CET
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (CET ಅಥವಾ K-CET) ಕರ್ನಾಟಕ ರಾಜ್ಯದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಾರ್ಷಿಕವಾಗಿ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದೆ. ಕರ್ನಾಟಕ ಸರ್ಕಾರವು 1994 ರಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷಾ ಘಟಕವನ್ನು ಸ್ಥಾಪಿಸಿತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತದೆ. ಇದು ಕರ್ನಾಟಕದ ಉನ್ನತ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುತ್ತದೆ. ಕರ್ನಾಟಕ ರಾಜ್ಯದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಪೂರ್ಣ ಸಮಯದ ಎಂಜಿನಿಯರಿಂಗ್, ತಂತ್ರಜ್ಞಾನ, ಬಿ-ಫಾರ್ಮಾ, ಡಿ-ಫಾರ್ಮಾ, ಕೃಷಿ ಶಿಕ್ಷಣ (ಕೃಷಿ ವಿಜ್ಞಾನ) ಮತ್ತು ಪಶುವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾದ ಆಫ್‌ಲೈನ್ ಪರೀಕ್ಷೆಯಾಗಿದೆ. ಸಿಇಟಿ ಮೂಲಕ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶಾತಿ ನೀಡಲಾಗುತ್ತದೆ. ವೈದ್ಯಕೀಯ (ಎಂಬಿಬಿಎಸ್, ಬಿಡಿಎಸ್, ಬಿಎಎಂಎಸ್, ಇತ್ಯಾದಿ) ಪ್ರವೇಶ ಪರೀಕ್ಷೆಗೆ ಭಾರತದಲ್ಲಿ ನೀಟ್ ಪರೀಕ್ಷೆಯನ್ನು ರಾಷ್ಟ್ರೀಕರಣಗೊಳಿಸುವ ಮೊದಲು, ಸಿಇಟಿ ಪರೀಕ್ಷೆಯ ಮುಖಾಂತರ ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಸಿಇಟಿ ಪರೀಕ್ಷೆಯನ್ನು ಕರ್ನಾಟಕದಾದ್ಯಂತ ಬಹುತೇಕ ಎಲ್ಲ ಜಿಲ್ಲೆ, ನಗರಗಳಲ್ಲಿ ಏಪ್ರಿಲ್ – ಮೇ ತಿಂಗಳಲ್ಲಿ ನಡೆಸಲಾಗುತ್ತದೆ