ಬೆಲೆಯ ಮೊಬೈಲ್​ಗಳಿಗೆ ಏನೂ ಕೊರತೆಯಿಲ್ಲ. ವಾರಕ್ಕೆ ಕಡಿಮೆ ಎಂದರೂ ಎರಡರಿಂದ ಮೂರು ಸ್ಮಾರ್ಟ್​ಫೋನ್​ಗಳು ಬಿಡುಗಡೆ ಆಗುವುದು ಸಾಮಾನ್ಯವಾಗಿದೆ. ಕಳೆದ ಕೆಲವು ತಿಂಗಳಿಂದ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಬಜೆಟ್ ಸ್ಮಾರ್ಟ್​ಫೋನ್​ಗಳು (Budget Price Phone) ಬಿಡುಗಡೆ ಆಗಿವೆ. ಈ ಪೈಕಿ ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುವವರಿಗೆ ಅನೇಕ ಆಯ್ಕೆಗಳಿವೆ. ಅದರಂತೆ ಸದ್ಯ 10 ಸಾವಿರಕ್ಕಿಂತ (Under 10,000 Smartphone) ಕಡಿಮೆ ಬೆಲೆಗೆ ದೊರಕುವ ಮತ್ತು ಆಕರ್ಷಕ ಫೀಚರ್​​ವುಳ್ಳ ಸ್ಮಾರ್ಟ್​ಫೋನ್​ಗಳ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.

ಸ್ಯಾಮ್​ಸಂಗ್ ಗ್ಯಾಲಕ್ಸಿ M04: ಭಾರತೀಯ ಮಾರುಕಟ್ಟೆಯಲ್ಲಿ ಕಳೆದ ತಿಂಗಳು ಡಿಸೆಂಬರ್​ನಲ್ಲಿ ಬಿಡುಗಡೆ ಆದ ಈ ಸ್ಮಾರ್ಟ್​ಫೋನ್​ನ ಬೆಲೆ ಕೇವಲ 9,499 ರೂ.. ಇದು 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾಟೆಕ್‌ ಹಿಲಿಯೋ P35 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಜೊತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.  5,000mAh ಸಾಮರ್ಥ್ಯದ ಬ್ಯಾಟರಿ ನೀಡಲಾಗಿದೆ.

ರೆಡ್ಮಿ 10A: 2022 ರಲ್ಲಿ ಬಜೆಟ್ ಬೆಲೆಗೆ ಬಿಡುಗಡೆ ಆದ ಮತ್ತೊಂದು ಆಕರ್ಷಕ ಸ್ಮಾರ್ಟ್​ಫೋನ್ ರೆಡ್ಮಿ 10ಎ. ಇದರ ಬೆಲೆ 8299 ರೂ.. ಇದು 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಮೀಡಿಯಾಟೆಕ್‌ ಹಿಲಿಯೋ G25SoC ಪ್ರೊಸೆಸರ್‌ ಬಲವನ್ನು ಪಡೆದಿದೆ. 13 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಈ ಕ್ಯಾಮೆರಾ LED ಫ್ಲ್ಯಾಷ್‌ನೊಂದಿಗೆ ಸಂಯೋಜಿಸಲ್ಪಟ್ಟಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು 10W ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಇದನ್ನೂ ಓದಿ

WhatsApp Voice Status: ವಾಯ್ಸ್ ಸ್ಟೇಟಸ್: ವಾಟ್ಸ್​ಆ್ಯಪ್ ಆಂಡ್ರಾಯ್ಡ್ ಬಳಕೆದಾರರಿಗೆ ಬರುತ್ತಿದೆ ಅಚ್ಚರಿಯ ಫೀಚರ್

ಟೆಕ್ಮೋ ಸ್ಪಾರ್ಕ್ 9: ಟೆಕ್ನೋ ಕಂಪನಿಯ ಟೆಕ್ನೋ ಸ್ಪಾರ್ಕ್ 9 ಸ್ಮಾರ್ಟ್​ಫೋನ್ 6.6 ಇಂಚಿನ ಡಿಸ್ ಪ್ಲೇ ಜೊತೆಗೆ 90Hz ರಿಫ್ರೆಶ್ ರೇಟ್, MediaTek Helio G37 ಚಿಪ್‌ಸೆಟ್, 13MP ಹಿಂಬದಿಯ ಕ್ಯಾಮೆರಾ ಮತ್ತು 8MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. 5000mAh ಬ್ಯಾಟರಿಯನ್ನು ನೀಡಲಾಗಿದೆ. ಈ ಫೋನ್‌ನ 4GB/64GB ರೂಪಾಂತರವನ್ನು ಅಮೆಜಾನ್​ನಲ್ಲಿ ಕೇವಲ 7799 ರೂ. ಗೆ ಖರೀದಿಸಬಹುದು.

ರಿಯಲ್‌ಮಿ ನಾರ್ಜೊ 50i: ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್ 9863 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11 ಆಧಾರಿತ ರಿಯಲ್‌ಮಿ UI ಗೋ ಆವೃತ್ತಿ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್‌ 8 ಮೆಗಾ ಪಿಕ್ಸೆಲ್ AI ರಿಯರ್ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ 5 ಮೆಗಾ ಪಿಕ್ಸೆಲ್ AI ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ ಕೇವಲ 6,499 ರೂ. ಆಗಿದೆ.

ರೆಡ್ಮಿ 9A ಸ್ಪೋರ್ಟ್: ಈ ಫೋನ್ 6.53 ಇಂಚಿನ HD + LCD ಡಿಸ್‌ಪ್ಲೇ ಹೊಂದಿದೆ. ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G25 SoC ಪ್ರೊಸೆಸರ್‌ ಶಕ್ತಿಯನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ MIUI 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3 GB RAM ಮತ್ತು 32 GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಈ ಫೋನ್‌ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಅಲ್ಲದೆ 5 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 5,000 mAh ಬ್ಯಾಟರಿ ಯನ್ನು ಹೊಂದಿದ್ದು, ಇದು 10W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಫೋನ್ AI ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ. ಇದರ ಬೆಲೆ ಕೇವಲ 6,999 ರೂ. ಆಗಿದೆ.

ಹೆಚ್ಚಿನ ಟೆಕ್ ಸ್ಟೋರಿ ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada