Assembly Elections
ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ವಿಧಾನಸಭಾ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಆಯಾ ರಾಜ್ಯದ ವಿಧಾನಸಭೆ ಚುನಾವಣೆಗಳು ಐದು ವರ್ಷಕ್ಕೊಮ್ಮೆ ನಡೆಯುತ್ತವೆ. ವಿಶೇಷ ಸಮದರ್ಭಗಳಲ್ಲಿ ಮಾತ್ರಾ ಅದಕ್ಕೂ ಮುಂಚೆ ನೆಡಯಬಹುದು. ಆಯಾ ರಾಜ್ಯಗಳಲ್ಲಿ ಇಂತಿಷ್ಟು ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಜನರಿಂದ ಆಯ್ಕೆಯಾದವರನ್ನು ವಿಧಾನಸಭೆ ಶಾಸಕರು ಎಂದು ಕರೆಯಲಾಗುತ್ತದೆ. ವಿಧಾನಸಭೆ ಚುನಾವಣೆಯನ್ನು ರಾಜ್ಯ ಚುನಾವಣೆ ಆಯೋಗವು ನಡೆಸುತ್ತದೆ. ಹಾಗಂತ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ಇರುವುದಿಲ್ಲ ಅಂತ ಅರ್ಥ ಅಲ್ಲ. ಕೇಂದ್ರ ಚುನಾವಣೆಗೂ ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡುತ್ತೆ. ಅದರ ಸಲಹೆ ಸೂಚನೆಗಳ ಮೇರೆಗೆ ರಾಜ್ಯ ಚುನಾವಣೆ ಆಯೋಗವು ಆಯಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತೆ.
ಕೇಂದ್ರದಲ್ಲಿ ಲೋಕಸಭೆ ಕೆಳಮನೆಯಾದರೆ, ರಾಜ್ಯಸಭೆ ಮೇಲ್ಮನೆಯಾಗಿರುತ್ತದೆ. ಅಂತೆಯೇ ರಾಜ್ಯಗಳಲ್ಲಿ ವಿಧಾನಸಭೆ ಕೆಳಮನೆಯಾಗಿದ್ದು, ವಿಧಾನ ಪರಿಷತ್ತು ಮೇಲ್ಮನೆಯಾಗಿರುತ್ತದೆ. ವಿಧಾನ ಪರಿಷತ್ತು ಎಲ್ಲ ರಾಜ್ಯಗಳಲ್ಲೂ ಕಡ್ಡಾಯವಲ್ಲ. ಸದ್ಯಕ್ಕೆ ಭಾರತದ 7 ರಾಜ್ಯಗಳು ವಿಧಾನ ಪರಿಷತ್ತು ಹೊಂದಿವೆ. ರಾಜ್ಯದ ಸ್ಥಾನ ಮಾನವಿಲ್ಲದ ಎರಡು ಕೇಂದ್ರಾಡಳಿತ ಪ್ರದೇಶಗಳು ವಿಧಾನಸಭೆಯನ್ನು ಹೊಂದಿವೆ. ಅವುಗಳೆಂದರೆ ದೆಹಲಿ ಮತ್ತು ಪುದುಚೇರಿ.
ವಿಧಾನಸಭೆಯ ಸದಸ್ಯರು ವಿಧಾನಸಭೆಯ ವ್ಯಾಪ್ತಿಯ ಒಂದು ಕ್ಷೇತ್ರದ ಹದಿನೆಂಟು ವಯಸ್ಸು ಮೀರಿದ ಮತದಾರರಿಂದ ನೇರವಾಗಿ ಆಯ್ಕೆಯಾಗಿರುತ್ತಾರೆ. ವಿಧಾನಸಭೆಯ ಸದಸ್ಯರ ಬಲವನ್ನು ಭಾರತದ ಸಂವಿಧಾನ 60ಕ್ಕೆ ಕಡಿಮೆ ಹಾಗು 500ಕ್ಕೆ ಹೆಚ್ಚು ಇರಬಾರದು ಎಂದು ನಮೂದಿಸಿದೆ. ಆದಾಗ್ಯೂ ಕೆಲ ಚಿಕ್ಕ ರಾಜ್ಯಗಳ ವಿಚಾರದಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕೆ ಕಡಿಮೆಯಿದೆ. ಗೋವಾ, ಸಿಕ್ಕಿಂ, ಮಿಝೋರಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕಿಂತಲೂ ಕಡಿಮೆಯಿದ್ದು ಆ ರಾಜ್ಯಗಳಿಗೆ ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ವಿಚಾರದಲ್ಲಿ ಸಡಿಲಿಕೆ ಕೊಡಲಾಗಿದೆ.