Assembly Session

Assembly Session

ಕರ್ನಾಟಕದಲ್ಲಿ ಪ್ರತಿ ವರ್ಷ ಸಾಮಾನ್ಯವಾಗಿ ಮೂರು ಬಾರಿ ವಿಧಾನ ಮಂಡಲ ಅಧಿವೇಶನ ನಡೆಯುತ್ತದೆ. ಕೆಲವೊಂದು ಬಾರಿ ವಿಶೇಷ ಸಂದರ್ಭಗಳಲ್ಲಿ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ಬಜೆಟ್​ ಅಧಿವೇಶನ, ಮುಂಗಾರು ಮತ್ತು ಚಳಿಗಾಲದ ಅಧಿವೇಶನ ಮುಖ್ಯವಾಗಿ ಪ್ರತಿ ವರ್ಷ ನಡೆಯುವಂಥವು. ಬಜೆಟ್​ ಅಧಿವೇಶನ ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ನಡೆಯುತ್ತದೆ. ಇನ್ನು, ಚಳಿಗಾಲದ ಅಧಿವೇಶನ ಹೆಚ್ಚಾಗಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತದೆ. 2024ರ ಚಳಿಗಾಲದ ವಿಧಾನಮಂಡಲ ಅಧಿವೇಶನ ಡಿಸೆಂಬರ್ 9 ರಿಂದ ಆರಂಭವಾಗುತ್ತಿದೆ. ವಿಧಾನ ಮಂಡಲ ಅಧಿವೇಶನದಲ್ಲಿ ​ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳು ಮತ್ತು ಆಡಳಿತದಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಚರ್ಚೆಯಾಗುತ್ತದೆ. ಮಸೂದೆಗಳ ಮಂಡನೆ, ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತದೆ. ಬಜೆಟ್​ ಅಧಿವೇಶನದಲ್ಲಿ ಕರ್ನಾಟಕದ ಆಯವ್ಯಯವನ್ನು ಮಂಡಿಸಲಾಗುತ್ತದೆ. ಬಜೆಟ್​ನಲ್ಲಿ ಹೊಸ ಹೊಸ ಯೋಜನೆಗಳನ್ನು ಘೋಷಿಸಲಾಗುತ್ತದೆ. ಮತ್ತು ಇಲಾಖೆಗಳಿಗೆ ಹಣ ನೀಡಲಾಗುತ್ತದೆ. ಕರ್ನಾಟಕ ವಿಧಾನಸಭೆ 224 ಶಾಸಕರ ಬಲ ಹೊಂದಿದೆ. ಕರ್ನಾಟಕ ವಿಧಾನ ಪರಿಷತ್ತು 75 ಸದಸ್ಯರ ಖಾಯಂ ಸಂಸ್ಥೆಯಾಗಿದೆ. ಅವರಲ್ಲಿ 64 ಮಂದಿಯನ್ನು ಚುನಾಯಿತರಾಗಿ ಆಯ್ಕೆ ಮಾಡಲಾಗುತ್ತದೆ. 11 ಮಂದಿಯನ್ನು ರಾಜ್ಯಪಾಲರು ನೇಮಿಸುತ್ತಾರೆ.

ಇನ್ನೂ ಹೆಚ್ಚು ಓದಿ

ಸಿಟಿ ರವಿಯನ್ನು ಇಡೀ ರಾತ್ರಿ ಸುತ್ತಾಡಿಸಿದ್ದೇಕೆ? ಬೆಳಗಾವಿ ಪೊಲೀಸ್ ಆಯುಕ್ತ​ ಯಡಾ ಮಾರ್ಟಿನ್ ಕೊಟ್ಟ ಕಾರಣ ಇಲ್ಲಿದೆ

ಕಳೆದ ವಾರ ಬಿಜೆಪಿ ಶಾಸಕ ಸಿಟಿ ರವಿಯನ್ನು ಬಂಧಿಸಿದ ಬಳಿಕ ಬೆಳಗಾವಿ ಪೊಲೀಸರು ರಾತ್ರಿಯಿಡೀ ಅವರನ್ನು ವಿವಿಧ ಸ್ಥಳಗಳಿಗೆ ಕರೆದೊಯ್ದಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಬೆಳಗಾವಿ ನಗರ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸಿಟಿ ರವಿಯನ್ನು ಸುತ್ತಾಡಿಸಿದ್ದಕ್ಕೆ ಕೊಟ್ಟ ಕಾರಣಗಳು ಇಲ್ಲಿವೆ ನೋಡಿ.

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನ ಪರಿಷತ್ ಕಲಾಪದ ವೇಳೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಬಿಡುಗಡೆ ಮಾಡಿದರು. ಜತೆಗೆ, ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಡಿಯೋ ಇಲ್ಲಿದೆ.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರ ಹಸ್ತಕ್ಷೇಪ ಸಲ್ಲ: ಹೊರಟ್ಟಿ

ಬೆಳಗಾವಿ ಅಧಿವೇಶನದ ವೇಳೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆದಿದೆ ಎನ್ನಲಾದ ವಾಕ್ಸಮರ ವಿಚಾರದಲ್ಲಿ ಪೊಲೀಸರ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಅಲ್ಲದೆ, ಘಟನೆ ಸಂಬಂಧ ದೂರು ಕೂಡ ಸಲ್ಲಿಕೆಯಾಗಿಲ್ಲ. ದೂರು ಸಲ್ಲಿಕೆಯಾದರೆ ಆ ಬಗ್ಗೆ ಗಮನಹರಿಸುತ್ತೇವೆ ಎಂದದಿದ್ದಾರೆ.

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ: ಸರ್ಕಾರದ ವಿರುದ್ಧ ಯತ್ನಾಳ್ ಕಿಡಿ

2ಎ ಮೀಸಲಾತಿಗಾಗಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸರ್ಕಾರ, ಪೊಲೀಸ್ ಇಲಾಖೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಇದರ ಮಧ್ಯ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆಗೆ ಮಾಡಿದ್ದಕ್ಕೆ ಡಿಜಿ&ಐಜಿಪಿ ಅಲೋಕ್​​ ಮೋಹನ್​ರಿಂದ ಬಹುಮಾನ ಘೋಷಣೆ ಮಾಡಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತವಾಗಿವೆ.

ಸದನದ ಚ್ಯಾನೆಲ್​ಗಳಲ್ಲಿ ಅವಹೇಳನಕಾರಿ ಪದಬಳಕೆ ಸಿಕ್ಕಿಲ್ಲ, ಪರಿಶೀಲನೆ ಜಾರಿಯಲ್ಲಿದೆ: ಬಸವರಾಜ ಹೊರಟ್ಟಿ, ಪರಿಷತ್ ಚೇರ್ಮನ್

ಒಂದು ಪಕ್ಷ ಸಿಟಿ ರವಿಯವರು ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದರೆ ಅದನ್ನು ಎಥಿಕ್ಸ್ ಕಮಿಟಿಗೆ ಕಳಿಸಲಾಗುವುದು, ವಿಧಾನಸಭೆ ಮತ್ತು ಪರಿಷತ್ ಗೆ ಅದೇ ದೊಡ್ಡ ಮತ್ತು ನಿರ್ಣಾಯಕ ಅಂಗ, ಸಮಿತಿಯ ಸದಸ್ಯರು ಫುಟೇಜನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿ ವರದಿಯೊಂದನ್ನು ತಮಗೆ ಸಲ್ಲಿಸುತ್ತಾರೆ, ವರದಿ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೊರಟ್ಟಿ ಹೇಳಿದರು

ಸಮಯಾವಕಾಶ ಕಡಿಮೆ ಸಿಕ್ಕರೂ ವಿಷಯಗಳನ್ನು ಸಮರ್ಥವಾಗಿ ಮಂಡಿಸಿ ಸರ್ಕಾರವನ್ನು ಕಟ್ಟಿಹಾಕಿದ್ದೇವೆ: ಅರ್ ಅಶೋಕ

ವೈಯಕ್ತಿಕವಾಗಿ ತಾನು ವಕ್ಫ್ ಭೂಕಬಳಿಕೆ ಬಗ್ಗೆ ಸದನದಲ್ಲಿ ಸುಮಾರು ಎರಡು ತಾಸು ಮಾತಾಡಿದ್ದು, ಹೇಗೆ ಬ್ರಿಟಿಷರ ಕಾಲದಿಂದ ಹಿಂದೂ ದೇವಸ್ಥಾನಗಳ ಜಮೀನು ಮತ್ತು ರೈತರ ಹೊಲಗದ್ದೆಗಳನ್ನು ಮುಸ್ಲಿಂ ಓಲೈಕೆಗಾಗಿ ಕಬಳಿಸಲಾಗುತ್ತಿದೆ ಅನ್ನೋದನ್ನು ದಾಖಲೆಗಳ ಸಮೇತ ಸದನದ ಗಮನಕ್ಕೆ ತಂದು ಸರ್ಕಾರದ ಮುಖಕ್ಕೆ ಕನ್ನಡಿ ಹಿಡಿದಿರುವುದಾಗಿ ಅಶೋಕ ಹೇಳಿದರು.

ಸಿಟಿ ರವಿಯವರಿಗೆ ಜಾಮೀನು ಸಿಗುವ ಸಾಧ್ಯತೆ ಇದೆ ಎಂದ ವಕೀಲ ಶ್ರೀನಿವಾಸ ರಾವ್

ವಿಧಾನ ಪರಿಷತ್​ನ ಗೌರವಾನ್ವಿತ ಸದಸ್ಯರಾಗಿರುವ ರವಿಯವರನ್ನು ಪೊಲೀಸರು ಅತ್ಯಂತ ಕೆಟ್ಟದ್ದಾಗಿ ನಡೆಸಿಕೊಂಡಿದ್ದಾರೆ, ಪರಿಷತ್ ಕಸ್ಟೋಡಿಯನ್ ಆಗಿರುವ ಸಭಾಪತಿಯವರನ್ನು ವಿಶ್ವಾಸಕ್ಕೆ ಅವರನ್ನು ವಶಕ್ಕೆ ಪಡೆಯಲಾಗಿದೆ, ಅವರಿಗೆ ಊಟ ನೀರು ಕೊಡದ ಕಾರಣ ದೈಹಿಕ ಮತ್ತು ಮಾನಸಿಕವಾಗಿ ಬಳಲಿದ್ದಾರೆ, ಅವರನ್ನು ರಾತ್ರಿಯಿಡೀ ಬೇರೆ ಬೇರೆ ಊರುಗಳಿಗೆ ಸುತ್ತಿಸಲಾಗಿದೆ ಎಂದು ವಕೀಲ ಶ್ರೀನಿವಾಸ ರಾವ್ ಹೇಳಿದರು.

180ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ, ಪಾಕ್ ವಲಸಿಗರ ಬಂಧನ, ಗಡಿಪಾರಿಗೆ ವಿಶೇಷ ಕಾರ್ಯಪಡೆ: ಪರಮೇಶ್ವರ್

ಕೆಲವೇ ತಿಂಗಳುಗಳ ಹಿಂದಷ್ಟೇ ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶ ವಲಸಿಗರ ಹಾಗೂ ಕೆಲವು ಮಂದಿ ಪಾಕಿಸ್ತಾನೀಯರ ಬಂಧನವಾಗಿತ್ತು. ಇಂಥ ಅಕ್ರಮ ವಲಸಿಗರು ರಾಜ್ಯದ ಹಾಗೂ ದೇಶದ ಭದ್ರತೆಗೆ ಸವಾಲಾಗಿ ಪರಿಣಮಿಸುತ್ತಿದ್ದಾರೆ. ಹೀಗಾಗಿ ಇದೀಗ ಕರ್ನಾಟಕ ಸರ್ಕಾರ, ಅಕ್ರಮ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ಘೋಷಣೆ ಮಾಡಿದೆ.

ಸಿಟಿ ರವಿ ಬಂಧನ: ರಕ್ತ ಸೋರುತ್ತಿದ್ದರೂ ರಾತ್ರಿಯೆಲ್ಲ ಕಾರಿನಲ್ಲೇ ಊರೂರು ಸುತ್ತಾಡಿಸಿದ ಪೊಲೀಸರು!

ಬೆಳಗಾವಿಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನದ ಬಳಿಕ ಬೆಂಗಳೂರಿಗೆ ಕರೆದೊಯ್ಯಲು ಪೊಲೀಸರು ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾತ್ರಿ ಪೂರ್ತಿ ಅವರನ್ನು ಜಿಲ್ಲೆ ಜಿಲ್ಲೆಗಳ ವಿವಿಧೆಡೆ ಸುತ್ತಾಡಿಸಲಾಗಿದೆ. ತಲೆಗೆ ಗಾಯವಾಗಿದ್ದರೂ ಕಾರಿನಲ್ಲೇ ಒಯ್ಯಲಾಗಿದೆ ಎಂಬ ಆರೋಪವೂ ಇದೆ. ಸಿಟಿ ರವಿ ಅವರನ್ನು ರಾತ್ರಿ ಎಲ್ಲೆಲ್ಲ ಸುತ್ತಾಡಿಸಿದ್ದಾರೆ, ಆಮೇಲೆ ಎಲ್ಲಿಗೆ ಕರೆದೊಯ್ಯಲಾಗಿದೆ ಎಂಬ ವಿವರ ಇಲ್ಲಿದೆ.

ರಕ್ತ ಬರುವಂತೆ ಹಲ್ಲೆ, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು

ಬೆಳಗಾವಿ ಅಧಿವೇಶನದ ಕೊನೆ ದಿನ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದರು ಎಂಬ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ. ಏತನ್ಮಧ್ಯೆ, ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದು, ಕೊಲೆಗೆ ಸಂಚು ಹೂಡಿದ್ದಾರೆ ಎಂದು ಸಿಟಿ ರವಿ ಪ್ರತಿ ದೂರು ನೀಡಿದ್ದಾರೆ.

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!