D Gukesh
ಭಾರತದ 18 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಚೀನಾದ ಡಿಂಗ್ ಲಿರೆನ್ ಅವರನ್ನು ಮಣಿಸುವ ಮೂಲಕ ಗುಕೇಶ್ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ. ತಮಿಳುನಾಡು ಮೂಲದ ಗುಕೇಶ್ ಮೇ 7, 2006 ರಂದು ಜನಿಸಿದರು. ಅವರ ಪೂರ್ಣ ಹೆಸರು ದೋಮರಾಜು ಗುಕೇಶ್. ಗುಕೇಶ್ ಅವರ ತಂದೆ ವೈದ್ಯರಾಗಿದ್ದರೆ, ಅವರ ತಾಯಿ ವೃತ್ತಿಯಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿದ್ದಾರೆ. ಗುಕೇಶ್ ಏಳನೇ ವಯಸ್ಸಿನಲ್ಲಿ ಚೆಸ್ ಆಡಲು ಪ್ರಾರಂಭಿಸಿದರು. ಅವರಿಗೆ ಆರಂಭದಲ್ಲಿ ಭಾಸ್ಕರ್ ತರಬೇತಿ ನೀಡುತ್ತಿದ್ದರು. ಇದಾದ ನಂತರ ಸ್ವತಃ ವಿಶ್ವನಾಥನ್ ಆನಂದ್ ಅವರಿಗೆ ಚೆಸ್ ಆಟದ ಬಗ್ಗೆ ತಿಳಿಸಿ ತರಬೇತಿ ನೀಡಿದ್ದರು.