BJP

BJP

ಭಾರತೀಯ ಜನತಾ ಪಾರ್ಟಿಯನ್ನು ಬಿಜೆಪಿ ಎಂದು ಕರೆಯುತ್ತಾರೆ. ಬಿಜೆಪಿಯ ಪ್ರಭಾವವು ಭಾರತದ ವಿವಿಧ ರಾಜ್ಯಗಳಿಗೆ ವಿಸ್ತರಿಸಿದೆ. ಪಕ್ಷವು ತನ್ನ ಬಲವಾದ ಸಂಘಟನಾ ರಚನೆ ಮತ್ತು ಚುನಾವಣಾ ತಂತ್ರಗಳಿಗೆ ಹೆಸರುವಾಸಿಯಾಗಿದೆ. ಅದರ ನೀತಿ ನಿಲುವುಗಳು ಯುವಜನತೆಯನ್ನು ಆಕರ್ಷಿಸಿದ್ದು, ಪರ-ವಿರೋಧ ಎರಡನ್ನೂ ಹುಟ್ಟುಹಾಕಿದೆ. ಭಾರತದ ರಾಜಕೀಯದಲ್ಲಿ ಪಕ್ಷವು ಪ್ರಮುಖ ಸ್ಥಾನ ಗಳಿಸಿದೆ. ಆರ್​​ಎಸ್​ಎಸ್ ಸಂಘಟನೆಯ ಸಿದ್ದಾಂತಗಳ ಜೊತೆ ಗುರುತಿಸಿಕೊಂಡಿದೆ.​​

ಇನ್ನೂ ಹೆಚ್ಚು ಓದಿ

ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಎಸ್​ಐಟಿ ದಾಳಿ

ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಧಿ ವಿಜ್ಞಾನ ಪ್ರಾಯೋಗಾಲಯದ ತಜ್ಞರನ್ನು ಕೂಡ ಜೊತೆಗೆ ಕರೆದೊಯ್ದಿದ್ದಿರುವ ಅಧಿಕಾರಿಗಳ ತಂಡ, ಮಹತ್ವದ ಮಾಹಿತಿ ಕಲೆಹಾಕಿದೆ ಎನ್ನಲಾಗಿದೆ.

ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ: ಯತ್ನಾಳ್​

ಮುಂದಿನ ಬಾರಿ ನಮ್ಮ ಸರ್ಕಾರ ಬಂದಾಗ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಒಂದೇ ಒಂದು ಕಲ್ಲು ಬಿದ್ದರೂ ಸೀದಾ ಜನ್ನತ್​​​​. ಹಿಂದೂವೋಂಕೆ ಸಾಥ್,​ ಹಿಂದೂವೋಂಕೆ ವಿಕಾಸ್,​​ ದೇಶ ದ್ರೋಹಿಯೋಂಕೋ ಲಾಥ್ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದರು.

ಲೋಕಾಯುಕ್ತ FIR ಕುರಿತು ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ: ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು

ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ವಿರುದ್ಧ ಇಂದು ಎಫ್‌ಐಆರ್‌ ದಾಖಲಾಗಿದೆ. ಕೇಸ್‌ನಿಂದ ಪಾರಾಗೋದು ಹೇಗೆ ಅಂತಾ ಸಿಎಂ ಪ್ಲ್ಯಾನ್‌ ಮಾಡುತ್ತಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಎಫ್​​ಐಆರ್​ ದಾಖಲಾಗಿರುವುದರಲ್ಲಿ ಯಾವುದೇ ವಿಶೇಷ ಇಲ್ಲ ಎಂದು ಹೇಳಿದ್ದಾರೆ. ಜೊತೆಗೆ ತಮ್ಮ ರಾಜೀನಾಮೆ ಬಗ್ಗೆ ಹೇಳಿದ್ದಿಷ್ಟು.

  • Ram
  • Updated on: Sep 27, 2024
  • 10:31 pm

ನಾಗಮಂಗಲ ಕೋಮುಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಈ ಪ್ರಕರಣದಲ್ಲಿ ಬಂಧಿಸಿದ್ದ 55 ಆರೋಪಿಗಳಿಗೆ ಇದೀಗ ಜಾಮೀನು ಮಂಜೂರು ಮಾಡಲಾಗಿದೆ. ನಾಳೆ, ನಾಡಿದ್ದು ರಜೆ ಹಿನ್ನೆಲೆ ಸೋಮವಾರ ಬಿಡುಗಡೆ ಆಗಲಿದ್ದಾರೆ.

ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಖಡಕ್ ಮಾತು

ಗಂಗೇನಹಳ್ಳಿ ಡಿನೋಟಿಫಿಕೇಷನ್ ಸಂಬಂಧ ಲೋಕಾಯುಕ್ತ ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿಚಾರಣೆ ಅಂತ್ಯವಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಾಲ್ವರು ಸಚಿವರು ನನ್ನ ವಿರುದ್ಧ ಹರಿಹಾಯ್ದಿದ್ದರು. ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಅಂತ ಹೇಳಿದ್ದೆ. ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರುವುದಿಲ್ಲ ಎಂದಿದ್ದಾರೆ.

ಮುಡಾ ಕೇಸ್: ಸಿದ್ದರಾಮಯ್ಯಗೆ ಬಿಎಸ್​ವೈ, ರಾಮಕೃಷ್ಣ ಹೆಗಡೆ ಉದಾಹರಣೆ ಕೊಟ್ಟು ಟಾಂಗ್ ಕೊಟ್ಟ ಅಶೋಕ್

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಇಂದು ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ ದಾಖಲಾದರೂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲವೆಂದು ಬಿಜೆಪಿ ಕಿಡಿಕಾರುತ್ತಿದೆ. ಸದ್ಯ ಈ ವಿಚಾರವಾಗಿ ನಗರದಲ್ಲಿ ವಿಪಕ್ಷ ನಾಯಕ ವಿಪಕ್ಷ ನಾಯಕ ಆರ್​. ಅಶೋಕ್ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯಗೆ ಬಿಎಸ್​ವೈ, ರಾಮಕೃಷ್ಣ ಹೆಗಡೆ ಉದಾಹರಣೆ ಕೊಟ್ಟು ಟಾಂಗ್ ಕೊಟ್ಟಿದ್ದಾರೆ.

ಸಂಸತ್​ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಬಿಜೆಪಿ ಎಂಪಿ ಸುಧಾಕರ್ ನೇಮಕ

ಕೇಂದ್ರ ಸರ್ಕಾರ ಸ್ಥಾಯಿ ಸಮಿತಿಯನ್ನು ರಚನೆ ಮಾಡಿದೆ. ಬಿಜೆಪಿಯ ಭರ್ತೃಹರಿ ಮಹತಾಬ್ ಅವರಿಗೆ ಹಣಕಾಸು ಸಮಿತಿಯ ಮುಖ್ಯಸ್ಥ ಸ್ಥಾನ ನೀಡಿದ್ದರೆ, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಅವರಿಗೆ ಸಂಸತ್​ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯ ಸ್ಥಾನ ನೀಡಲಾಗಿದೆ. ಆ ಮೂಲಕ ಕೇಂದ್ರದ ದೊಡ್ಡ ಜವಾಬ್ದಾರಿ ನೀಡಲಾಗಿದೆ.

ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಇಂದು ನೇರವಾಗಿ ದೆಹಲಿಯಿಂದ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿಚಾರಣೆ ಬೆನ್ನಲ್ಲೇ ಇದೀಗ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಬುಲಾವ್​ ನೀಡಿತ್ತು. ಹೀಗಾಗಿ ಇಂದು ವಿಚಾರಣೆ ಎದುರಿಸುತ್ತಿದ್ದಾರೆ.

ಡಿನೋಟಿಫಿಕೆಷನ್ ಪ್ರಕರಣ: ಬಿಎಸ್​ವೈ ಬೆನ್ನಲ್ಲೇ ಕುಮಾರಸ್ವಾಮಿಗೂ ಲೋಕಾಯುಕ್ತ ಬುಲಾವ್

ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಈಗಾಗಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸತತ 3 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಇದೀಗ ಅವರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿಗೆ ಸೋಮವಾರ ಲೋಕಾಯುಕ್ತ ವಿಚಾರಣೆ ಹಾಜರಾಗುವಂತೆ ತಿಳಿಸಿತ್ತು. ಆದರೆ ಇಂದೇ ವಿಚಾರಣೆಗೆ ಹಾಜರಾಗಲಿದ್ದಾರೆ.

ಮುಡಾ ಕೇಸ್​ನಲ್ಲಿ ಸಿಎಂ ವಿರುದ್ಧ FIR: ದೂರುದಾರ ಸ್ನೇಹಮಹಿ ಕೃಷ್ಣ ಫಸ್ಟ್ ರಿಯಾಕ್ಷನ್

ಸಿಎಂ ವಿರುದ್ದ ಲೋಕಾಯುಕ್ತದಲ್ಲಿ ದೂರು ದಾಖಲಾದ ಬಳಿಕ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಹಿಕೃಷ್ಣ, ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಪ್ರಯಾಣಿಕ ಹೋರಾಟಕ್ಕೆ ಜಯ ಸಿಗುತ್ತೆ ಎಂಬುದಕ್ಕೆ ಇದೊಂದು ನಿದರ್ಶನ. ಮೇಲಾಧಿಕಾರಿಗಳಿಂದ ಒತ್ತಡ ಬಂದಿದೆ ಹಾಗಾಗಿ ಎಫ್​ಐಆರ್​ ದಾಖಲಾಗಿದೆ ಎಂದು ಹೇಳಿದ್ದಾರೆ.