Border Gavaskar Trophy

Border Gavaskar Trophy

Border Gavaskar Trophy: ಬಾರ್ಡರ್-ಗವಾಸ್ಕರ್ ಟ್ರೋಫಿ ಎಂಬುದು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿ. ಈ ಸರಣಿಗೆ ಮಾಜಿ ನಾಯಕರಾದ ಆಸ್ಟ್ರೇಲಿಯಾದ ಅಲನ್ ಬಾರ್ಡರ್ ಮತ್ತು ಭಾರತದ ಸುನಿಲ್ ಗವಾಸ್ಕರ್ ಅವರ ಹೆಸರನ್ನು ಇಡಲಾಗಿದೆ. 1996 ರಲ್ಲಿ ಶುರುವಾದ ಈ ಟೆಸ್ಟ್ ಕದನದಲ್ಲಿ ಈವರೆಗೆ 16 ಸರಣಿಗಳನ್ನು ಆಡಲಾಗಿದೆ. ಇದರಲ್ಲಿ ಭಾರತ ತಂಡವು 10 ಬಾರಿ ಸರಣಿ ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ 5 ಬಾರಿ ಸರಣಿ ಜಯಿಸಿದೆ. ಇನ್ನು ಒಂದು ಸರಣಿಯು ಡ್ರಾನಲ್ಲಿ ಅಂತ್ಯಗೊಂಡಿತ್ತು. ಹಾಗೆಯೇ ಈ ಸರಣಿಯಲ್ಲಿ ಆಡಲಾದ ಒಟ್ಟು 105 ಪಂದ್ಯಗಳಲ್ಲಿ ಟೀಮ್ ಇಂಡಿಯಾ 32 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ 44 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 28 ಮ್ಯಾಚ್​ಗಳು ಡ್ರಾನಲ್ಲಿ ಕೊನೆಗೊಂಡರೆ, ಒಂದು ಪಂದ್ಯವು ಟೈನಲ್ಲಿ ಅಂತ್ಯ ಕಂಡಿದೆ

ಇನ್ನೂ ಹೆಚ್ಚು ಓದಿ

ಏನು ಆಗ್ಬೇಕಿತ್ತೋ ಅದುವೇ ಆಗಿದೆ… ಟೀಮ್ ಇಂಡಿಯಾ ವಿರುದ್ಧ ಕೈಫ್ ವಾಗ್ದಾಳಿ

India vs Australia: ಅಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 3-1 ಅಂತರದಿಂದ ಸೋಲನುಭವಿಸಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಉಳಿದ ಮೂರು ಮ್ಯಾಚ್​ಗಳಲ್ಲೂ ಪರಾಕ್ರಮ ಮೆರೆಯುವ ಮೂಲಕ ಆಸ್ಟ್ರೇಲಿಯಾ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದುಕೊಂಡಿದೆ.

ನಿವೃತ್ತಿ ಬೆನ್ನಲ್ಲೇ ಅಶ್ವಿನ್​ರ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯನ್ನರು

Ravichandran Ashwin's Record: ರವಿಚಂದ್ರನ್ ಅಶ್ವಿನ್ ಬರೆದ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ಬೌಲರ್​ಗಳು ಮುರಿದಿದ್ದಾರೆ. ಈ ದಾಖಲೆ ಮುರಿಯುವುದರೊಂದಿಗೆ ಪ್ಯಾಟ್ ಕಮಿನ್ಸ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಯಾರಿಂದಲೂ ಸಾಧ್ಯವಾಗದ ವಿಶೇಷ ಮೈಲುಗಲ್ಲನ್ನು ಮುಟ್ಟುವ ಮೂಲಕ ಎಂಬುದು ವಿಶೇಷ.

ಸಿರಾಜ್ ಪ್ರದರ್ಶನವನ್ನು ಮುಕ್ತಕಂಠದಿಂದ ಹಾಡಿಹೊಗಳಿದ ಗೌತಮ್ ಗಂಭೀರ್

Gautam Gambhir praises Mohammed Siraj: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 100 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಅದು ಕೂಡ 36 ಟೆಸ್ಟ್ ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಲ್ಲದೆ ಈ ಸರಣಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಸಿರಾಜ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಡಿ ಹೊಗಳಿದ್ದಾರೆ.

Mohammed Siraj: ಸೋಲಿನ ನಡುವೆ ಮೊಹಮ್ಮದ್ ಸಿರಾಜ್ ಸೆಂಚುರಿ

India vs Australia: ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ವಿಶೇಷ ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ ಕೇವಲ 4 ವರ್ಷಗಳಲ್ಲಿ ನೂರು ವಿಕೆಟ್​​ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 24ನೇ ಬೌಲರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

IND vs AUS: ಟ್ರಾವಿಸ್ ಹೆಡ್ vs ಜಸ್​ಪ್ರೀತ್ ಬುಮ್ರಾ: ಸರಣಿ ಶ್ರೇಷ್ಠ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ?

BGT 2024-25: ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ್ದು ಆಸ್ಟ್ರೇಲಿಯಾ ದಾಂಡಿಗ ಟ್ರಾವಿಸ್ ಹೆಡ್. ಇನ್ನು ಬೌಲಿಂಗ್​​ನಲ್ಲಿ ಪರಾಕ್ರಮ ಮೆರೆದ ಬೌಲರ್​ ಟೀಮ್ ಇಂಡಿಯಾದ ಜಸ್​ಪ್ರೀತ್ ಬುಮ್ರಾ. ಇಲ್ಲಿ ಟ್ರಾವಿಸ್ ಹೆಡ್ 448 ರನ್ ಕಲೆಹಾಕಿದರೆ, ಜಸ್​ಪ್ರೀತ್ ಬುಮ್ರಾ 32 ವಿಕೆಟ್ ಕಬಳಿಸಿದ್ದರು. ಹೀಗಾಗಿಯೇ ಬಾರ್ಡರ್-ಗವಾಸ್ಕರ್ ಸರಣಿಯ ಪ್ಲೇಯರ್ ಆಫ್ ಸಿರೀಸ್ ಪ್ರಶಸ್ತಿ ಯಾರಿಗೆ ನೀಡುವುದು ಎಂಬ ಗೊಂದಲ ಏರ್ಪಟ್ಟಿತ್ತು.

WTC Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ರೇಸ್​ನಿಂದ ಹೊರಬಿದ್ದ ಟೀಮ್ ಇಂಡಿಯಾ

WTC Final 2025: ಭಾರತ ತಂಡವು ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಿದೆ. 2019-21 ರ ಸರಣಿಯಲ್ಲಿ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಮುಗ್ಗರಿಸಿತ್ತು. ಇನ್ನು 2021-23 ರ ಸರಣಿಯಲ್ಲಿ ಮತ್ತೆ ಫೈನಲ್​ ಆಡಿದ್ದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತು. ಇದೀಗ ಮೂರನೇ ಭಾರೀ ಫೈನಲ್​ಗೇರುವ ನಿರೀಕ್ಷೆಯಲ್ಲಿದ್ದ ಟೀಮ್ ಇಂಡಿಯಾ ನಿರಾಸೆ ಅನುಭವಿಸಿದೆ.

Virat Kohli: ಆಸ್ಟ್ರೇಲಿಯಾ ಫ್ಯಾನ್ಸ್​ಗೆ ಮುಟ್ಟಿ ನೋಡಿಕೊಳ್ಳುವಂತಹ ಉತ್ತರ ನೀಡಿದ ವಿರಾಟ್ ಕೊಹ್ಲಿ

India vs Australia: ಸಿಡ್ನಿ ಮೈದಾನದಲ್ಲಿ ಟೀಮ್ ಇಂಡಿಯಾ ಬೌಲರ್​​ಗಳನ್ನು ಕೆಣಕಿದ ಆಸ್ಟ್ರೇಲಿಯಾ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಸ್ಯಾಂಡ್ ಪೇಪರ್ ಇಲ್ಲ ಎನ್ನುವ ಮೂಲಕ ಖಡಕ್ ಉತ್ತರ ಕೊಟ್ಟಿದ್ದಾರೆ. ಅದು ಕೂಡ ಸ್ಟೀವ್ ಸ್ಮಿತ್ ಅವರ ವಿಕೆಟ್ ಸಿಗುತ್ತಿದ್ದಂತೆ ಎಂಬುದು ವಿಶೇಷ. ಇದೀಗ ವಿರಾಟ್ ಕೊಹ್ಲಿ ಸ್ಯಾಂಡ್ ಪೇಪರ್ ತಿರುಗೇಟು ವೈರಲ್ ಆಗಿದ್ದು, ಅಭಿಮಾನಿಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

IND vs AUS: ಟೀಮ್ ಇಂಡಿಯಾ ವಿರುದ್ಧ 10 ವರ್ಷಗಳ ಬಳಿಕ ಸರಣಿ ಗೆದ್ದ ಆಸ್ಟ್ರೇಲಿಯಾ

Australia vs India Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳಿಂದ ಗೆದ್ದರೆ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಜಯ ಸಾಧಿಸಿತು. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹಾಗೆಯೇ ನಾಲ್ಕನೇ ಪಂದ್ಯವನ್ನು ಆಸ್ಟ್ರೇಲಿಯಾ 184 ರನ್​​ಗಳಿಂದ ಗೆದ್ದುಕೊಂಡಿತ್ತು. ಇದೀಗ ಐದನೇ ಮ್ಯಾಚ್​ನಲ್ಲಿ 6 ವಿಕೆಟ್​ಗಳ ಜಯ ಸಾಧಿಸಿದೆ.

IND vs AUS: ಟೀಮ್ ಇಂಡಿಯಾಗೆ ಸೋಲು ಕಟ್ಟಿಟ್ಟ ಬುತ್ತಿ

Australia vs India, 5th Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹಾಗೆಯೇ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿದ್ದು, ಇದೀಗ ಐದನೇ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ ಆಸ್ಟ್ರೇಲಿಯಾ.

Jasprit Bumrah: ಜಸ್​ಪ್ರೀತ್ ಬುಮ್ರಾ ಮೈದಾನ ತೊರೆದಿದ್ದೇಕೆ? ಇಲ್ಲಿದೆ ಕಾರಣ

Jasprit Bumrah Injury Update: ಭಾರತ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಆಸ್ಟ್ರೇಲಿಯಾ ತಂಡದ ಮೊದಲ ಇನಿಂಗ್ಸ್​ನ ಮೂರನೇ ಸೆಷನ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಬೆನ್ನು ನೋವಿನ ಸಮಸ್ಯೆ ಎಂದು ಟೀಮ್ ಇಂಡಿಯಾ ವೇಗಿ ಪ್ರಸಿದ್ಧ್ ಕೃಷ್ಣ ತಿಳಿಸಿದ್ದಾರೆ. ಇದೇ ಕಾರಣದಿಂದಾಗಿ ಬುಮ್ರಾ ಅವರು ವೈದ್ಯಕೀಯ ಪರೀಕ್ಷೆಗೂ ಒಳಗಾಗಿದ್ದಾರೆ.

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ