AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cauvery Water Dispute

Cauvery Water Dispute

Cauvery Water Dispute – ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಇಂದು ನಿನ್ನೆಯದ್ದಲ್ಲ. ನೀರು ಹಂಚಿಕೆ ಸಂಬಂಧ ಮದ್ರಾಸ್ ಪ್ರೆಸಿಡೆನ್ಸಿ ಮತ್ತು ಮೈಸೂರು ಸಂಸ್ಥಾನದ ಮಧ್ಯೆ 1892ರಲ್ಲಿ ಮತ್ತು 1924ರಲ್ಲಿ ಒಪ್ಪಂದಗಳು ಆಗಿದ್ದವು. ಆ ಪ್ರಕಾರ ಮಯಸೂರು ಸಂಸ್ಥಾನದ ಜಲಾಶಯಗಳಲ್ಲಿ ಸಂಗ್ರಹಿಸಿದ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ವಾಡಿಕೆಗಿಂತ ಹೆಚ್ಚು ಮಳೆಯಾದರೆ ನೀರು ಬಿಡಲು ಅಡ್ಡಿಯಿರಲಿಲ್ಲ. ಆದ್ರೆ, ವಾಡಿಕೆಗಿಂತ ಕಡಿಮೆ ಮಳೆಯಾಗಿ, ನೀರಿನ ಕೊರತೆ ಉಂಟಾದರೆ ಹಂಚಿಕೆ ಸಮಸ್ಯೆ ತಲೆದೂರುತ್ತಿತ್ತು. ಸ್ವಾತಂತ್ರ್ಯ ನಂತರದ ತಮಿಳುನಾಡು ಮತ್ತು ಕರ್ನಾಟಕದ ಮಧ್ಯೆಯೂ ಇದೇ ಸಮಸ್ಯೆ ಮುಂದುವರೆದೇ ಇತ್ತು.ಇದರ ಜೊತೆಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ನೀರು ಬೇಕು ಎಂಬುವುದು ವಿವಾದದ ಮತ್ತೊಂದು ಕೇಂದ್ರವಾಗಿತ್ತು. ಹಲವು ದಶಕಗಳ ನ್ಯಾಯಮಂಡಳಿ ಹೋರಾಟ ಮತ್ತು ಸುಪ್ರೀಂಕೋರ್ಟಿನಲ್ಲಿ ಹೋರಾಟದ ನಂತರ ಯಾವ ರಾಜ್ಯಕ್ಕೆ ಎಷ್ಟು ನೀರು ಹಂಚಬೇಕು ಎಂಬುವುದು ನಿರ್ಧಾರವಾಗಿದೆ. ಆದರೆ ವಾಡಿಕೆಗಿಂತ ಮಳೆಯಾದರೆ ನೀರನ್ನು ಹೇಗೆ ಹಂಚಿಕೊಳ್ಳಬೇಕು ಎಂಬುವುದನ್ನು ಸೂಚಿಸುವ ಸಂಕಷ್ಟ ಸೂತ್ರ ಇಲ್ಲ. ಇದು ಎರಡೂ ರಾಜ್ಯಗಳ ನಡುವಣ ನೀರು ಹಂಚಿಕೆ ವಿವಾದವನ್ನು ಜೀವಂತವಾಗಿ ಇರಿಸಿದೆ.

ಕಾವೇರಿ ಜಲವಿವಾದ ನ್ಯಾಯಮಂಡಳಿಯ ತೀರ್ಪನ್ನು ಮಾರ್ಪಡಿಸಿ 2018ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಕಾವೇರಿ ಜಲಾನಯನ ಪ್ರದೇಶದಲ್ಲಿ ವಾಡಿಕೆಗಿಂತ ಮಳೆಯಾದರೆ ವಾರ್ಷಿಕ 740 ಟಿಎಂಸಿಯಷ್ಟು ನೀರು ಲಭ್ಯವಾಗುತ್ತದ ಎಂಬುವುದನ್ನು ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಒಪ್ಪಿಕೊಂಡಿವೆ. ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕಕ್ಕೆ 284.75 ಟಿಎಂಸಿ, ತಮಿಳುನಾಡಿಗೆ 404.25 ಟಿಎಂಸಿ, ಕೇರಳಕ್ಕೆ 30 ಟಿಎಂಸಿ ಮತ್ತು ಪುದಚೇರಿಗೆ 7 ಟಿಎಂಸಿಯಷ್ಟು ನೀರನ್ನು ಸುಪ್ರೀಂಕೋರ್ಟ್ ಮರುಹಂಚಿಕೆ ಮಾಡಿದ್ದು, ಇದನ್ನು ಎಲ್ಲಾ ರಾಜ್ಯಗಳೂ ಒಪ್ಪಿಕೊಂಡಿವೆ.

ನ್ಯಾಯಮಂಡಳಿಯು ತಮಿಳುನಾಡಿಗೆ ನೀರು ಹಂಚಿಕೆ ಮಾಡುವಾಗ ಪ್ರತಿ ತಿಂಗಳು ಎಷ್ಟು ನೀರು ಬಿಡಬೇಕು ಎಂಬುವುದನ್ನೂ ನಿಗದಿ ಮಾಡಿದೆ. ನೀರು ಹಂಚಿಕೆ ಮತ್ತು ನೀರು ಬಿಡುವ ಕಾರ್ಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಕಾವೇರಿ ನೀರು ಮೇಲ್ವಿಚಾರಣಾ ಪ್ರಾಧಿಕಾರವನ್ನು ರಚಿಸಲಾಗಿದೆ. ಮಳೆ ಕೊರತೆಯಾಗಿ ನೀರಿನ ಲಭ್ಯತೆ ಕಡಿಮೆಯಾದರೆ, ಏನು ಮಾಡಬೇಕು ಎಂಬುವುದನ್ನು ಪ್ರಾಧಿಕಾರ ನಿರ್ಧರಿಸಬೇಕು ಎಂದು ನ್ಯಾಯಮಂಡಳಿ ಹೇಳಿದೆ. ಆದ್ರೆ, ಕಡಿಮೆಯಾದಾಗ ನೀರನ್ನು ಎಷ್ಟು ಪ್ರಮಾಣದಲ್ಲಿ ಹಂಚಿಕೆ ಮಾಡಬೇಕು ಎಂಬುವುದನ್ನು ವಿವರಿಸುವ ಯಾವುದೇ ಸೂತ್ರವನ್ನು ನ್ಯಾಯಮಂಡಳಿ ರೂಪಿಸಿಲ್ಲ. ಹೀಗಾಗಿ ಮಳೆ ಕಡಿಮೆಯಾದರೆ ಏನು ಮಾಡಬೇಕು ಎಂಬುವುದು ಸಂಪೂರ್ಣವಾಗಿ ಪ್ರಾಧಿಕಾರದ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ತಮಿಳುನಾಡಿಗೆ ಎಷ್ಟು ದಿನ? ಎಷ್ಟು ಪ್ರಮಾಣ ನೀರು ಹರಿಸಬೇಕೆಂದು ಕಾವೇರಿ ನೀರು ಮೇಲ್ವಿಚಾರಣಾ ಪ್ರಾಧಿಕಾರ ತೀರ್ಮಾನಿಸುತ್ತೆ.

ಇನ್ನೂ ಹೆಚ್ಚು ಓದಿ

‘ಪ್ರತಿಬಾರಿಯೂ ತಮಿಳುನಾಡು ಸಮಸ್ಯೆ ಹೇಳುತ್ತಿದೆ’: ಕಾವೇರಿ ಜಲ ವಿವಾದ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​

ಕಾವೇರಿ ನೀರು ಬಿಡುಗಡೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರತಿಬಾರಿಯೂ ತಮಿಳುನಾಡು ಸಮಸ್ಯೆಗಳನ್ನೇ ಹೇಳುತ್ತಿದೆ ಎಂದು ಅಭಿಪ್ರಾಯಪಟ್ಟು ತೀರ್ಪನ್ನು ಕಾಯ್ದಿರಿಸಿದೆ. ತಮಿಳುನಾಡು ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಮತ್ತು ಕರ್ನಾಟಕ ಪರ ಹಿರಿಯ ವಕೀಲ ಶ್ಯಾಮ್ ದಿವಾನ್ ವಾದ ಮಂಡಿಸಿದ್ದರು.

ಕಾವೇರಿ ಜಲ ವಿವಾದ: CWMA ಆದೇಶದಿಂದ ಕಂಗೆಟ್ಟ ಕರ್ನಾಟಕ; ಕುಡಿಯುವ ನೀರಿಗೂ ಹಾಹಾಕಾರದ ಭೀತಿ

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಕೆಆರ್‌ಎಸ್‌ ಜಲಾಶಯ ಬತ್ತಿ ಹೋಗುತ್ತಿದೆ. ಈ ಸಂದರ್ಭದಲ್ಲೂ ತಮಿಳುನಾಡಿಗೆ ಸರಿಸುಮಾರು 4 ಟಿಎಂಸಿ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶಿಸಿದೆ. ಇದರಿಂದ ರೈತರಿಗೆ ನೀರಿಲ್ಲದೆ ಬೆಳೆ ಬೆಳೆಯಲು ಕಷ್ಟವಾಗಿದೆ, ಅಲ್ಲದೆ ಬೆಂಗಳೂರು ಸೇರಿ ಹಲವು ನಗರಗಳಿಗೆ ಕುಡಿಯುವ ನೀರಿನ ಭೀಕರ ಸಮಸ್ಯೆ ಎದುರಾಗಲಿದೆ ಎಂದು ಆತಂಕ ವ್ಯಕ್ತವಾಗಿದೆ.

ಕರ್ನಾಟಕಕ್ಕೆ ಮತ್ತೆ ಶಾಕ್​​ ಕೊಟ್ಟ CWRC: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವಾಗ ಕಾವೇರಿ ನೀರು ನಿರ್ವಹಣಾ ನಿಯಂತ್ರಣ ಪ್ರಾಧಿಕಾರವು ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಮತ್ತೆ ಸೂಚನೆ ನೀಡಿದೆ. ಈಗಾಗಲೇ ಬರಗಾಲದಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ. ತಮಿಳುನಾಡಿಗೆ ಪ್ರತಿದಿನ 4 ಸಾವಿರ ಕ್ಯೂಸೆಕ್​​ ನೀರು ಹರಿಸುವಂತೆ ಈ ಹಿಂದೆ CWMA ಆದೇಶ ನೀಡಿದ್ದ ಹಿನ್ನೆಲೆ, ನೀರಿನ ಪ್ರಮಾಣವನ್ನು 2 ಸಾವಿರ ಕ್ಯೂಸೆಕ್​​ಗೆ ಇಳಿಸುವಂತೆ ಕರ್ನಾಟಕ ಇತ್ತೀಚೆಗಷ್ಟೇ ಮನವಿ ಮಾಡಿತ್ತು ಎಂಬುದಿಲ್ಲಿ ಗಮನಾರ್ಹ.

ಕಾವೇರಿ ಜಲ ವಿವಾದ: ತಮಿಳುನಾಡಿಗೆ ಹರಿಸಬೇಕಿರುವ ನೀರಿನ ಪ್ರಮಾಣ 2000 ಕ್ಯೂಸೆಕ್​​ಗೆ ಇಳಿಸುವಂತೆ CWMAಗೆ ಕರ್ನಾಟಕ ಮನವಿ

ಕಾವೇರಿ ಜಲಾಶಯಗಳಲ್ಲಿ ಒಳಹರಿವು ಕ್ಷೀಣಿಸಿ 49 ಟಿಎಂಸಿ ನೀರು ಮಾತ್ರ ಲಭ್ಯವಿರುವ ಹಿನ್ನೆಲೆಯಲ್ಲಿ, ತಮಿಳುನಾಡಿಗೆ ಬಿಡಬೇಕಾದ ನೀರಿನ ಪ್ರಮಾಣವನ್ನು 4,000 ಕ್ಯೂಸೆಕ್ಸ್ ಬದಲು 2,000 ಕ್ಯೂಸೆಕ್ಸ್‌ಗೆ ಇಳಿಸಲು ಸಿಡಬ್ಲ್ಯೂಎಂಎಗೆ ಕರ್ನಾಟಕ ಮನವಿ ಮಾಡಿದೆ. ಕಣಿವೆಯ 47 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಿಂದ ಗಣನೀಯ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರ ಕುಸಿತ: ಜನವರಿ ತಿಂಗಳ ಒಳಗಾಗಿಯೇ ಜಲಕ್ಷಾಮದ ಭೀತಿ

ತಮಿಳುನಾಡಿಗೆ ನಿತ್ಯ 4,000 ಕ್ಯೂಸೆಕ್ ಕಾವೇರಿ ನೀರು ಹರಿಸಲು CWMA ಆದೇಶಿಸಿರುವ ನಡುವೆ ಕೆಆರ್​​ಎಸ್​​ ಸೇರಿದಂತೆ ಕಾವೇರಿ ಜಲಾನಯನದ ನಾಲ್ಕು ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿದ್ದು, ರಾಜ್ಯದಲ್ಲಿ ಜನವರಿ ವೇಳೆಗೆ ಕುಡಿಯುವ ನೀರಿಗೂ ತೀವ್ರ ಹಾಹಾಕಾರ ಎದುರಾಗುವ ಭೀತಿ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 4,000 ಕ್ಯೂಸೆಕ್ ನೀರು ಬಿಡಲು CWMA ಆದೇಶಿಸುರುವ ಕಾರಣ ಆತಂಕ ಹೆಚ್ಚಿದೆ.

ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದ CWRC: ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್​​ ನೀರು ಹರಿಸಲು ಶಿಫಾರಸು

ಕರ್ನಾಟಕದಲ್ಲಿ ಭೀಕರ ಬರಗಾಲವಿದ್ದರೂ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 4,000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿದ್ದು, ರಾಜ್ಯಕ್ಕೆ ಮತ್ತೊಂದು ದೊಡ್ಡ ಆಘಾತ ನೀಡಿದೆ. ದೆಹಲಿಯ ಕಚೇರಿಯಲ್ಲಿ ವಿನೀತ್ ಗುಪ್ತಾ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಆದೇಶ ಪಾಲಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ತಮಿಳುನಾಡಿನ ಆಕ್ಷೇಪಣೆಗೆ ಅಫಿಡವಿಟ್ ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಿದೆ.  ತಮಿಳುನಾಡಿನಲ್ಲಿ ನೀರಿನ ಕೊರತೆ ಇದೆ. 4.5 ಲಕ್ಷ ಎಕರೆ ಬೆಳೆಗಳಿಗೆ ನೀರಿನ ಅಗತ್ಯವಿದೆ ಎಂದು ತಮಿಳುನಾಡು ವಾದಿಸಿದ್ದು, CWMA ಆದೇಶ ಪಾಲನೆಯಾಗುತ್ತಿಲ್ಲ ಎಂದು ಆಕ್ಷೇಪ ಕೂಡ ವ್ಯಕ್ತಪಡಿಸಿತ್ತು.

TV9 Kannada News Live: ಸೌಜನ್ಯ ಕೊಲೆ ಕೇಸ್ ತನಿಖೆಗೆ ಎನ್.ಶಶಿಕುಮಾರ್ ನೇತೃತ್ವದ ಎಸ್​​ಐಟಿ ರಚಿಸಿದ ಸರ್ಕಾರ

Karnataka News Today Live Updates:ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನ ಬರಗಾಲ, ಕಸ್ತೂರಿ ರಂಗನ್ ವರದಿ ಚರ್ಚೆಗಾಗಿ ನಾಲ್ಕನೇ ದಿನಕ್ಕೆ ವಿಸ್ತರಣೆಯಾಗಿದೆ. ಬಿಜೆಪಿ ಆಡಳಿತ ವೈಫಲ್ಯ ಖಂಡಿಸಿ ಪ್ರತಿಭಟನೆ ನಡೆಸುತ್ತಿದೆ. ಕಾವೇರಿ ನೀರು ವಿವಾದ ಕುರಿತು ದೆಹಲಿಯಲ್ಲಿ ನಿರ್ಣಾಯಕ ಸಭೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಭೀಕರ ಬಸ್ ಅಗ್ನಿ ಅವಘಡದಲ್ಲಿ 9 ಮಂದಿ ದುರ್ಮರಣ ಹೊಂದಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತಷ್ಟು ಪದಕಗಳು ಲಭಿಸಿವೆ, ರೋಶಿಬಿನಾ ದೇವಿ ಬೆಳ್ಳಿ ಗೆದ್ದಿದ್ದಾರೆ.

ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ, ರಿಟ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಕಾವೇರಿ ನದಿ ರಕ್ಷಣಾ ಸಮಿತಿ ಸಲ್ಲಿಸಿದ್ದ ಕರ್ನಾಟಕದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾಗೊಂಡಿದೆ. ತಮಿಳುನಾಡಿನ ಪಾಲಿನ 70.91 ಟಿಎಂಸಿ ನೀರನ್ನು ಕರ್ನಾಟಕಕ್ಕೆ ವರ್ಗಾಯಿಸುವಂತೆ ಕೋರಿದ್ದ ಈ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಪೀಠ ವಜಾ ಮಾಡಿದೆ. ರಾಜ್ಯಗಳ ವಿವಾದಗಳಲ್ಲಿ ಸಂಘಟನೆಗಳ ಅರ್ಜಿಗಳನ್ನು ಪರಿಗಣಿಸಿದರೆ ಕೊನೆಯಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶ ಮಾರ್ಪಾಡಿಗೆ ಆಗ್ರಹಿಸಿ CWMAಗೆ ಕರ್ನಾಟಕ ಮೇಲ್ಮನವಿ

ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನೀಡಿದ್ದ ಆದೇಶವನ್ನು 3 ಸಾವಿರ ಕ್ಯೂಸೆಕ್‌ಗೆ ಇಳಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮೇಲ್ಮನವಿ ಸಲ್ಲಿಸಿದೆ. ಕಾವೇರಿ ಕೊಳ್ಳದ 4 ಡ್ಯಾಮ್​ಗಳ ಒಳ ಹರಿವಿನಲ್ಲಿ ಭಾರಿ ಇಳಿಕೆ ಕಂಡುಬಂದಿರುವ ಹಿನ್ನೆಲೆ ಹೆಚ್ಚುವರಿ ಹೊರಹರಿವು ಸಾಧ್ಯವಿಲ್ಲ ಎಂದು ಸಿಡಬ್ಲ್ಯಎಂಎಗೆ ಕರ್ನಾಟಕ ತಿಳಿಸಿದೆ.

ಸುಪ್ರೀಂಕೋರ್ಟ್‌ಗೆ ಹೋಗ್ತೀವಿ ಎಂದಿದ್ದ ಸರ್ಕಾರ ಯೂ-ಟರ್ನ್: ಕೆಆರ್‌ಎಸ್​ನಿಂದ ತಮಿಳುನಾಡಿಗೆ ನೀರು ಬಿಡುಗಡೆ!

ಮೊನ್ನೆಯಷ್ಟೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶಿಸಿತ್ತು. ಸುಪ್ರೀಂಕೋರ್ಟ್‌ಗೆ ಹೋಗ್ತೀವಿ ನೀರು ಬಿಡಲ್ಲ ಎಂದಿದ್ದ ಸರ್ಕಾರ, ಇದೀಗ ಕೆಆರ್‌ಎಸ್‌ ಡ್ಯಾಂ‌ನಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ. ಸದ್ಯ ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ: ತಲೆ ಮೇಲೆ ಕಲ್ಲು ಹೊತ್ತು ರೈತರ ತೀವ್ರ ಪ್ರತಿಭಟನೆ

ಕಾವೇರಿ ನೀರು ಹಂಚಿಕೆ ವಿವಾದ ತೀವ್ರಗೊಂಡಿದ್ದು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ CWMA ಆದೇಶದ ವಿರುದ್ಧ ಮಂಡ್ಯದಲ್ಲಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯಲು ನೀರಿಲ್ಲದಿದ್ದರೂ ಕೃಷಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ, ರಾಜ್ಯ ಸರ್ಕಾರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲು ಸಿದ್ಧತೆ ನಡೆಸಿದೆ.