Ekadashi
ಏಕಾದಶಿ – ಹಿಂದೂ ಪಂಚಾಂಗದ 12 ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ. ಒಂದು ವರ್ಷದಲ್ಲಿ 24 ಏಕಾದಶಿಗಳಿವೆ, ಅಂದರೆ ಪ್ರತಿ ತಿಂಗಳು ಎರಡು ಏಕಾದಶಿ ಉಪವಾಸಗಳನ್ನು ಆಚರಿಸಲಾಗುತ್ತದೆ.ಈ ದಿನದಂದು ಶ್ರದ್ಧಾ ಭಕ್ತಿಯಿಂದ ದೇವರನ್ನು ಪೂಜಿಸುವುದು ಮತ್ತುಉಪವಾಸ ಮಾಡುವ ಸಂಪ್ರದಾಯವಿದೆ. ಉಪವಾಸದಲ್ಲಿ ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ, ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ, ನಿರಾಹಾರ ವ್ರತವನ್ನು ಆಚರಿಸುತ್ತಾರೆ. ಈ ಏಕಾದಶಿ ವ್ರತವನ್ನು ಆಚರಿಸುವುದರಿಂದ ಈ ಜನ್ಮದಲ್ಲಿನ ಪಾಪಗಳಿಂದ ಮಾತ್ರವಲ್ಲದೆ ಕಳೆದ ಏಳು ಜನ್ಮಗಳ ಪಾಪಗಳಿಂದಲೂ ಮುಕ್ತಿ ಪಡೆಯಬಹುದು ಎಂದು ನಂಬಲಾಗಿದೆ