Hasanamba Temple
ಹಾಸನದ ಅಧಿದೇವತೆ, ನಾಡಿನ ಶಕ್ತಿ ದೇವತೆ ಎಂದೇ ಪ್ರಸಿದ್ಧಳಾದ ಹಾಸನಾಂಬೆ ಅಥವಾ ಹಾಸನಾಂಬಾ ದೇವಿ ವರ್ಷದಲ್ಲಿ ಒಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುತ್ತಾಳೆ. ಹಾಸನದಲ್ಲಿ ಹುತ್ತದ ರೂಪದಲ್ಲಿ ನೆಲೆಸಿರುವ ಶಕ್ತಿದೇವತೆಯ ದರ್ಶನ ಸಾಮಾನ್ಯವಾಗಿ ದೀಪಾವಳಿಯ ಸಂದರ್ಭದಲ್ಲಿ ಆರಂಭವಾಗುತ್ತದೆ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯ ಗುರುವಾರ ದೇಗುಲದ ಬಾಗಿಲು ತೆರೆಯಲಾಗುತ್ತದೆ. ಹಾಸನಾಂಬ ದೇಗುಲ ಸುಮಾರು 12ನೇ ಶತಮಾನದಲ್ಲಿ ನಿರ್ಮಾಣವಾಗಿದ್ದು ಎನ್ನಲಾಗಿದೆ. ಹೊಯ್ಸಳ ರಾಜವಂಶದವರ ಕಾಲದಲ್ಲಿ ನಿರ್ಮಾಣವಾಗಿದ್ದು ಎನ್ನಲಾದ ಈ ದೇಗುಲಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆಯುತ್ತಾರೆ. ಈ ವರ್ಷ (2024) ಅಕ್ಟೋಬರ್ 24ರ ಮದ್ಯಾಹ್ನ ದೇಗುಲದ ಬಾಗಿಲು ತೆರೆದರೆ ನವೆಂಬರ್ 3ಕ್ಕೆ ಮದ್ಯಾಹ್ನ 12ಕ್ಕೆ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುತ್ತದೆ. ನಂತರ ಮುಂದಿನ ವರ್ಷವೇ ದೇವಿ ಭಕ್ತರಿಗೆ ದರ್ಶನ ನೀಡುವುದು