AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CP Radhakrishnan

CP Radhakrishnan

ಸಿಪಿ ರಾಧಾಕೃಷ್ಣನ್ (ಉಪರಾಷ್ಟ್ರಪತಿ ಅಭ್ಯರ್ಥಿ)

ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್(CP Radhakrishnan) ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಎನ್​​ಡಿಎ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ತಮಿಳುನಾಡಿನ ತಿರುಪ್ಪೂರಿನಲ್ಲಿ 1957 ರ ಅಕ್ಟೋಬರ್ 20 ರಂದು ಜನಿಸಿದ ರಾಧಾಕೃಷ್ಣನ್ ಅವರ ರಾಜಕೀಯ ಜೀವನವು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​​ಎಸ್​ಎಸ್​) ಮತ್ತು ಜನಸಂಘದೊಂದಿಗೆ ಆರಂಭವಾಯಿತು. ಸಿಪಿ ರಾಧಾಕೃಷ್ಣನ್ 70ರ ದಶಕದಲ್ಲಿ ಆರ್​ಎಸ್​ಎಸ್​​ನಲ್ಲಿ ಸಕ್ರಿಯರಾಗಿದ್ದರು.ರಾಧಾಕೃಷ್ಣನ್ 2024ರ ಜುಲೈ 31ರಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದಾರೆ. ಇದಕ್ಕೂ ಮೊದಲು ಫೆಬ್ರವರಿ 18, 2023 ರಿಂದ ಜುಲೈ 30, 2024 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ.
ಅಲ್ಲದೆ, ಅವರು ತೆಲಂಗಾಣ ಮತ್ತು ಪುದುಚೇರಿಯಲ್ಲಿ ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿದ್ದರು.ರಾಧಾಕೃಷ್ಣನ್ ಅವರು 1998 ಮತ್ತು 1999 ರಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾದರು. ಸಂಸದರಾಗಿದ್ದ ಅವಧಿಯಲ್ಲಿ, ಅವರು ಜವಳಿ ಕುರಿತಾದ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಅವರು 2003 ರಿಂದ 2006 ರವರೆಗೆ ತಮಿಳುನಾಡು ಬಿಜೆಪಿಯ ಅಧ್ಯಕ್ಷರಾಗಿದ್ದರು. ಇದಲ್ಲದೆ, ಅವರು ಕೇರಳ ಬಿಜೆಪಿಯ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು.

ಇನ್ನೂ ಹೆಚ್ಚು ಓದಿ

ಉಪ ರಾಷ್ಟ್ರಪತಿಯಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಸಿಪಿ ರಾಧಾಕೃಷ್ಣನ್: ಇಲ್ಲಿದೆ ಕಾರಣ?

ಇತ್ತೀಚೆಗೆ ನಡೆದಿದ್ದ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಭರ್ಜರಿ ಜಯಗಳಿಸುವ ಮೂಲಕ ಉಪ ರಾಷ್ಟ್ರಪತಿ ಸ್ಥಾನ ಅಲಂಕರಿಸಿರುವ ಸಿಪಿ ರಾಧಾಕೃಷ್ಣನ್​ ಅವರು, ಮೊಟ್ಟಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ನವೆಂಬರ್ 9 ರಂದು ಹಾಸನದ ಶ್ರವಣಬೆಳಗೊಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಜೈನ ಮಠದ ಸ್ವಸ್ತ್ರಿಶ್ರೀ ಮಾಹಿತಿ ನೀಡಿದ್ದಾರೆ.

Video: ಇಂಡಿ ಒಕ್ಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಒಂದು ದಿನದ ನಂತರ ಇಂಡಿ ಒಕ್ಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕೆ.ಸಿ. ವೇಣುಗೋಪಾಲ್ ಅವರ ಸಮ್ಮುಖದಲ್ಲಿ ರೆಡ್ಡಿ ನಾಮಪತ್ರ ಸಲ್ಲಿಸಿದರು. ಇದಲ್ಲದೆ, ಶಿವಸೇನೆ (ಯುಬಿಟಿ) ಸಂಸದರಾದ ಸಂಜಯ್ ರಾವತ್ ಮತ್ತು ಪ್ರಿಯಾಂಕಾ ಚತುರ್ವೇದಿ, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಅಲ್ಲಿ ಹಾಜರಿದ್ದರು.