2nd PUC
ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಎರಡು ಹಂತಗಳು ಜೀವನದ ಮಹತ್ವದ ಘಟ್ಟಗಳಾಗಿವೆ. ಶಾಲೆಯಿಂದ ಕಾಲೇಜು ಮೆಟ್ಟಿಲು ಏರಲು ಮೊದಲಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರಂತೆ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ವ್ಯಾಸಂಗಕ್ಕಾಗಿ ದ್ವಿತಿಯ ಪಿಯುಸಿ ಪಾಸಾಗಲೇಬೇಕು. ಈ ಎರಡು ತರಗತಿಗಳಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಒಳ್ಳೆಯ ಮಾರ್ಕ್ಸ್ ಪಡೆದರೆ ಅವರ ಮುಂದಿನ ಜೀವನ ಚೆನ್ನಾಗಿರುತ್ತದೆ. ಹೇಗೆ 10ನೇ ತರಗತಿ ಪರೀಕ್ಷೆಗಳು ಬಿಗಿ ಬಂದೋಬಸ್ತ್ನಲ್ಲಿ ನಡೆಯುತ್ತವೆಯೇ ಹಾಗೇ ದ್ವಿತಿಯ ಪಿಯುಸಿ ಪರೀಕ್ಷೆಗಳು ಸಹ ನಡೆಸಲಾಗುತ್ತದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಅಂದರೆ ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಪಿಯು ಬೋರ್ಡ್ ಈ ಪರೀಕ್ಷೆಯನ್ನು ನಡೆಸುತ್ತದೆ. ಮೊದಲಿಗೆ ಪೂರ್ವ ಸಿದ್ಧತಾ ಪರೀಕ್ಷೆಗಳು ಆಯಾ ಶಾಲೆಗಳಲ್ಲಿ ನಡೆಯುತ್ತವೆ. ಬಳಿಕ ಶಿಕ್ಷಣ ಇಲಾಖೆ ಪ್ರಕಟಿಸಿದ ವೇಳಾಪಟ್ಟಿಯಂತೆ ಅಂತಿಮ ಪರೀಕ್ಷೆಗಳು ನಡೆಯುತ್ತವೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಲ್ಲಿ ಪರೀಕ್ಷೆಗಳು ನಡೆಯುತ್ತವೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಮುಂದಿನ ಉನ್ನತ ಶಿಕ್ಷಣದ ಭವಿಷ್ಯ ನಿಂತಿರುತ್ತದೆ.