
Board Result
ಭಾರತದಲ್ಲಿ, ಬೋರ್ಡ್ ಪರೀಕ್ಷೆಗಳು ಪ್ರೌಢ ಮತ್ತು ಹಿರಿಯ ಶೈಕ್ಷಣಿಕ ವರ್ಷದ ಕೊನೆಯಲ್ಲಿ ನಡೆಸಲಾಗುವ ಸಾರ್ವಜನಿಕ ಪರೀಕ್ಷೆಗಳಾಗಿವೆ. ಪ್ರೌಢ ಶಿಕ್ಷಣವನ್ನು ಮುಂದುವರೆಸಲು 10 ನೇ ತರಗತಿಯ ಪರೀಕ್ಷೆಯು ಮುಖ್ಯವಾಗಿದೆ. 10 ನೇ ತರಗತಿಯ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ವಿದ್ಯಾರ್ಥಿಗಳು ವಿಜ್ಞಾನ, ವಾಣಿಜ್ಯ ಮತ್ತು ಕಲೆಯಂತ ವಿವಿಧ ಸ್ಟ್ರೀಮ್‌ಗಳನ್ನು ಆರಿಸಿಕೊಳ್ಳುತ್ತಾರೆ. 12 ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಸ್ಟೇಟ್ ಬೋರ್ಡ್ (HSC), ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (AISSCE) ಮತ್ತು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ISC) ನಡೆಸುತ್ತದೆ. ವಿಶ್ವವಿದ್ಯಾನಿಲಯಗಳು, ವೃತ್ತಿಪರ ಕೋರ್ಸ್‌ಗಳು ಮತ್ತು ಪ್ರಮುಖ ಸಾರ್ವಜನಿಕ/ಖಾಸಗಿ ಕಾಲೇಜುಗಳು ಅಥವಾ ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಗಳಾದ AIIMS, NIT, IIT, IIIT ಮತ್ತು ಇತರ ಉದ್ಯೋಗಗಳಿಗೆ ಪ್ರವೇಶಿಸಲು 12ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ಗಳಿಸಲಾದ ಅಂಕಗಳು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ.
Karnataka SSLC exam 3 result 2024: ಎಸ್ಎಸ್ಎಲ್ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ, ನೋಡೋದು ಹೇಗೆ? ಇಲ್ಲಿದೆ ಮಾಹಿತಿ
ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ-3 2024 ಫಲಿತಾಂಶ: karresults.nic.in ಜಾಲತಾಣದಲ್ಲಿ ಫಲಿತಾಂಶ ಬಿಡಲಾಗಿದೆ. ಫಲಿತಾಂಶಗಳನ್ನು ಪರಿಶೀಲಿಸಲು ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ, ವಿವರಗಳನ್ನು ನಮೂದಿಸಬೇಕಾಗುತ್ತದೆ. ಎಸ್ಎಸ್ಎಲ್ಸಿ ಪರೀಕ್ಷೆ-3 ಇದೇ ತಿಂಗಳ ಆಗಸ್ಟ್ 2 ರಿಂದ 9ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
- Ayesha Banu
- Updated on: Aug 26, 2024
- 2:23 pm
SSLC, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನ, ಜಮೀರ್ ಘೋಷಣೆ
ತಮ್ಮ ಅಲ್ಪಸಂಖ್ಯಾತ ಸಮುದಾಯದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಧಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಬಂಪರ್ ಕೊಡುಗೆ ಘೋಷಣೆ ಮಾಡಿದ್ದಾರೆ. ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ವಂತ ಹಣದಿಂದಲೇ ದ್ವಿಚಕ್ರ ವಾಹನ ಕೊಡಿಸುವುದಾಗಿ ಘೋಷಣೆ ಮಾಡಿದ್ದಾರೆ.
- Prasanna Gaonkar
- Updated on: Jul 29, 2024
- 6:24 pm
Second PUC Exam 3 Result :ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ
Karnataka second puc exam 3 Result Declared: ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಪ್ರಕಟ ಪ್ರಕಟವಾಗಿದೆ. ಇಂದು (ಜುಲೈ 16) 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಸಿದ್ದು, ಈ ಪರೀಕ್ಷೆಯಲ್ಲೂ ಸಹ ಮತ್ತೊಮ್ಮೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.
- Vinay Kashappanavar
- Updated on: Jul 16, 2024
- 3:38 pm
ಬದಲಾದ ಎಸ್ಎಸ್ಎಲ್ಸಿ ಟಾಪರ್: ಬೆಂಗಳೂರಿನ ವಿದ್ಯಾರ್ಥಿನಿ ಭಾವನಾ ರಾಜ್ಯಕ್ಕೆ ಪ್ರಥಮ
SSLC Revaluation Result: 2023-24ನೇ ಸಾಲಿನ ಎಸ್ಎಸ್ಎಲ್ಸಿ ಮರು ಮೌಲ್ಯಮಾಪನ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬೆಂಗಳೂರಿನ ಟಿ.ದಾಸರಹಳ್ಳಿ ಬಿಎನ್ಆರ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಭಾವನಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ಹಿಂದೆ ಪರೀಕ್ಷೆಯಲ್ಲಿ ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.
- Vinay Kashappanavar
- Updated on: Jun 5, 2024
- 4:56 pm
NEET UG Result 2024 : ನೀಟ್ ಮೊದಲ ರ್ಯಾಂಕ್ನ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ವಿದ್ಯಾರ್ಥಿಗಳು ಟಾಪರ್ಸ್
NEET UG result 2024: ನೀಟ್ ಯುಜಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಮೊದಲ ರ‍್ಯಾಂಕ್ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್ ಟಾಪರ್ಸ್ ಆಗಿ ಹೊರಹೊಮ್ಮಿದ್ದಾರೆ.
- Ramesh B Jawalagera
- Updated on: Jun 4, 2024
- 9:05 pm
Karnataka Second PUC Exam-2 Result 2024: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
Karnataka PUC Exam-2 Result 2024 Announced: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 148942 ವಿಧ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಫಲಿತಾಂಶವನ್ನು ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ ನೋಡಬಹುದಾಗಿದೆ. ಹಾಗಾದ್ರೆ ರಿಸಲ್ಟ್ ಪರಿಶೀಲಿಸುವುದು ಹೇಗೆ ಎನ್ನುವ ವಿವರ ಇಲ್ಲಿದೆ.
- Vinay Kashappanavar
- Updated on: May 21, 2024
- 3:18 pm
Karnataka PUC-2 Result 2024: ಇಂದು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ: ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ?
Karnataka PUC-2 Result 2024: ಈಗಾಗಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ ಅನುತ್ತೀರ್ಣರಾದವರಿಗೆ ನಡೆಸಿದ ಪರೀಕ್ಷೆ-2 ಫಲಿತಾಂಶ ಇಂದು (ಮೇ 21) ಪ್ರಕಟವಾಗಲಿದೆ. ಇದರೊಂದಿಗೆ ರಿಸಲ್ಟ್ ಯಾವಾಗ ಪ್ರಕಟವಾಗಲಿದೆ ಎಂದು ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಬಿದ್ದಿದೆ. ಹಾಗಾದ್ರೆ, ರಿಸಲ್ಟ್ ಎಷ್ಟು ಗಂಟೆಗೆ? ರಿಸಲ್ಟ್ ನೋಡೋದು ಹೇಗೆ? ಎನ್ನುವ ಮಾಹಿತಿ ಇಲ್ಲಿದೆ.
- Ramesh B Jawalagera
- Updated on: May 21, 2024
- 9:18 am
CET Result 2024: ಕರ್ನಾಟಕ ಸಿಇಟಿ ಫಲಿತಾಂಶ ಯಾವಾಗ? ಸ್ಪಷ್ಟನೆ ನೀಡಿದ ಕೆಇಎ
CET Result : ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇದೀಗ ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಬೇಕಿದೆ, ಇದರ ಮಧ್ಯೆ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರಿಸಲ್ಟ್ ಬಗ್ಗೆ ಹರಿದಾಡುತ್ತಿರುವ ಸುದ್ದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸ್ಪಷ್ಟನೆ ನೀಡಿದ್ದಾರೆ. ಹಾಗಾದ್ರೆ, ಸಿಇಟಿ ಪರೀಕ್ಷೆ ರಿಸಲ್ಟ್ ಯಾವಾಗ? ಎನ್ನುವ ಬಗ್ಗೆ ಸ್ಪಷ್ಟನೆ ನಿಡಿದ್ದಾರೆ.
- Ramesh B Jawalagera
- Updated on: May 20, 2024
- 3:16 pm
ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭ: ವಿಶೇಷ ಪರಿಹಾರ ಬೋಧನೆ ತರಗತಿ ಕೂಡ ಮುಂದೂಡಿಕೆ
SSLC 2024 Exam 2: ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜೂನ್ 07 ರಿಂದ ನಡೆಯಬೇಕಿದ್ದ ಎಸ್. ಎಸ್.ಎಲ್.ಸಿ ಪರೀಕ್ಷೆ-2 (Karnataka SSLC 2024 Exam 2) ನ್ನು ಜೂ.14 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಜೊತೆಗೆ ವಿಶೇಷ ಪರಿಹಾರ ಬೋಧನೆ ತರಗತಿಯನ್ನು ಮಂದೂಡಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.
- Anil Kalkere
- Updated on: May 17, 2024
- 9:25 pm
SSLC ಟಾಪರ್ಸ್ಗೆ ಬಂಪರ್ ಬಹುಮಾನ, ಅವರು ಕಲಿತ ಶಾಲೆಗಳಿಗೂ ಅನುದಾನ ಘೋಷಿಸಿದ ಸಿಎಂ
ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್ ಬಂದಿದ್ದಾರೆ. 625ಕ್ಕೆ 625 ಅಂಕ ಪಡೆಯುವ ಮೂಲಕ ಇಡೀ ನಾಡಿಗೆ ಕೀರ್ತಿ ತಂದಿದ್ದಾರೆ. ಅಂಕಿತಾ ಅವರ ಈ ಸಾಧನೆಗೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಅಲ್ಲದೇ ಅಂಕಿತಾಗೆ ಹಾಗೂ ಆಕೆ ಓದಿದ ಶಾಲೆಗೆ ಸಿಎಂ ಬಂಪರ್ ಗಿಫ್ಟ್ ಘೋಷಿಸಿದ್ದಾರೆ.
- Ramesh B Jawalagera
- Updated on: May 14, 2024
- 10:14 pm