Coronavirus
2019ರ ಡಿಸೆಂಬರ್‌ನಲ್ಲಿ ಮೊದಲ ಬಾರಿಗೆ ಚೀನಾದ ವುಹಾನ್‌ನಲ್ಲಿ ಪತ್ತೆಯಾಗುವ ಮೂಲಕ ಈ ವೈರಸ್ ಇಡೀ ವಿಶ್ವವನ್ನೇ ಆವರಿಸಿಕೊಂಡಿತ್ತು. ಇಡೀ ವಿಶ್ವವೇ ಲಾಕ್ ಡೌನ್ನಿಂದಾಗಿ ಆರ್ಥಿಕ ಸಂಕಷ್ಟ ಎದುರಿಸಬೇಕಾಯಿತು. ಇಷ್ಟೆಲ್ಲ ಭೀಕರತೆಯ ನಡುವೆ ಕೊರೊನಾ ವೈರಸ್ ಅನ್ನು ಸಾಂಕ್ರಾಮಿಕ ರೋಗವೆಂದು 2020ರ ಮಾರ್ಚ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತು.ವಿಶ್ವದಲ್ಲೇ ಇದುವರೆಗೆ 70 ಕೋಟಿ ಪ್ರಕರಣ ದಾಖಲಾಗಿದ್ದು, ಸುಮಾರು 70ಲಕ್ಷ ಜನರನ್ನು ಬಲಿಪಡೆದುಕೊಂಡಿದೆ. ಭಾರತದಲ್ಲಿ ನಾಲ್ಕೂವರೆ ಕೋಟಿ ಪ್ರಕರಣಗಳು ದಾಖಲಾಗಿದೆ. 5.33 ಲಕ್ಷ ಮಂದಿ ಅಸುನೀಗಿದ್ದಾರೆ. ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಇದು ಸಾಮಾನ್ಯ ಶೀತದಿಂದ ಪ್ರಾರಂಭವಾಗಿ ಶ್ವಾಸಕೋಶದ ಸೋಂಕನ್ನು ಉಂಟು ಮಾಡಿ ಪ್ರಾಣಕ್ಕೆ ಕಂಟಕವಾಗುತ್ತದೆ. ಇದೀಗಾ ಮತ್ತೆ ಇದರ ಹಾವಳಿ ಪ್ರಾರಂಭವಾಗಿದ್ದು, ಜನಸಾಮಾನ್ಯರಲ್ಲಿ ತಲ್ಲಣ ಉಂಟುಮಾಡಿದೆ.