Bihar Elections 2025
Bihar Elections 2025 – ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಮತಎಣಿಕೆ ನಡೆಯಲಿದೆ. ಬಿಜೆಪಿ ಮತ್ತು ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) 29 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಪೇಂದ್ರ ಕುಶ್ವಾಹ ಅವರ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಮತ್ತು ಜಿತನ್ ರಾಮ್ ಮಾಂಝಿ ಅವರ ಎಚ್‌ಎಎಂಎಸ್ ತಲಾ 6 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಬಿಹಾರ ವಿಧಾನಸಭೆಯ ಅಧಿಕಾರಾವಧಿಯು ನವೆಂಬರ್ 22ರಂದು ಕೊನೆಗೊಳ್ಳಲಿದೆ. ಹಿಂದಿನ ವಿಧಾನಸಭಾ ಚುನಾವಣೆಗಳು ಅಕ್ಟೋಬರ್-ನವೆಂಬರ್ 2020ರಲ್ಲಿ ನಡೆದವು. ಚುನಾವಣೆಯ ನಂತರ ಎನ್‌ಡಿಎ ರಾಜ್ಯ ಸರ್ಕಾರವನ್ನು ರಚಿಸಿತು, ನಿತೀಶ್ ಕುಮಾರ್ ಮುಖ್ಯಮಂತ್ರಿಯಾದರು. ಆಗಸ್ಟ್ 9, 2022ರಂದು ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿತು. ಆಗ ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆಗಸ್ಟ್ 10, 2022ರಂದು ಜೆಡಿಯು ಆರ್‌ಜೆಡಿ ಮತ್ತು ಕಾಂಗ್ರೆಸ್‌ನ ಮಹಾಘಟಬಂಧನ್ ಮೈತ್ರಿಕೂಟವನ್ನು ಸೇರಿಕೊಂಡಿತು. ನಿತೀಶ್ ಕುಮಾರ್ ಹೊಸ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆದರೆ, ಜನವರಿ 2024ರಲ್ಲಿ ಜೆಡಿಯು ಮಹಾಘಟಬಂಧನ್ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿತು. ಮತ್ತೊಮ್ಮೆ ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಳಿಕ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಜೊತೆ ಹೊಸ ಸರ್ಕಾರವನ್ನು ರಚಿಸಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು
ಬಿಹಾರದ ನೂತನ ಮಂತ್ರಿಗಳಿಗೆ ಖಾತೆ ಹಂಚಿಕೆ; ನಿತೀಶ್ ಕುಮಾರ್ ಸಂಪುಟದ ಸಚಿವರ ಪಟ್ಟಿ ಇಲ್ಲಿದೆ
ಬಿಹಾರದ ಮುಖ್ಯಮಂತ್ರಿಯಾಗಿ ನಿನ್ನೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಇಂದು ತಮ್ಮ ಸಚಿವ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಹಿಂದಿನ ಎನ್‌ಡಿಎ ಸರ್ಕಾರಗಳಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಂದಿದ್ದ ಗೃಹ ಖಾತೆಯನ್ನು ಈ ಬಾರಿ ಬಿಹಾರದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಅವರಿಗೆ ವಹಿಸಲಾಗಿದೆ. ನಿನ್ನೆ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿದ್ದರು.
- Sushma Chakre
- Updated on: Nov 21, 2025
- 7:08 pm
ಹೊಸ ಸರ್ಕಾರ ತನ್ನ ಭರವಸೆ ಈಡೇರಿಸಲಿ; ಸಿಎಂ ನಿತೀಶ್ ಕುಮಾರ್ಗೆ ತೇಜಸ್ವಿ ಯಾದವ್ ಅಭಿನಂದನೆ
ಬಿಹಾರದಲ್ಲಿ 10ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಿತೀಶ್ ಕುಮಾರ್ ಅವರಿಗೆ ಇಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ ಸತತ ಮತ್ತೊಂದು ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಆಡಳಿತಾರೂಢ ಎನ್‌ಡಿಎ ಬಣವನ್ನು ಅಭಿನಂದಿಸಿದ್ದಾರೆ.
- Sushma Chakre
- Updated on: Nov 20, 2025
- 3:20 pm
ಹಾಡಿನ ಮೂಲಕ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾದ ಖುಷಿ ಹಂಚಿಕೊಂಡ ಮೈಥಿಲಿ ಠಾಕೂರ್
ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾದ 25 ವರ್ಷದ ಮೈಥಿಲಿ ಠಾಕೂರ್ ದೇಶದ ಅತಿ ಕಿರಿಯ ಶಾಸಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈಥಿಲಿ ಠಾಕೂರ್ ಅವರು ಬಿಹಾರದ ಅಲಿನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ನಲ್ಲಿ 84,915 ಮತಗಳನ್ನು ಪಡೆದು ಆರ್ಜೆಡಿಯ ವಿನೋದ್ ಮಿಶ್ರಾ ಅವರನ್ನು ಸೋಲಿಸಿದ್ದಾರೆ.
- Sushma Chakre
- Updated on: Nov 19, 2025
- 4:19 pm
ನ. 20ರಂದು ಬಿಹಾರದ ಸಿಎಂ ಆಗಿ 10ನೇ ಬಾರಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ
ಬಿಹಾರದಲ್ಲಿ ಸರ್ಕಾರ ರಚನೆಗೆ ಮುಹೂರ್ತ ನಿಗದಿಯಾಗಿದೆ. ನವೆಂಬರ್ 20ರಂದು ನಿತೀಶ್ ಕುಮಾರ್ ಎನ್‌ಡಿಎ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. 10ನೇ ಬಾರಿಗೆ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಿಹಾರದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭದ ಸಿದ್ಧತೆಗಳನ್ನು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಇಂದು ಪರಿಶೀಲಿಸಿದ್ದಾರೆ.
- Sushma Chakre
- Updated on: Nov 18, 2025
- 11:11 pm
ಲಾಲೂ ಕೌಟುಂಬಿಕ ಬಿಕ್ಕಟ್ಟು; ಮಗಳು ರೋಹಿಣಿ ಹೆಸರಿಸಿದ ರಮೀಜ್ ಖಾನ್ ಯಾರು?
Lalu Prasad Yadav family fight: ಲಾಲೂ ಪ್ರಸಾದ್ ಯಾದವ್ ಅವರ ಏಳು ಹೆಣ್ಮಕ್ಕಳಲ್ಲಿ ಒಬ್ಬರಾದ ರೋಹಿಣಿ ಆಚಾರ್ಯ ಅವರು ಕುಟುಂಬದಿಂದ ಹೊರಬಿದ್ದಿದ್ದಾರೆ. ಇದರ ಬೆನ್ನಲ್ಲೇ ಅವರ ಮೂವರು ಸಹೋದರಿಯರೂ ಕೂಡ ಪಾಟ್ನಾ ಮನೆಯಿಂದ ಹೊರ ಹೋಗಿದ್ದಾರೆ. ರೋಹಿಣಿ ಆಚಾರ್ಯ ಅವರು ತಾನು ಮನೆಯಿಂದ ಹೊರಹೋಗಲು ಕಾರಣವೆಂದು ಇಬ್ಬರು ಹೆಸರು ಹೇಳಿದ್ದಾರೆ. ಅದರಲ್ಲಿ ರಮೀಜ್ ಎನ್ನುವವರ ಹೆಸರೂ ಇದೆ.
- Vijaya Sarathy SN
- Updated on: Nov 16, 2025
- 6:36 pm
ಬಿಹಾರದಲ್ಲಿ ಸಿಎಂ ಗಾದಿಗೆ ಟಿಕೆಟ್ ವಿತರಣೆ ಸೂತ್ರ? ಜೆಡಿಯುಗೆ ಸಿಎಂ; ಬಿಜೆಪಿ, ಎಲ್ಜೆಪಿಗೆ ಡಿಸಿಎಂ ಸ್ಥಾನ?
Bihar politics update: ಬಿಹಾರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾದರೂ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಬಿಜೆಪಿಗಿಂತ 4 ಸ್ಥಾನ ಕಡಿಮೆ ಪಡೆದರೂ ಜೆಡಿಯುಗೆ ಸಿಎಂ ಸ್ಥಾನ ಮುಂದುವರಿಯಬಹುದು. ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ಜೆಪಿ ಹಾಗೂ ಬಿಜೆಪಿಗೆ ಒಂದೊಂದು ಡಿಸಿಎಂ ಸ್ಥಾನ ಸಿಗಬಹುದು ಎನ್ನಲಾಗುತ್ತಿದೆ.
- Vijaya Sarathy SN
- Updated on: Nov 16, 2025
- 4:56 pm
ಬಿಹಾರದಲ್ಲಿ ಆರ್‌ಜೆಡಿ ಸೋಲಿನ ಬಳಿಕ ಕುಟುಂಬ, ರಾಜಕೀಯವೆರಡನ್ನೂ ತೊರೆದ ಲಾಲು ಯಾದವ್ ಮಗಳು ರೋಹಿಣಿ ಆಚಾರ್ಯ
ಬಿಹಾರದಲ್ಲಿ ಎನ್‌ಡಿಎ ಎದುರು ಆರ್‌ಜೆಡಿ-ಕಾಂಗ್ರೆಸ್ ಮೈತ್ರಿ ಹೀನಾಯ ಸೋಲನ್ನು ಅನುಭವಿಸಿದೆ. ಬಿಹಾರದಲ್ಲಿ ಸೋಲಿನ ನಂತರ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ರಾಜಕೀಯವನ್ನು ತೊರೆದಿದ್ದಾರೆ ಹಾಗೂ ಅವರ ಕುಟುಂಬವನ್ನು ಕೂಡ ಬಿಟ್ಟು ಹೋಗಿದ್ದಾರೆ. ಆದರೆ, ಅವರ ಈ ನಿರ್ಧಾರಕ್ಕೆ ನಿಖರವಾದ ಕಾರಣವೇನೆಂಬುದು ಮಾತ್ರ ಇನ್ನೂ ರಹಸ್ಯವಾಗಿಯೇ ಉಳಿದಿದೆ.
- Sushma Chakre
- Updated on: Nov 15, 2025
- 9:10 pm
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನಷ್ಟೆ, ಸಂಪುಟ ರಚನೆ ಬಗ್ಗೆ ಚರ್ಚಿಸಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಖರ್ಗೆ ನಮ್ಮ ನಾಯಕರು, ಪಕ್ಷದ ಅಧ್ಯಕ್ಷರು. ನಾನು ಯಾವಾಗ ಬೇಕಾದರೂ ಭೇಟಿಯಾಗುವೆ. ಸೋಮವಾರ ಪ್ರಧಾನಿ ಮೋದಿಯವರನ್ನು ಭೇಟಿಯಾಗುವೆ. ಈ ವೇಳೆ ಕಬ್ಬು ಬೆಳೆಗಾರರ ಸಮಸ್ಯೆ, ಬೆಳೆ ಹಾನಿ ಪರಿಹಾರದ ಬಗ್ಗೆ ಚರ್ಚೆ ನಡೆಸುತ್ತೇನೆ. ರಾಜ್ಯಕ್ಕೆ ಪರಿಹಾರ ನೀಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.
- Sushma Chakre
- Updated on: Nov 15, 2025
- 7:34 pm
ಜಾತಿ ರಾಜಕೀಯದ ವಿಷವನ್ನು ಬಿಹಾರ ತಿರಸ್ಕರಿಸಿದೆ; ಗುಜರಾತ್ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಜಯ ಗಳಿಸಿದೆ. ಆರ್‌ಜೆಡಿ-ಕಾಂಗ್ರೆಸ್ ಹೀನಾಯ ಸೋಲನ್ನು ಅನುಭವಿಸಿದೆ. ಗುಜರಾತ್ನಲ್ಲಿ ಇಂದು ಆರ್‌ಜೆಡಿ ಮತ್ತು ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, 2025ರ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶಗಳು ಜಾತಿವಾದದ ವಿಷವನ್ನು ಬಿತ್ತುತ್ತಿದ್ದವರನ್ನು ಜನರು ತಿರಸ್ಕರಿಸಿದ್ದಾರೆ ಎಂದು ತೋರಿಸಿದೆ ಎಂದು ಹೇಳಿದ್ದಾರೆ.
- Sushma Chakre
- Updated on: Nov 15, 2025
- 7:02 pm
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ ವ್ಯಂಗ್ಯ
ನನಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ನಿಂದ ಸ್ಪಷ್ಟತೆ ಸಿಗುತ್ತದೆ ಎಂಬ ವಿಶ್ವಾಸವಿದೆ. ನನಗಂತೂ ಸ್ಪಷ್ಟತೆ ಸಿಕ್ಕಿದೆ. ನಾನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಎಂದ ವಿಜಯೇಂದ್ರ ಪರೋಕ್ಷವಾಗಿ ತಾವೇ ಮುಂದುವರಿಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
- Harish GR
- Updated on: Nov 15, 2025
- 4:59 pm