ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ರಾಜ್ಯ ತುದಿಗಾಲಲ್ಲಿ ನಿಂತಿದೆ: ಸುರೇಶಕುಮಾರ್

ಬೆಂಗಳೂರು:ಕೇಂದ್ರ ಸರಕಾರ ರೂಪಿಸಿರುವ ಹೊಸ ಶಿಕ್ಷಣ ನೀತಿ-2019 ಅನ್ನು ಮೊದಲು ಜಾರಿಗೊಳಿಸುವ ರಾಜ್ಯಗಳಲ್ಲಿ ಕರ್ನಾಟಕ ಕೂಡ ಒಂದೆನಿಸಿಕೊಳ್ಳಲಿದೆಯೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

ಶುಕ್ರವಾರದಂದು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿ ಅಧ್ಯಕ್ಷರಾದ ಡಾ. ಕೆ. ಕಸ್ತೂರಿರಂಗನ್ ಅವರೊಂದಿಗೆ ವೆಬಿನಾರ್ ಮೂಲಕ ಮಾತನಾಡಿದ ಸುರೇಶ್ ಕುಮಾರ್, ವಿವಿಧ ಸ್ತರಗಳ ಮತ್ತು ದೇಶದಲ್ಲಿ ಎಲ್ಲರಿಗೂ ಅನ್ವಯವಾಗಬಹುದಾದ ನೂತನ ಶಿಕ್ಷಣ ನೀತಿಯನ್ನು ಶ್ರಮವಹಿಸಿ ರೂಪಿಸಿದ್ದಕ್ಕೆ ಕರ್ನಾಟಕ ಸರ್ಕಾರದ ಪರವಾಗಿ ಧನ್ಯವಾದ ಅರ್ಪಿಸಿದರು.

ಮೂವತ್ನಾಲ್ಕು ವರ್ಷಗಳ ಬಳಿಕ ಪ್ರಸಕ್ತ ಹಾಗೂ ಭವಿಷ್ಯದ ಶೈಕ್ಷಣಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಶಿಕ್ಷಣದ ಎಲ್ಲಾ ಮಜಲುಗಳನ್ನು ಹೊಂದಿರುವ ಒಂದು ಸಮಗ್ರ ನೀತಿಯಾಗಿದೆ, ಇದು ಸರ್ವರಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದರೊಂದಿಗೆ ಒಂದು ಧೃಡ, ಸಮಾನತೆ ಹಾಗೂ ಜೀವಂತಿಕೆಯುಳ್ಳ ಸಮಾಜ ನಿರ್ಮಿಸಲು ಶಕ್ತವಾಗಿದೆ ಮತ್ತು ಇದನ್ನು ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರ ಉತ್ಸುಕವಾಗಿದೆ ಎಂದು ಸಚಿವರು ಹೇಳಿದರು.

ಏತನ್ಮಧ್ಯೆ, ಕಸ್ತೂರಿರಂಗನ್ ಮಾತಾಡಿ ಮುಂದಿನ ಇಪ್ಪತ್ತು ವರ್ಷಗಳಲ್ಲಿ ದೇಶವು ಕ್ಷಿಪ್ರ ಗತಿಯಲ್ಲಿ ಅಭಿವೃದ್ಧಿ ಹೊಂದುವ ಗುರಿಯೊಂದಿಗೆ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ ಎಂದರು.

Related Tags:

Related Posts :

Category:

error: Content is protected !!