DK Shivakumar
ಕಾಂಗ್ರೆಸ್ ಪಕ್ಷದ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಸಧ್ಯ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು. ಇವರ ಅಭಿಮಾನಿಗಳು ಇವರನ್ನು ಕನಕಪುರ ಬಂಡೆ ಎಂದೇ ಕೊಂಡಾಡುತ್ತಾರೆ. ಸದ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿ ಬ್ರ್ಯಾಂಡ್ ಬೆಂಗಳೂರು ಕನಸು ಹೊತ್ತು ಕರ್ನಾಟಕದ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 2023ರ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಇವರು ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪ್ರಥಮ ಪುತ್ರರಾಗಿ 15ನೇ ಮೇ, 1962ರಂದು ಡಿಕೆಶಿ ಜನಿಸಿದರು. ಇವರು ಬೆಂಗಳೂರಿನ ಆರ್.ಸಿ. ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಗಲೇ ಯುವ ಕಾಂಗ್ರೆಸ್‍ಗೆ ಸೇರಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾದ್ರು.
ಮೇಕೆದಾಟು ಯೋಜನೆಗಾಗಿ 160 ಕಿ.ಮೀ ಪಾದಯಾತ್ರೆ, 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಸ್ವಾತಂತ್ರ್ಯ ನಡಿಗೆ, ರಾಹುಲ್ ಗಾಂಧಿ ಅವರ ಜೊತೆ ಭಾರತ್ ಜೋಡೋ ಯಾತ್ರೆ, ನಾ ನಾಯಕಿ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತೇಜನ ನೀಡುವಂತಹ ಯಶಸ್ವಿ ಕಾರ್ಯಕ್ರಮಗಳನ್ನು ಮಾಡಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿ ರಾಜ್ಯದಲ್ಲಿ 136 ಸ್ಥಾನಗಳನ್ನು ಪಡೆಯುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.
TV9 Kannada Live: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ
Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿವೆ.
- Prasanna Hegde
- Updated on: Jun 11, 2026
- 12:01 pm
ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಯ ಕಸರತ್ತು ಜೋರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ದೆಹಲಿ ತಲುಪಿದ್ದಾರೆ. ಭರತ್ ರೆಡ್ಡಿ, ಪ್ರದೀಪ್ ಈಶ್ವರ್ ಸೇರಿದಂತೆ ಯುವ ಮುಖಗಳಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು ರೀತಿ ಹೊಸ ಹಾಗೂ ಯುವ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
- Prasanna Gaonkar
- Updated on: Jun 11, 2026
- 7:12 am
ಬೆಂಗಳೂರು ಕಸದಲ್ಲಿ 36 ಸಾವಿರ ಕೋಟಿ ರೂ. ಲೂಟಿ ಆರೋಪ: ಬಿಜೆಪಿಗೆ ಡಿಕೆಶಿ ಓಪನ್ ಚಾಲೆಂಜ್
ಇಡೀ ಬೆಂಗಳೂರೇ ಬೆಚ್ಚಿಬೀಳೋ ದೊಡ್ಡ ಹಗರಣದ ದಾಖಲೆಯನ್ನ ವಿಪಕ್ಷ ನಾಯಕ ಆರ್.ಅಶೋಕ್ ರಿಲೀಸ್ ಮಾಡಿದ್ದಾರೆ. ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿದ್ದು, ಈ ಸಂಬಂಧ ಬಿಜೆಪಿ, ಸಿಬಿಐ ತನಿಖೆ ಆಗಬೇಕೆಂದು ರಾಜ್ಯಪಾಲ ಹಾಗೂ ಲೋಕಾಯುಕ್ತಕ್ಕೂ ದೂರು ನೀಡಿದೆ. ಇನ್ನು ಈ ಆರೋಪಕ್ಕೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಖಡಕ್ ಸ್ಪಷ್ಟನೆ ನೀಡಿದ್ದಾರೆ.
- Ramesh B Jawalagera
- Updated on: Jun 10, 2026
- 10:09 pm
ಗೃಹಲಕ್ಷ್ಮಿ ಯೋಜನೆಗೆ ಮೇಜರ್ ಸರ್ಜರಿ: ಮಹತ್ವದ ಅಪ್ಡೇಟ್ ನೀಡಿದ ಸಿಎಂ ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ ಈ ಸಂಬಂಧ ದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಕೆಲವರು ಸಾವನ್ನಪ್ಪಿದ್ದು, ಆದರೂ ಗೃಹಲಕ್ಷ್ಮಿ ಹಣ ಯಾರಿಗೋ ಹೋಗುತ್ತಿದ್ದು, ಇದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ಹೊಸದಾಗಿ ಐಡೆಂಟಿ ಆಗಬೇಕಿದೆ. ಮರುಪರಿಶೀಲನೆ ಮಾಡ್ತಾವಿದಿವಿ ಅಷ್ಟೇ. ಯಾರಿಗೆ ಸಿಗಬೇಕು ಅದು ಸಿಗಲಿ ಎಂದು ಸ್ಪಷ್ಟಪಡಿಸಿದರು.
- Ramesh B Jawalagera
- Updated on: Jun 10, 2026
- 8:36 pm
1.48 ಲಕ್ಷ ಮೃತ ಮಹಿಳೆಯರ ಖಾತೆಗೆ ಹೋಗಿತ್ತು 128 ಕೋಟಿ ರೂ. ಹಣ! ಗೃಹಲಕ್ಷ್ಮಿ ಯೋಜನೆ ಮಹಾ ಪರಿಷ್ಕರಣೆಗೆ ಸಿದ್ಧತೆ
ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟಿರುವ 1.48 ಲಕ್ಷ ಮಹಿಳೆಯರ ಖಾತೆಗಳಿಗೆ 128 ಕೋಟಿ ರೂಪಾಯಿಗೂ ಅಧಿಕ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಈ ಭಾರಿ ತಾಂತ್ರಿಕ ಲೋಪ ಹಾಗೂ ಮೊಬೈಲ್ ಸಂಖ್ಯೆಗಳ ಗೊಂದಲ ನಿವಾರಿಸಲು ಮುಖ್ಯಮಂತ್ರಿ ಡಿಕೆಶಿವಕುಮಾರ್ ನೇತೃತ್ವದ ಸರ್ಕಾರ ಇದೀಗ ಫಲಾನುಭವಿಗಳಿಂದ ಹೊಸದಾಗಿ ಮರು ಅರ್ಜಿ ಸ್ವೀಕರಿಸಲು ಸಿದ್ಧತೆ ನಡೆಸಿದೆ.
- Prasanna Gaonkar
- Updated on: Jun 10, 2026
- 10:24 am
TV9 Kannada Live: ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು
Karnataka News Live Updates: ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟದಲ್ಲಿನ ಖಾತೆ ಹಂಚಿಕೆ ಅಸಮಾಧಾನ, ಸಂಪುಟ ವಿಸ್ತರಣೆ ಕಸರತ್ತು, ಸುದೀರ್ಘ ಅವಧಿಗೆ ಪ್ರಧಾನಿಯಾದ ದಾಖಲೆ ನಿರ್ಮಿಸಿದ ನರೇಂದ್ರ ಮೋದಿ, ರಾಜ್ಯಸಭೆ ಚುನಾವಣೆ, ಇರಾನ್ ಯುದ್ಧ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
- Ganapathi Sharma
- Updated on: Jun 10, 2026
- 9:55 pm
ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ
ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಯಿಂದ ಸ್ನಾತಕೋತ್ತರ ಹಂತದವರೆಗಿನ ಪುರುಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ನೀಡಲು ಘೋಷಣೆ ಮಾಡಿದೆ. ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ ಈ ಮೊದಲ ಘೋಷಣೆ ಮಾಡಿದ್ದಾರೆ. ಆದರೆ, ಇತ್ತ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ತಿಂಗಳ ಅಥವಾ ಇಯರ್ಲಿ ಪಾಸ್ ನೀಡುವಂತೆ ವಿದ್ಯಾರ್ಥಿಗಳು ಸಿಎಂಗೆ ಮನವಿ ಮಾಡಿದ್ದಾರೆ.
- Kiran Surya
- Updated on: Jun 9, 2026
- 10:38 pm
ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲೂ ಜೋರಾದ ಶಾಸಕರ ಲಾಬಿ, ಸಂಚಲನ ಮೂಡಿಸಿದ ಕೃಷ್ಣಭೈರೇಗೌಡ ನಡೆ
ಡಿಕೆ ಶಿವಕುಮಾರ್ (DK Shivakumar) ಮೊದಲ ಹಂತದ ಸಂಪುಟದ ಸಚಿವರ ಖಾತೆ ಕ್ಯಾತೆ ಇನ್ನೂ ಮುಗಿದಿಲ್ಲ. ಖಾತೆ ಸಂಬಂಧ ರಾಮಲಿಂಗಾರೆಡ್ಡಿ, ಕೆಎಚ್ ಮುನಿಯಪ್ಪ ಹಾಗೂ ಕೃಷ್ಣಭೈರೇಗೌಡ ಅಸಮಾಧಾನಗೊಂಡಿದ್ದಾರೆ. ಇದರ ನಡುವೆ ಇದೀಗ ಎರಡನೇ ಹಂತದ ಸಚಿವ ಸಂಪುಟ ಪುನಾರಚನೆ ಕಸರತ್ತು ನಡೆದಿದ್ದು, ನವದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರ ಲಾಬಿ ಜೋರಾಗಿದೆ. ಶ್ರೀನಿವಾಸ್ ಮಾನೆ, ಅಜಯ್ ಸಿಂಗ್, ಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಶಾಸಕರು ದಿಲ್ಲಿಗೆ ಹಾರಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.
- Ramesh B Jawalagera
- Updated on: Jun 9, 2026
- 6:06 pm
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ, ಸಚಿವ ಸ್ಥಾನದ ರೇಸ್ನಲ್ಲೂ ಇಲ್ಲ: ರಾಜಣ್ಣ ಖಡಕ್ ಮಾತು
ಶಾಸಕ ಕೆಎನ್ ರಾಜಣ್ಣ ಅವರು ಸಿಎಂ ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಮುದಾಯವಾರು ಡಿಸಿಎಂ ಸ್ಥಾನಗಳ ಬೇಡಿಕೆಯನ್ನು ಬೆಂಬಲಿಸಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ವಿಳಂಬ ಮಾಡಬಾರದು, ಇದು ರಾಜ್ಯಕ್ಕೆ ಅನ್ಯಾಯ ಎಂದು ಒತ್ತಿ ಹೇಳಿದ್ದಾರೆ.
- Ganapathi Sharma
- Updated on: Jun 9, 2026
- 11:43 am
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿಕೆ ಶಿವಕುಮಾರ್
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದರು. ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು.
- Akshay Pallamajalu
- Updated on: Jun 9, 2026
- 9:22 am
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?
ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೌದು...ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು. ಇದನ್ನು ಡಿಕೆ ಶಿವಕುಮಾರ್ ಮುಂದುವರೆಸಿದ್ದು, ಇಂದು (ಜೂನ್ 08) ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಡಿವಿ ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸದಾನಂದಗೌಡ ಅವರ ಕುಟುಂಬ ಡಿಕೆ ಶಿವಕುಮಾರ್ ಅವರನ್ನು ಆರತಿ ಬೆಳಗಿ ಮನೆಗೆ ಸ್ವಾಗತಿಸಿರುವುದು ವಿಶೇಷ
- Ramesh B Jawalagera
- Updated on: Jun 8, 2026
- 10:31 pm
ಸಿಎಂ ಡಿಕೆ ಶಿವಕುಮಾರ್ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ: ಯಾರಿವರು?
2023ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಕಾರಣರಾಗಿದ್ದ ಚುನಾವಣಾ ತಂತ್ರಗಾರ ಸುನೀಲ್ ಕನುಗೋಳುಗೆ ಮಹತ್ವದ ಹುದ್ದೆ ಲಭಿಸಿದೆ. ಈ ಹಿಂದೆ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರಾಗಿದ್ದ ಸುನೀಲ್ ಕನುಗೋಳು ಅವರನ್ನು ಸಹ ಸಿಎಂ ಡಿಕೆ ಶಿವಕುಮಾರ್ ಅವರು ಸಹ ನೇಮಕ ಮಾಡಿಕೊಂಡಿದ್ದಾರೆ. ಹಾಗಾದ್ರೆ, ಯಾರು ಈ ಸುನೀಲ್ ಕನುಗೋಳು ಎನ್ನುವ ಡಿಟೇಲ್ಸ್ ಇಲ್ಲಿದೆ.
- Ramesh B Jawalagera
- Updated on: Jun 8, 2026
- 10:04 pm