AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress

Congress

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಾಮಾನ್ಯವಾಗಿ ಕಾಂಗ್ರೆಸ್ ಪಕ್ಷ ಎಂದು ಕರೆಯಲಾಗುತ್ತದೆ. ಇದು ಭಾರತದ ಅತ್ಯಂತ ಪುರಾತನ ಮತ್ತು ಪ್ರಮುಖ ರಾಜಕೀಯ ಸಂಸ್ಥೆಗಳಲ್ಲಿ ಒಂದಾಗಿದೆ. 1885 ರಲ್ಲಿ ಸ್ಥಾಪಿತವಾದ ಇದು ಬ್ರಿಟಿಷರ ಆಳ್ವಿಕೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧಿ ಮತ್ತು ಜವಾಹರಲಾಲ್ ನೆಹರು ಅವರಂತಹ ನಾಯಕರು ಸ್ವಾತಂತ್ರ್ಯ ಚಳವಳಿಯ ಮುಂಚೂಣಿಯಲ್ಲಿದ್ದವರು.

1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆತ ನಂತರ, ಕಾಂಗ್ರೆಸ್ ಪಕ್ಷವು ದೇಶದಲ್ಲಿ ಪ್ರಬಲ ರಾಜಕೀಯ ಶಕ್ತಿಯಾಯಿತು ಮತ್ತು ಸ್ವಾತಂತ್ರ್ಯದ ನಂತರದ ದಶಕಗಳ ಕಾಲ ಕೇಂದ್ರದಲ್ಲಿ ಸರ್ಕಾರವನ್ನು ರಚಿಸಿತು. ಆದರೆ ಇತ್ತೀಚೆಗೆ ಅಧಿಕಾರದಿಂದ ದೂರ ಉಳಿದಿದೆ. ಪಕ್ಷದ ಸಿದ್ಧಾಂತವು ಕಾಲಕಾಲಕ್ಕೆ ವಿಕಸನಗೊಳ್ಳುತ್ತಾ ಬಂದಿದೆ. ಸಮಾಜವಾದ, ಜಾತ್ಯತೀತ ಆಡಳಿತದ ಅಂಶಗಳನ್ನು ಒಳಗೊಂಡಿದೆ. ಇದು ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿವಿ ನರಸಿಂಹರಾವ್​, ಮನಮೋಹನ್ ಸಿಂಗ್ ಸೇರಿದಂತೆ ಹಲವಾರು ಪ್ರಧಾನ ಮಂತ್ರಿಗಳನ್ನು ನಿರ್ಮಿಸಿದೆ.

ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮತ್ತು ನಾನಾ ರಾಜ್ಯಗಳ ರಾಜಕೀಯದಲ್ಲಿ ತೊಡಗಿಸಿಕೊಂಡಿದೆ. ವಿವಿಧ ಸಾಮಾಜಿಕ ಮತ್ತು ಆರ್ಥಿಕ ಸುಧಾರಣೆಗಳನ್ನು ಪ್ರತಿಪಾದಿಸುತ್ತದೆ. ಕಾಂಗ್ರೆಸ್ ಪಕ್ಷವು ದೇಶದ ಅನೇಕ ರಾಜ್ಯಗಳಲ್ಲಿಯೂ ಅಧಿಕಾರದ ಚುಕ್ಕಾಣಿಯನ್ನು ಹಿಡಿಯುತ್ತಾ ಬಂದಿತ್ತು. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ಅದು ಕೆಲವು ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಇತರ ಪ್ರಾದೇಶಿಕ ಪಕ್ಷಗಳಿಂದ ಸವಾಲುಗಳನ್ನು ಎದುರಿಸುತ್ತಿದೆ. 

ಇನ್ನೂ ಹೆಚ್ಚು ಓದಿ

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​

ಇಲ್ಲಸಲ್ಲದ ನೆಪ ಹೇಳಿ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಸರ್ಕಾರ ತಾಯಂದಿರ ಹೆಸರನ್ನು ಕೈಬಿಡುತ್ತಿರುವುದಾಗಿ ಎಕ್ಸ್​​ ಪೋಸ್ಟ್​ ಮೂಲಕ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನು 'ವೋಟ್ ಬ್ಯಾಂಕ್ ವಂಚನೆ' ಎಂದು ಕರೆದಿರುವ ಜೆಡಿಎಸ್​​, 5,000 ಕೋಟಿ ರೂ. ಗೃಹಲಕ್ಷ್ಮಿ ಹಣವನ್ನು ತಿಂದು ತೇಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮತಕ್ಕಾಗಿ ಮಹಿಳೆಯರನ್ನು ಯಾಮಾರಿಸಿದೆ ಎಂದು ಕಿಡಿ ಕಾರಿದೆ.

TV9 Kannada Live: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್​​ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​​ ಇಲ್ಲಿವೆ.

ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ

ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಯ ಕಸರತ್ತು ಜೋರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ದೆಹಲಿ ತಲುಪಿದ್ದಾರೆ. ಭರತ್ ರೆಡ್ಡಿ, ಪ್ರದೀಪ್ ಈಶ್ವರ್ ಸೇರಿದಂತೆ ಯುವ ಮುಖಗಳಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು ರೀತಿ ಹೊಸ ಹಾಗೂ ಯುವ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.

ಕಾಂಗ್ರೆಸ್ ಜೊತೆ ವಿಲೀನವಾಗುವ ವದಂತಿ ಸುಳ್ಳು; ಟಿಎಂಸಿ ಸ್ಪಷ್ಟನೆ

ತೃಣಮೂಲ ಕಾಂಗ್ರೆಸ್ (TMC) ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಲಾಗುತ್ತಿದೆ ಮತ್ತು ಮಮತಾ ಬ್ಯಾನರ್ಜಿ ಅವರಿಗೆ ಕಾಂಗ್ರೆಸ್‌ನಲ್ಲಿ ಉನ್ನತ ಹುದ್ದೆಗಳನ್ನು ಆಫರ್ ನೀಡಲಾಗಿದೆ ಎಂಬ ವರದಿಗಳನ್ನು ಟಿಎಂಸಿ ಪಕ್ಷವು ಸಂಪೂರ್ಣವಾಗಿ ನಿರಾಕರಿಸಿದೆ. ಈ ವರದಿಗಳು ಆಧಾರರಹಿತ ಎಂದು ಸ್ಪಷ್ಟಪಡಿಸಿರುವ ಟಿಎಂಸಿ, ಕೇವಲ ರಾಜಕೀಯ ಮೈತ್ರಿಗೆ ಮಾತ್ರ ತಮ್ಮ ಬಾಗಿಲು ತೆರೆದಿದೆ ಎಂದು ತಿಳಿಸಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗಿನ ಭೇಟಿಯ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಗಳನ್ನು ಟಿಎಂಸಿ ನಾಯಕತ್ವ ತಳ್ಳಿಹಾಕಿದೆ. ಪಕ್ಷದ ಅಸ್ತಿತ್ವವನ್ನು ಬಿಟ್ಟುಕೊಡುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಟಿಎಂಸಿ ಹಿರಿಯ ನಾಯಕರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ

ಎನ್‌ಡಿಎ ಸರ್ಕಾರದ 12 ವರ್ಷಗಳ ಸಾಧನೆಯನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಮಂದಗತಿಯ ಬೆಳವಣಿಗೆಯ ಅವಧಿಯನ್ನು ತಪ್ಪಾಗಿ 'ಹಿಂದೂ ಗ್ರೋತ್ ರೇಟ್' ಎಂದು ಕರೆಯಲಾಗಿತ್ತು. ವಾಸ್ತವದಲ್ಲಿ ಅದನ್ನು 'ಕಾಂಗ್ರೆಸ್ ಗ್ರೋತ್ ರೇಟ್' ಎಂದೇ ಕರೆಯಬೇಕಿತ್ತು ಎಂದರು. ಕಾಂಗ್ರೆಸ್ ಸರ್ಕಾರಗಳು ವರ್ಷಗಳ ಕಾಲ ತಮ್ಮ ನೀತಿ ಮತ್ತು ಆಡಳಿತಾತ್ಮಕ ವೈಫಲ್ಯಗಳ ಮೂಲಕ ದೇಶವನ್ನು ಅಸಹಾಯಕತೆ, ಸಂಕಷ್ಟ ಮತ್ತು ಕೀಳರಿಮೆಯ ಕೂಪಕ್ಕೆ ತಳ್ಳಿದ್ದವು ಎಂದು ಅವರು ಆರೋಪಿಸಿದರು. ದೇಶವನ್ನು ಕಾಂಗ್ರೆಸ್ ಆಡಳಿತದ ಹಳೆಯ ಪರಂಪರೆಯಿಂದ ಮುಕ್ತಗೊಳಿಸಿದ್ದೇ ಎನ್‌ಡಿಎ ಸರ್ಕಾರದ 12 ವರ್ಷಗಳ ಅಧಿಕಾರದ ಅತ್ಯಂತ ದೊಡ್ಡ ಸಾಧನೆ ಎಂದು ಮೋದಿ ಹೇಳಿದರು.

ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್

ಇಡೀ ಬೆಂಗಳೂರೇ ಬೆಚ್ಚಿಬೀಳೋ ದೊಡ್ಡ ಹಗರಣದ ದಾಖಲೆಯನ್ನ ವಿಪಕ್ಷ ನಾಯಕ ಆರ್​.ಅಶೋಕ್​ ರಿಲೀಸ್ ಮಾಡಿದ್ದಾರೆ. ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ್ದು, ಈ ಸಂಬಂಧ ಬಿಜೆಪಿ, ಸಿಬಿಐ ತನಿಖೆ ಆಗಬೇಕೆಂದು ರಾಜ್ಯಪಾಲ ಹಾಗೂ ಲೋಕಾಯುಕ್ತಕ್ಕೂ ದೂರು ನೀಡಿದೆ. ಇನ್ನು ಈ ಆರೋಪಕ್ಕೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.

ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆಗೆ ವಿಶೇಷ ಪೂಜೆ, ಉರುಳು ಸೇವೆ

ರಾಯಚೂರು ಜಿಲ್ಲೆ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಆಗ್ರಹಿಸಿದ್ದಾರೆ. ಇನ್ನು  ಹಂಪನಗೌಡ ಬಾದರ್ಲಿಗೆ ಮತ್ರಿ ಸ್ಥಾನ ಕರುಣಿಸಲಿ ಎಂದು ಅವರ ಅಭಿಮಾನಿಗಳು, ಗಾಳಿ ದುರ್ಗಮ್ಮ ದೇವಸ್ಥಾನದವರೆಗೆ ಪಾದಯಾತ್ರೆ ನಡೆಸಿದ್ದು, ತಮ್ಮ ನಾಯಕನಿಗೆ ಸಚಿವ ಸ್ಥಾನ ಸಿಗಲಿ ಎಂದು ಶಕ್ತಿ ದೇವತೆ ಗಾಳಿ ದುರ್ಗಮ್ಮಗೆ 101 ತೆಂಗಿನಕಾಯಿ ಒಡೆದ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದಾರೆ. ಇನ್ನು ಈ ಬಗ್ಗೆ ನಮ್ಮ ರಾಯಚೂರು ಜಿಲ್ಲಾ ಪ್ರತಿನಿಧಿ ಭೀಮೇಶ್ ನೀಡಿರೋ ಪ್ರತ್ಯಕ್ಷ ವರದಿ ಇಲ್ಲಿದೆ ನೋಡಿ.

ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ ಈ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕೆಲವರು ಸಾವನ್ನಪ್ಪಿದ್ದು, ಆದರೂ ಗೃಹಲಕ್ಷ್ಮಿ ಹಣ ಯಾರಿಗೋ ಹೋಗುತ್ತಿದ್ದು, ಇದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಹೊಸದಾಗಿ ಐಡೆಂಟಿ ಆಗಬೇಕಿದೆ. ಮರುಪರಿಶೀಲನೆ ಮಾಡ್ತಾವಿದಿವಿ ಅಷ್ಟೇ. ಯಾರಿಗೆ ಸಿಗಬೇಕು ಅದು ಸಿಗಲಿ ಎಂದು ಸ್ಪಷ್ಟಪಡಿಸಿದರು.

36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು

ಬೆಂಗಳೂರಿನ ಕಸದ ಟೆಂಡರ್​​​ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ. 

ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದರು ಮತ್ತು ನಾಯಕರು ಸಾಲು ಸಾಲು ರಾಜೀನಾಮೆ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಎಂಸಿ ಕಾಂಗ್ರೆಸ್ ಜೊತೆ ವಿಲೀನವಾಗಲಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ಮಮತಾ ಬ್ಯಾನರ್ಜಿ 2 ದಿನಗಳಿಂದ ಕಾಂಗ್ರೆಸ್ ನಾಯಕರೊಂದಿಗೆ ಸಾಲು ಸಾಲು ಮಾತುಕತೆ ನಡೆಸುತ್ತಿರುವುದು ಈ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗುತ್ತಾ? ಎಂಬ ಕುತೂಹಲ ಮೂಡಿದೆ.

ತನ್ನ ಅಭ್ಯರ್ಥಿಯ ನಾಮಪತ್ರ ರದ್ದಾಗಲೆಂದೇ ಕಾಂಗ್ರೆಸ್ ಫಾರ್ಮ್ ತುಂಬಿತ್ತಾ? ಬಿಜೆಪಿ ಲೇವಡಿ

ಈ ಪ್ರಕರಣದ ಹಿನ್ನೆಲೆಯನ್ನು ವಿವರವಾಗಿ ಪ್ರಸ್ತಾಪಿಸಿದ ಸುಧಾಂಶು ತ್ರಿವೇದಿ, "ಅದು ತೆಲಂಗಾಣದ ಒಬ್ಬ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೇ ತನ್ನದೇ ರಾಜ್ಯದ ಮತ್ತೊಬ್ಬ ಕಾಂಗ್ರೆಸ್ ನಾಯಕನ ವಿರುದ್ಧ ಲೈಂಗಿಕ ಶೋಷಣೆ ಮತ್ತು ಅನುಚಿತ ವರ್ತನೆಯ ಆರೋಪ ಹೊರಿಸಿ ದಾಖಲಿಸಿದ್ದ ಪ್ರಕರಣವಾಗಿತ್ತು. ಆಕೆ ನೀಡಿದ್ದ ದೂರಿನಲ್ಲಿ ಆ ಸಮಯದಲ್ಲಿ ಉಸ್ತುವಾರಿಯಾಗಿದ್ದ ಮೀನಾಕ್ಷಿ ನಟರಾಜನ್ ಹೆಸರನ್ನೂ ಈ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿಸಿದ್ದರು. ಕಾಂಗ್ರೆಸ್ ತನ್ನದೇ ಪಕ್ಷದ ಕಾರ್ಯಕರ್ತೆಯ ಮೇಲಾದ ದೌರ್ಜನ್ಯವನ್ನು ಮುಚ್ಚಿಟ್ಟಿತ್ತು" ಎಂದು ಟೀಕಿಸಿದ್ದಾರೆ.

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ ಕಾನೂನುಬಾಹಿರ; ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಹೇಳಿದ್ದೇನು?

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಮರುದಿನವೇ, ಕಾಂಗ್ರೆಸ್‌ನ ಹಿರಿಯ ನಾಯಕರ ಉನ್ನತ ಮಟ್ಟದ ನಿಯೋಗ ಇಂದು ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿತು. ಚುನಾವಣಾ ಆಯೋಗದೊಂದಿಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕರು, ನಾಮಪತ್ರ ರದ್ದತಿಯನ್ನು ಸಂಪೂರ್ಣ ಕಾನೂನುಬಾಹಿರ ಎಂದು ಕರೆದಿದ್ದಾರೆ. ಈ ವಿಷಯದಲ್ಲಿ ಚುನಾವಣಾ ಆಯೋಗದಿಂದ ಯಾವುದೇ ಸೂಕ್ತ ಭರವಸೆ ಸಿಗದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಿದ್ದಾರೆ.