![Champions Trophy](https://images.tv9kannada.com/wp-content/uploads/2024/11/champions-trophy.jpg)
Champions Trophy
Champions Trophy: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಆಯೋಜಿಸುವ ಪ್ರಮುಖ ಟೂರ್ನಿಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಕೂಡ ಒಂದು. 1998 ರಲ್ಲಿ ಶುರುವಾದ ಈ ಟೂರ್ನಿಯ ಚೊಚ್ಚಲ ಪಂದ್ಯಾವಳಿಗೆ ಬಾಂಗ್ಲಾದೇಶ್ ಆತಿಥ್ಯವಹಿಸಿತ್ತು. ಈವರೆಗೆ 8 ಆವೃತ್ತಿಗಳನ್ನು ಆಯೋಜಿಸಲಾಗಿದ್ದು, ಈ ವೇಳೆ ಸೌತ್ ಆಫ್ರಿಕಾ (1998), ನ್ಯೂಝಿಲೆಂಡ್ (2000), ಭಾರತ/ಶ್ರೀಲಂಕಾ (2002), ವೆಸ್ಟ್ ಇಂಡೀಸ್ (2004), ಆಸ್ಟ್ರೇಲಿಯಾ (2006), ಆಸ್ಟ್ರೇಲಿಯಾ (2009), ಭಾರತ (2013) ಮತ್ತು ಪಾಕಿಸ್ತಾನ್ (2017) ತಂಡಗಳು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಏಕದಿನ ಸ್ವರೂಪದಲ್ಲಿ ಆಡಲಾಗುವ ಈ ಟೂರ್ನಿಯ 9ನೇ ಆವೃತ್ತಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆತಿಥ್ಯವಹಿಸಲಿದ್ದು, ಅದರಂತೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ನಡುವೆ 8 ತಂಡಗಳ ನಡುವಣ ಚಾಂಪಿಯನ್ಸ್ ಟ್ರೋಫಿ 2025 ಜರುಗಲಿದೆ
ಒಬ್ಬ ಆಟಗಾರನಿಗಾಗಿ ಚಾಂಪಿಯನ್ಸ್ ಟ್ರೋಫಿ ತಂಡವನ್ನು ಘೋಷಿಸದ ಪಾಕಿಸ್ತಾನ್
ICC Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಸುರುವಾಗಲಿದೆ. ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಬಾರಿ ಟೂರ್ನಿಯ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ಜರುಗಲಿದೆ. ಇದೇ ವೇಳೆ ಟೀಮ್ ಇಂಡಿಯಾದ ಮ್ಯಾಚ್ಗಳು ದುಬೈನಲ್ಲಿ ನಡೆಯಲಿದೆ. ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 23 ರಂದು ಜರುಗಲಿದೆ.
- Zahir Yusuf
- Updated on: Jan 22, 2025
- 12:53 pm
ಚಾಂಪಿಯನ್ಸ್ ಟ್ರೋಫಿ ಜೆರ್ಸಿಯಲ್ಲಿ ‘ಪಾಕಿಸ್ತಾನ್’ಗೆ ಸ್ಥಾನ ನೀಡಲು ಬಿಸಿಸಿಐ ನಿರಾಕರಣೆ
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಢಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್ಗಳಾಗಿ ವಿಂಗಡಿಸಲಾಗಿದ್ದು, ಮೊದಲ ಸುತ್ತಿನಲ್ಲಿ ಆಯಾ ಗ್ರೂಪ್ಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ನಡೆಯಲಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್ನಲ್ಲಿದ್ದು, ಅದರಂತೆ ಮೊದಲ ಸುತ್ತಿನಲ್ಲೇ ಉಭಯ ತಂಡಗಳು ಮುಖಾಮುಖಿಯಾಗಲಿದೆ.
- Zahir Yusuf
- Updated on: Jan 21, 2025
- 11:53 am
Champions Trophy 2025: ಟೀಮ್ ಇಂಡಿಯಾ ಬದಲಾವಣೆಗೆ ಇನ್ನೂ ಇದೆ ಅವಕಾಶ
Champions trophy 2025: ಬಹುನಿರೀಕ್ಷಿತ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಈ ಬಾರಿ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದ್ದು, ಈ ತಂಡಗಳನ್ನು ಎರಡು ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಈ ತಂಡಗಳಲ್ಲಿ ಬದಲಾವಣೆ ತರಲು ಮುಂದಿನ ತಿಂಗಳುವರೆಗೂ ಅವಕಾಶ ನೀಡಲಾಗಿದೆ.
- Zahir Yusuf
- Updated on: Jan 21, 2025
- 7:18 am
ಟೀಮ್ ಇಂಡಿಯಾದಿಂದ ಔಟ್: ಹೈದರಾಬಾದ್ ಪರ ಕಣಕ್ಕಿಳಿಯಲು ಸಿರಾಜ್ ರೆಡಿ
Mohammad Siraj: 2025ರ ಚಾಂಪಿಯನ್ಸ್ ಟ್ರೋಫಿಯು ಫೆಬ್ರವರಿ 19 ರಿಂದ ಆರಂಭವಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಈ ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಅದರಂತೆ ಭಾರತದ ಪಂದ್ಯಗಳು ದುಬೈನಲ್ಲಿ ಜರುಗಲಿದ್ದು, ಉಳಿದ ಮ್ಯಾಚ್ಗಳಿಗೆ ಪಾಕಿಸ್ತಾನ್ ಆತಿಥ್ಯವಹಿಸಲಿದೆ. ಈ ಟೂರ್ನಿಗಾಗಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ಅವರನ್ನು ಆಯ್ಕೆ ಮಾಡಲಾಗಿಲ್ಲ.
- Zahir Yusuf
- Updated on: Jan 20, 2025
- 7:14 am
Champions Trophy 2025: ಟೀಮ್ ಇಂಡಿಯಾದಲ್ಲಿ 6 ಹಳೆ ಹುಲಿಗಳು
Champions Trophy: 2017 ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 50 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 338 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 30.3 ಓವರ್ಗಳಲ್ಲಿ 158 ರನ್ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಪಾಕಿಸ್ತಾನ್ ತಂಡ 180 ರನ್ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದರು.
- Zahir Yusuf
- Updated on: Jan 20, 2025
- 9:53 am
ಗಂಭೀರ್ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ ರೋಹಿತ್ ಶರ್ಮಾ
India squad for 2025 Champions Trophy: ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದ ವಿಷಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿರುವ ವಿಷಯ ಬಹಿರಂಗವಾಗಿದೆ. ಇಲ್ಲಿ ಗಂಭೀರ್ಗಿಂತ ಆಯ್ಕೆ ಸಮಿತಿ ರೋಹಿತ್ ಶರ್ಮಾ ಅವರ ನಿಲುವಿಗೆ ಹೆಚ್ಚಿನ ಮಣೆ ನೀಡಿರುವುದು ಸ್ಪಷ್ಟ.
- Zahir Yusuf
- Updated on: Jan 19, 2025
- 11:53 am
Champions Trophy 2025: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಕೊನೆಯ ಜೊತೆಯಾಟ
Rohit Sharma and Virat Kohli: ಚಾಂಪಿಯನ್ಸ್ ಟ್ರೋಫಿ ಮುಕ್ತಾಯದ ಬೆನ್ನಲ್ಲೇ ರೋಹಿತ್ ಶರ್ಮಾ ಏಕದಿನ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ. ಏಕೆಂದರಎ 37 ವರ್ಷದ ರೋಹಿತ್ ಶರ್ಮಾಗೆ ಮುಂಬರುವ ಸರಣಿಗಳಿಗೆ ಆಯ್ಕೆ ಮಾಡುವುದಿಲ್ಲ ಎಂದು ಆಯ್ಕೆ ಸಮಿತಿ ಸ್ಪಷ್ಟ ಸಂದೇಶ ರವಾನಿಸಿದೆ. ಹಾಗೆಯೇ ಚಾಂಪಿಯನ್ಸ್ ಟ್ರೋಫಿಯಲ್ಲಿನ ಪ್ರದರ್ಶನ ಮೇಲೆ ವಿರಾಟ್ ಕೊಹ್ಲಿಯ ಭವಿಷ್ಯ ಕೂಡ ನಿರ್ಧಾರವಾಗಲಿದೆ.
- Zahir Yusuf
- Updated on: Jan 19, 2025
- 10:53 am
ಟೀಮ್ ಇಂಡಿಯಾ ಆಯ್ಕೆಗೆ ಅರ್ಹರಾಗಿದ್ದ ಸಿರಾಜ್… ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು
Mohammed Siraj: ಟೀಮ್ ಇಂಡಿಯಾ ಪರ ಕಳೆದ ಎರಡು ವರ್ಷಗಳಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಅದರಲ್ಲೂ ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿ ನಡುವೆ ಅವರು ಬೌಲಿಂಗ್ ವಿಭಾಗವನ್ನು ಮುನ್ನಡೆಸಿದ್ದರು. ಈ ಮೂಲಕ ಭಾರತ ತಂಡದ ಖಾಯಂ ಸದಸ್ಯರಾಗಿದ್ದ ಸಿರಾಜ್ ಇದೀಗ ತಂಡದಿಂದಲೇ ಹೊರಬಿದ್ದಿದ್ದಾರೆ.
- Zahir Yusuf
- Updated on: Jan 19, 2025
- 10:12 am
Champions Trophy 2025: ಟೀಮ್ ಇಂಡಿಯಾದಿಂದ ಹೊರಬಿದ್ದ ಐವರು ಆಟಗಾರರು
Champions Trophy 2025: ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ 15 ಸದಸ್ಯರ ಭಾರತ ತಂಡವನ್ನು ಹೆಸರಿಸಲಾಗಿದೆ. ಈ ತಂಡದಲ್ಲಿ ಕಳೆದ ಬಾರಿಯ ಏಕದಿನ ವಿಶ್ವಕಪ್ ಆಡಿದ 5 ಆಟಗಾರರಿಗೆ ಸ್ಥಾನ ಸಿಕ್ಕಿಲ್ಲ ಎಂಬುದು ವಿಶೇಷ. ಅಂದರೆ 2023ರ ಏಕದಿನ ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ಐವರು ಸ್ಟಾರ್ ಆಟಗಾರರು ಚಾಂಪಿಯನ್ಸ್ ಟ್ರೋಫಿ ತಂಡದಿಂದ ಹೊರಬಿದ್ದಿದ್ದಾರೆ.
- Zahir Yusuf
- Updated on: Jan 19, 2025
- 7:53 am
3ನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಭವಿಷ್ಯ ನಿರ್ಧಾರ
Jasprit Bumrah: ಜಸ್ಪ್ರೀತ್ ಬುಮ್ರಾ ಸಂಪೂರ್ಣ ಫಿಟ್ನೆಸ್ ಹೊಂದಿಲ್ಲದಿದ್ದರೂ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದೀಗ ಬಿಸಿಸಿಐ ಅವರ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ಅವರು ಮುಂದಿನ ತಿಂಗಳ 2ನೇ ವಾರದೊಳಗೆ ಫಿಟ್ನೆಸ್ ಸಾಧಿಸಿದರೆ ಇಂಗ್ಲೆಂಡ್ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
- Zahir Yusuf
- Updated on: Jan 19, 2025
- 7:11 am