AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Elections

Assembly Elections

ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ವಿಧಾನಸಭಾ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಆಯಾ ರಾಜ್ಯದ ವಿಧಾನಸಭೆ ಚುನಾವಣೆಗಳು ಐದು ವರ್ಷಕ್ಕೊಮ್ಮೆ ನಡೆಯುತ್ತವೆ. ವಿಶೇಷ ಸಮದರ್ಭಗಳಲ್ಲಿ ಮಾತ್ರಾ ಅದಕ್ಕೂ ಮುಂಚೆ ನೆಡಯಬಹುದು. ಆಯಾ ರಾಜ್ಯಗಳಲ್ಲಿ ಇಂತಿಷ್ಟು ವಿಧಾನಸಭಾ ಕ್ಷೇತ್ರಗಳಿದ್ದು, ಆಯಾ ಕ್ಷೇತ್ರಗಳಲ್ಲಿ ಜನರಿಂದ ಆಯ್ಕೆಯಾದವರನ್ನು ವಿಧಾನಸಭೆ ಶಾಸಕರು ಎಂದು ಕರೆಯಲಾಗುತ್ತದೆ. ವಿಧಾನಸಭೆ ಚುನಾವಣೆಯನ್ನು ರಾಜ್ಯ ಚುನಾವಣೆ ಆಯೋಗವು ನಡೆಸುತ್ತದೆ. ಹಾಗಂತ ಕೇಂದ್ರ ಚುನಾವಣಾ ಆಯೋಗಕ್ಕೆ ಮಾಹಿತಿ ಇರುವುದಿಲ್ಲ ಅಂತ ಅರ್ಥ ಅಲ್ಲ. ಕೇಂದ್ರ ಚುನಾವಣೆಗೂ ರಾಜ್ಯ ಚುನಾವಣೆ ಆಯೋಗ ಮಾಹಿತಿ ನೀಡುತ್ತೆ. ಅದರ ಸಲಹೆ ಸೂಚನೆಗಳ ಮೇರೆಗೆ ರಾಜ್ಯ ಚುನಾವಣೆ ಆಯೋಗವು ಆಯಾ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸುತ್ತೆ.

ಕೇಂದ್ರದಲ್ಲಿ ಲೋಕಸಭೆ ಕೆಳಮನೆಯಾದರೆ, ರಾಜ್ಯಸಭೆ ಮೇಲ್ಮನೆಯಾಗಿರುತ್ತದೆ. ಅಂತೆಯೇ ರಾಜ್ಯಗಳಲ್ಲಿ ವಿಧಾನಸಭೆ ಕೆಳಮನೆಯಾಗಿದ್ದು, ವಿಧಾನ ಪರಿಷತ್ತು ಮೇಲ್ಮನೆಯಾಗಿರುತ್ತದೆ. ವಿಧಾನ ಪರಿಷತ್ತು ಎಲ್ಲ ರಾಜ್ಯಗಳಲ್ಲೂ ಕಡ್ಡಾಯವಲ್ಲ. ಸದ್ಯಕ್ಕೆ ಭಾರತದ 7 ರಾಜ್ಯಗಳು ವಿಧಾನ ಪರಿಷತ್ತು ಹೊಂದಿವೆ. ರಾಜ್ಯದ ಸ್ಥಾನ ಮಾನವಿಲ್ಲದ ಎರಡು ಕೇಂದ್ರಾಡಳಿತ ಪ್ರದೇಶಗಳು ವಿಧಾನಸಭೆಯನ್ನು ಹೊಂದಿವೆ. ಅವುಗಳೆಂದರೆ ದೆಹಲಿ ಮತ್ತು ಪುದುಚೇರಿ.

ವಿಧಾನಸಭೆಯ ಸದಸ್ಯರು ವಿಧಾನಸಭೆಯ ವ್ಯಾಪ್ತಿಯ ಒಂದು ಕ್ಷೇತ್ರದ ಹದಿನೆಂಟು ವಯಸ್ಸು ಮೀರಿದ ಮತದಾರರಿಂದ ನೇರವಾಗಿ ಆಯ್ಕೆಯಾಗಿರುತ್ತಾರೆ. ವಿಧಾನಸಭೆಯ ಸದಸ್ಯರ ಬಲವನ್ನು ಭಾರತದ ಸಂವಿಧಾನ 60ಕ್ಕೆ ಕಡಿಮೆ ಹಾಗು 500ಕ್ಕೆ ಹೆಚ್ಚು ಇರಬಾರದು ಎಂದು ನಮೂದಿಸಿದೆ. ಆದಾಗ್ಯೂ ಕೆಲ ಚಿಕ್ಕ ರಾಜ್ಯಗಳ ವಿಚಾರದಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕೆ ಕಡಿಮೆಯಿದೆ. ಗೋವಾ, ಸಿಕ್ಕಿಂ, ಮಿಝೋರಾಂ ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚ್ಚೇರಿಯಲ್ಲಿ ವಿಧಾನ ಸಭಾ ಸದಸ್ಯರ ಸಂಖ್ಯೆ 60ಕ್ಕಿಂತಲೂ ಕಡಿಮೆಯಿದ್ದು ಆ ರಾಜ್ಯಗಳಿಗೆ ವಿಧಾನಸಭಾ ಸದಸ್ಯರ ಸಂಖ್ಯಾ ಬಲದ ವಿಚಾರದಲ್ಲಿ ಸಡಿಲಿಕೆ ಕೊಡಲಾಗಿದೆ.

 

ಇನ್ನೂ ಹೆಚ್ಚು ಓದಿ

ಐದು ರಾಜ್ಯಗಳಲ್ಲಿ ಹೊಸ ಸರ್ಕಾರ; ವೇಗವಾಗಿ ಪಿಕಪ್ ಆದವೆಷ್ಟು, ಆಕ್ಸಲರೇಟರ್ ಆಗದ ಸರ್ಕಾರಗಳೆಷ್ಟು?

How's the performance of 5 new governments: ಪಂಚರಾಜ್ಯ ವಿಧಾನಸಭಾ ಚುನಾವಣೆಗಳ ನಂತರ ಐದು ಹೊಸ ಸರ್ಕಾರಗಳು ಅಸ್ತಿತ್ವಕ್ಕೆ ಬಂದಿವೆ. ಕೇರಳ, ತಮಿಳುನಾಡು, ಪುದುಚೆರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್ ವಿಧಾನಸಭಾ ಚುನಾವಣೆಯಲ್ಲಿ ಪುದುಚೆರಿ, ಪಶ್ಚಿಮ ಬಂಗಾಳ ಮತ್ತು ಅಸ್ಸಾಮ್​ನಲ್ಲಿ ಎನ್​ಡಿಎ ಅಧಿಕಾರ ಹಿಡಿದಿದೆ. ತಮಿಳುನಾಡಿನಲ್ಲಿ ಟಿವಿಕೆ ಹಾಗೂ ಕೇರಳದಲ್ಲಿ ಯುಡಿಎಫ್​ಗೆ ಅಧಿಕಾರ ಸಿಕ್ಕಿದೆ. ಈ ಪೈಕಿ ಆರಂಭಿಕ ಹಂತದಲ್ಲಿ ಎದ್ದವರೆಷ್ಟು, ಬಿದ್ದವರೆಷ್ಟು?

ಹಿಮಾಚಲ ಸ್ಥಳೀಯ ಸಂಸ್ಥೆ ಚುನಾವಣೆ; ಆಡಳಿತಾರೂಢ ಕಾಂಗ್ರೆಸ್​ಗೆ ಆಘಾತ; ಬಿಜೆಪಿ ಗೆಲುವಿನ ಕೇಕೆ

BJP victory in Himachal Local Body elections: ಹಿಮಾಚಲ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಮೂರು ಮಹಾನಗರ ಪಾಲಿಕೆಗಳ (Municipal Corporations) ಚುನಾವಣೆಯಲ್ಲಿ ವಿರೋಧ ಪಕ್ಷವಾದ ಬಿಜೆಪಿ ಭರ್ಜರಿ ಜಯ ಸಾಧಿಸುವ ಮೂಲಕ ಗದ್ದುಗೆ ಹಿಡಿದಿದೆ. ಮೇ 31, 2026 ರಂದು ಹೊರಬಿದ್ದಿರುವ ಈ ಮಹತ್ವದ ಚುನಾವಣಾ ಫಲಿತಾಂಶದ ವಿವರ ಇಲ್ಲಿದೆ.

ತಮಿಳುನಾಡು ರಾಜಕೀಯದಲ್ಲಿ ಹೊಸ ತಿರುವು; ಎಐಎಡಿಎಂಕೆಗೆ ರಾಜೀನಾಮೆ ನೀಡಿ ಟಿವಿಕೆಯತ್ತ ಮುಖ ಮಾಡಿದ 3 ಶಾಸಕರು

ತಮಿಳುನಾಡಿನ ಮೂವರು ಎಐಎಡಿಎಂಕೆ ಶಾಸಕರು ರಾಜೀನಾಮೆ ನೀಡಿದ್ದಾರೆ. ಈ 3 ಎಐಎಡಿಎಂಕೆ ಶಾಸಕರು ಟಿವಿಕೆಗೆ ಸೇರ್ಪಡೆಗೊಳ್ಳುವುದಾಗಿ ಘೋಷಿಸಿದ್ದಾರೆ. ಮಧುರಾಂತಕಂ ಶಾಸಕ ಮರಗತಮ್ ಕುಮಾರವೇಲ್, ಪೆರುಂಡುರೈ ಶಾಸಕ ಜಯಕುಮಾರ್ ಮತ್ತು ತಾರಾಪುರಂ ಶಾಸಕ ಸತ್ಯಭಾಮ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಗಳು ಮುಗಿದಿದ್ದರೂ ರಾಜಕೀಯ ಉದ್ವಿಗ್ನತೆ ಇನ್ನೂ ಕಡಿಮೆಯಾಗಿಲ್ಲ. ಈ ಮೂಲಕ ಎಐಎಡಿಎಂಕೆ ನಾಯಕ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ರೆಬೆಲ್ ಬಣದ ಶಾಸಕರು ಶಾಕ್ ನೀಡಿದ್ದಾರೆ.

ಬೆನ್ನಿಗೆ ಚೂರಿ ಹಾಕಿದವರನ್ನು ಮತ್ತೆ ನಂಬುವುದಿಲ್ಲ; ಕಾಂಗ್ರೆಸ್ ವಿರುದ್ಧ ಉದಯನಿಧಿ ಸ್ಟಾಲಿನ್ ಆಕ್ರೋಶ

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ತಮಿಳುನಾಡಿನಲ್ಲಿ ಅಧಿಕಾರಕ್ಕಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಕೈಜೋಡಿಸಿದ ನಂತರ, ತಮ್ಮ ಪಕ್ಷವನ್ನು ಕಾಂಗ್ರೆಸ್ ನಮ್ಮ ಬೆನ್ನಿಗೆ ಇರಿದಿದೆ ಎಂದು ಡಿಎಂಕೆ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಇದಲ್ಲದೆ, ತಮ್ಮ ಪಕ್ಷವು ಮತ್ತೆ ಎಂದಿಗೂ ಕಾಂಗ್ರೆಸ್ ಅನ್ನು ನಂಬುವುದಿಲ್ಲ ಎಂದು ಅವರು ಹೇಳಿದ್ದಾರೆ. ಚೆನ್ನೈನಲ್ಲಿ ನಡೆದ ಡಿಎಂಕೆ ಯುವ ಘಟಕದ ಸಭೆಯಲ್ಲಿ ಉದಯನಿಧಿ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮತ್ತು ಡಿಎಂಕೆ 2026 ರ ತಮಿಳುನಾಡು ಚುನಾವಣೆಯಲ್ಲಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ಸ್ಪರ್ಧಿಸಿದವು. ಡಿಎಂಕೆ 59 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 5 ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿತು. ಫಲಿತಾಂಶಗಳು ಪ್ರಕಟವಾದ ನಂತರ ಟಿವಿಕೆ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತು.

Tamil Nadu Cabinet Expansion: ತಮಿಳುನಾಡು ಸರ್ಕಾರದ ಸಂಪುಟ ವಿಸ್ತರಣೆ, ವಿಜಯ್ ಸಂಪುಟ ಸೇರಿದ 23 ಶಾಸಕರು, ಕಾಂಗ್ರೆಸ್ ಶಾಸಕರಿಗೂ ಸಚಿವ ಸ್ಥಾನ

ತಮಿಳುನಾಡು ರಾಜಕೀಯದಲ್ಲಿ ಇಂದು ಅತ್ಯಂತ ಐತಿಹಾಸಿಕ ಹಾಗೂ ಮಹತ್ವದ ತಿರುವು ಸಿಕ್ಕಿದೆ. ಸಿನಿಮಾ ರಂಗದಿಂದ ರಾಜಕೀಯಕ್ಕೆ ಬಂದು ಧೂಳೆಬ್ಬಿಸಿರುವ ಮುಖ್ಯಮಂತ್ರಿ ವಿಜಯ್ (TVK ಪಕ್ಷ) ತಮ್ಮ ಮೊದಲ ಪ್ರಮುಖ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಮೈತ್ರಿ ಸರ್ಕಾರದ ಈ ನೂತನ ರಾಜಕೀಯ ಬೆಳವಣಿಗೆಯ ವಿವರ ಇಲ್ಲಿದೆ.

ಕೇರಳ ಯುಡಿಎಫ್ ಸರ್ಕಾರದ ಮೊದಲ ಸಂಪುಟ; ಕಾಂಗ್ರೆಸ್​ಗೆ 12, ಮುಸ್ಲಿಂ ಲೀಗ್​ಗೆ 5 ಸ್ಥಾನಗಳಾ?

UDF Ministry Formation Kerala: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಯುಡಿಎಫ್ ಮೈತ್ರಿಕೂಟ ಸರ್ಕಾರ ರಚನೆಗೆ ಸಜ್ಜಾಗಿದೆ. ವಿ.ಡಿ. ಸತೀಶನ್ ಮೇ 18 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ, ಸಂಪುಟ ಸದಸ್ಯರ ಆಯ್ಕೆ ಹಾಗೂ ಖಾತೆ ಹಂಚಿಕೆಗಾಗಿ ಮೈತ್ರಿಪಕ್ಷಗಳ ನಡುವೆ ತೀವ್ರ ರಾಜಕೀಯ ಕಸರತ್ತು ನಡೆಯುತ್ತಿದೆ. ಕಾಂಗ್ರೆಸ್‌ಗೆ ಸಿಂಹಪಾಲು ಸಿಗುವ ನಿರೀಕ್ಷೆಯಿದೆ. ರಮೇಶ್ ಚೆನ್ನಿತ್ತಲ ಗೃಹ ಇಲಾಖೆಯೊಂದಿಗೆ ಸಚಿವ ಸಂಪುಟ ಸೇರಲಿದ್ದಾರೆ. ಮೈತ್ರಿಪಕ್ಷಗಳು ತಮ್ಮ ಪಾಲುಗಾಗಿ ಪಟ್ಟು ಹಿಡಿದಿವೆ.

ವಕೀಲರ ಕೋಟ್ ಧರಿಸಿ ಹೈಕೋರ್ಟ್​ಗೆ ಬಂದ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದ ಬಾರ್ ಕೌನ್ಸಿಲ್

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಹಿಂದೆ ಎಸ್​ಐಆರ್​ ಕುರಿತು ಸುಪ್ರೀಂ ಕೋರ್ಟ್​ನಲ್ಲಿ ತಾವೇ ವಾದ ಮಂಡಿಸಿದ್ದರು. ಇಂದು ಕೊಲ್ಕತ್ತಾ ಹೈಕೋರ್ಟ್​ಗೆ ವಕೀಲರ ಗೌನ್ ಧರಿಸಿ ಬಂದಿದ್ದ ಮಮತಾ ಬ್ಯಾನರ್ಜಿ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ತಾವೇ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮಮತಾ ಬ್ಯಾನರ್ಜಿ ಅವರ ವಕೀಲ ವೃತ್ತಿಯ ಪ್ರಾಕ್ಟಿಸ್ ದಾಖಲೆಗಳನ್ನು ಸಲ್ಲಿಸುವಂತೆ ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್​ಗೆ ಸೂಚನೆ ನೀಡಿದೆ.

ಕಾಂಗ್ರೆಸ್​ ಪಕ್ಷದ ಆಪದ್ಭಾಂಧವ ಸತೀಶನ್ ಈಗ ಕೇರಳದ ಸಿಎಂ; ಹೇಗಿತ್ತು ಅವರ ರಾಜಕೀಯ ಜೀವನ?

Kerala CM: ಕೇರಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದು 10 ದಿನಗಳ ಬಳಿಕ ಕೊನೆಗೂ ಕಾಂಗ್ರೆಸ್ ಮುಖ್ಯಮಂತ್ರಿಯ ಹೆಸರನ್ನು ಘೋಷಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಶನ್ ಅವರಿಗೆ ಸಿಎಂ ಸ್ಥಾನ ಒಲಿದಿದೆ. 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸತೀಶನ್ ಈ ಬಾರಿಯ ಚುನಾವಣೆಯಲ್ಲಿ ಯುಡಿಎಫ್‌ಗೆ 100ಕ್ಕೂ ಹೆಚ್ಚು ಸ್ಥಾನಗಳು ಸಿಗಲಿವೆ ಎಂದು ಭವಿಷ್ಯ ನುಡಿದಿದ್ದರು. ಕಾಂಗ್ರೆಸ್​​ನ ತಳಮಟ್ಟದ ಕಾರ್ಯಕರ್ತರಾಗಿದ್ದ ಅವರ ರಾಜಕೀಯ ಪಯಣ ಹೇಗಿತ್ತು? ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಇನ್ನೂ ನಿಗೂಢವಾಗಿಯೇ ಇದೆ ಕೇರಳಂ ಸಿಎಂ ಹೆಸರು; ನಾಳೆ ಕಾಂಗ್ರೆಸ್​​ನಿಂದ ಅಧಿಕೃತ ಘೋಷಣೆ

ಕೇರಳದ ಚುನಾವಣಾ ಫಲಿತಾಂಶ ಹೊರಬಿದ್ದು 9 ದಿನಗಳು ಕಳೆದಿವೆ. ಯುಡಿಎಫ್ ಬಹುಮತ ಪಡೆದಿದ್ದರೂ ಕಾಂಗ್ರೆಸ್ ಇನ್ನೂ ಸಿಎಂ ಅಭ್ಯರ್ಥಿ ಯಾರೆಂಬುದನ್ನು ಘೋಷಿಸಿಲ್ಲ. ವಿಧಾನಸಭಾ ಚುನಾವಣೆ ನಡೆದ ಬೇರೆ ರಾಜ್ಯಗಳಲ್ಲಿ ನೂತನ ಸರ್ಕಾರ ರಚನೆಯಾಗಿದ್ದರೂ ಕೇರಳಂನಲ್ಲಿ ಮಾತ್ರ ಇನ್ನೂ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಒಮ್ಮತದ ಅಭಿಪ್ರಾಯಕ್ಕೆ ಬರಲು ಕಾಂಗ್ರೆಸ್ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಹುಲ್ ಗಾಂಧಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಸಿಎಂ ಯಾರಾಗಲಿದ್ದಾರೆ ಎಂಬುದು ಅಂತಿಮವಾಗಿದೆ ಎನ್ನಲಾಗುತ್ತಿದೆ. ನಾಳೆ ಕೇರಳಂ ನೂತನ ಸಿಎಂ ಹೆಸರು ಘೋಷಣೆಯಾಗಲಿದೆ.

ಭವಾನಿಪುರ ಕ್ಷೇತ್ರ ಉಳಿಸಿಕೊಂಡು ನಂದಿಗ್ರಾಮದ ಶಾಸಕ ಸ್ಥಾನಕ್ಕೆ ಬಂಗಾಳದ ಸಿಎಂ ಸುವೇಂದು ಅಧಿಕಾರಿ ರಾಜೀನಾಮೆ

ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿರುವ ಸುವೇಂದು ಅಧಿಕಾರಿ 2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಎರಡೂ ಕಡೆ ಅವರು ಗೆಲುವು ಸಾಧಿಸಿದ್ದರು. ಇದೀಗ ಒಂದು ಕ್ಷೇತ್ರವನ್ನು ಅವರು ಬಿಡಬೇಕಾಗಿರುವುದರಿಂದಾಗಿ ಭವಾನಿಪುರ ಸ್ಥಾನವನ್ನು ಉಳಿಸಿಕೊಳ್ಳಲಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಿ ತಮ್ಮ ಭವಾನಿಪುರ ಭದ್ರಕೋಟೆಯಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಸುವೇಂದು ಅಧಿಕಾರಿ 15,105 ಮತಗಳ ಅಂತರದಿಂದ ಸೋಲಿಸಿದ್ದರು.

ನಾಳೆ ವಿಜಯ್ ಸರ್ಕಾರದ ಭವಿಷ್ಯ ನಿರ್ಧಾರ; ವಿಶ್ವಾಸಮತ ಯಾಚನೆ ವೇಳೆ ಮತದಾನ ಹೇಗೆ ನಡೆಯುತ್ತದೆ?

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಸರ್ಕಾರದ ವಿರುದ್ಧ ಮೇ 13ರಂದು ಬೆಳಿಗ್ಗೆ 9.30ಕ್ಕೆ ವಿಶ್ವಾಸಮತ ಯಾಚನೆ ನಡೆಯಲಿದೆ. ಸಿಎಂ ವಿಜಯ್ ಅವರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಸರ್ಕಾರಿ ನಿರ್ಣಯದ ಮೇಲೆ ಶಾಸಕರು ಮತ ಚಲಾಯಿಸಲಿದ್ದಾರೆ. ಸದ್ಯಕ್ಕೆ ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರವು 118ಕ್ಕೂ ಹೆಚ್ಚು ಶಾಸಕರ ಬೆಂಬಲವನ್ನು ಹೊಂದಿದೆ. ಇದರಿಂದಾಗಿ, ಟಿವಿಕೆ ಸರ್ಕಾರ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಹೇಳಲಾಗುತ್ತಿದೆ.

ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್-ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ

ವಿಧಾನಸಭೆ ಪ್ರಮಾಣ ವಚನ ಸ್ವೀಕಾರದ ನಂತರ ತಮಿಳುನಾಡು ಸಿಎಂ ವಿಜಯ್ ಅವರು ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿ ಮಾಡಿದ್ದಾರೆ. ಇದು ಭಾರೀ ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಯನ್ನು ಸ್ಟಾಲಿನ್ ಮತ್ತು ಅವರ ಮಗ ಉದಯನಿಧಿ ಸ್ಟಾಲಿನ್ ಅವರು ಆತ್ಮೀಯ ಸ್ವಾಗತದೊಂದಿಗೆ ಸ್ವಾಗತಿಸಿದರು. ಏಪ್ರಿಲ್ 23ರ ಚುನಾವಣೆಗೆ ಮುಂಚಿತವಾಗಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು ಡಿಎಂಕೆ ತೀವ್ರ ಚುನಾವಣಾ ಸ್ಪರ್ಧೆಯಲ್ಲಿ ತೊಡಗಿತ್ತು. ವಿಜಯ್ ಕೂಡ ಡಿಎಂಕೆ ವಿರುದ್ಧ ಸಾಕಷ್ಟು ವಾಗ್ದಾಳಿ ನಡೆಸಿದ್ದರು. 

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ