ರಾಜ್ಯದಲ್ಲಿ 500ಕ್ಕಿಂತ ಕೆಳಗಿಳಿದ ಕೊವಿಡ್-19 ಸೋಂಕಿತರ ಸಂಖ್ಯೆ, ಇಂದು ಮೂರು ಸಾವು

ರಾಜ್ಯದಲ್ಲಿಂದು ಕೊರೊನಾ ಸೋಂಕು ಪೀಡಿತರ ಸಂಖ್ಯೆ 500 ಕ್ಕಿಂತ ಕೆಳಗಿಳಿದಿದೆ. ಕಳೆದ 24 ಗಂಟೆಗಳಲ್ಲಿ 3 ಜನ ಬಲಿಯಾಗಿದ್ದು ಅವರೆಲ್ಲ ಬೆಂಗಳೂರಿನವರಾಗಿದ್ದಾರೆ.

  • TV9 Web Team
  • Published On - 22:58 PM, 14 Jan 2021
ಪ್ರಾತಿನಿಧಿಕ ಚಿತ್ರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿಯನ್ವಯ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 408 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 12,155 ಜನ ಮರಣಿಸಿದ್ದಾರೆ ಮತ್ತು ಒಟ್ಟು ಸೋಂಕಿತರ ಸಂಖ್ಯೆ 9,29,960 ಕ್ಕೇರಿದೆ.

ಸೋಂಕಿತರ ಪೈಕಿ 9,09,058 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 8,728 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಕೊವಿಡ್-19 ಪಿಡುಗಿಗೆ 3 ಜನ ಬಲಿಯಾಗಿದ್ದಾರೆ  ಮತ್ತು ಕಳೆದ 24 ಗಂಟೆಗಳಲ್ಲಿ 141 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದರಲ್ಲಿ ಕೊರೊನಾದಿಂದ ಇದುವರೆಗೆ 4,355 ಜನ ಸತ್ತಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,93,814 ತಲುಪಿದೆ.

ಸೋಂಕಿತರ ಪೈಕಿ 3,83,897 ಜನ ಗುಣಮುಖರಾಗಿದ್ದಾರೆ ಮತ್ತು ಉಳಿದ 5,561 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.