HD Deve Gowda
HD Deve Gowda – ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ (ಹೆಚ್ಡಿ ದೇವೇಗೌಡ) ದೇಶದ ರಾಜಕಾರಣದಲ್ಲಿ ಅತ್ಯಂತ ಪ್ರಭಾವಿ ಹಾಗೂ ಹಿರಿಯ ನಾಯಕ. 1933 ರ ಜೂನ್ 1 ರಂದು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ಜನಿಸಿದ ಇವರು, ಸಾರ್ವಜನಿಕ ಜೀವನದಲ್ಲಿ ಮಣ್ಣಿನ ಮಗ ಎಂದೇ ಖ್ಯಾತಿ ಪಡೆದಿದ್ದಾರೆ. ಜೆಡಿಎಸ್ (ಜನತಾದಳ ಸೆಕ್ಯುಲರ್) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಇವರು, ಕರ್ನಾಟಕದ ಮುಖ್ಯಮಂತ್ರಿಯಾಗಿ (1994-1996) ರಾಜ್ಯದ ಅಭಿವೃದ್ಧಿಗೆ, ವಿಶೇಷವಾಗಿ ನೀರಾವರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ತದನಂತರ, ದೇಶದ ಅತ್ಯುನ್ನತ ಹುದ್ದೆಯಾದ, ಭಾರತದ 11ನೇ ಪ್ರಧಾನಮಂತ್ರಿಯಾಗಿ (1996-1997) ಸೇವೆ ಸಲ್ಲಿಸಿದ್ದಾರೆ. ರೈತರು, ಶೋಷಿತರು ಹಾಗೂ ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸಿದ ಇವರು, ಇಂದಿಗೂ ಕರ್ನಾಟಕದ ರಾಜಕೀಯ ಶಕ್ತಿಯ ಕೇಂದ್ರಬಿಂದುವಾಗಿದ್ದಾರೆ. ವಿಶೇಷವಾಗಿ, ರೈತ ಪರ ಹೋರಾಟಗಳಿಂದಲೇ ಗುರುತಿಸಿಕೊಂಡಿರುವ ದೇವೇಗೌಡರ ಗೌರವಾರ್ಥ, ಪಂಜಾಬ್‌ನ ಪ್ರಗತಿಪರ ರೈತರು ಅತ್ಯುತ್ತಮ ಹಾಗೂ ಗುಣಮಟ್ಟದ ಭತ್ತದ ತಳಿಯೊಂದಕ್ಕೆ ‘ದೇವ್ ಗೌಡ’ ಎಂದು ಹೆಸರಿಟ್ಟಿರುವುದು ಗಮನಾರ್ಹ.
ಇನ್ನೂ ಹೆಚ್ಚು ಓದಿನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ
ಹಾಸನದಲ್ಲಿ ದೇವೇಗೌಡರು ನೈಸ್ ಯೋಜನೆಯನ್ನು ಸಮರ್ಥಿಸಿಕೊಂಡು, ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಕಿಡ್ನಿ ಸಮಸ್ಯೆಯಿದ್ದರೂ 'ಬ್ರೇನ್ ಪಕ್ಕಾ' ಎಂದಿರುವ ಅವರು, ಪಿತೃಪಕ್ಷದ ಬಳಿಕ ಸಕ್ರಿಯ ರಾಜಕೀಯಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದರು. ಜೆಡಿಎಸ್-ಬಿಜೆಪಿ ಮೈತ್ರಿ ಖಚಿತಪಡಿಸಿ, ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಕರೆ ನೀಡಿದರು. ರೈತಪರ ತಮ್ಮ ಬದುಕಿನ ಬಗ್ಗೆ ಹೇಳಿ, ಸಂಸತ್ ಭಾಷಣಗಳ ಪುಸ್ತಕ ಬಿಡುಗಡೆಯ ಬಗ್ಗೆ ಮಾಹಿತಿ ನೀಡಿದರು.
- Manjunath KB
- Updated on: Oct 6, 2026
- 6:33 pm
50 ಹಳ್ಳಿ ಜನರಿಗೆ ಭೂಮಿ ಹಿಂದಿರುಗಿಸಬೇಕು: ಆಂದೋಲನ ಘೋಷಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
ನೈಸ್ ರಸ್ತೆ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು, ಇದೀಗ ಅಲ್ಲಿನ ಜನರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಪ್ರತಿಭಟನೆ ನಡೆದಿದ್ದು, ಸ್ಥಳಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ನಿಮ್ಮ ಪರವಾಗಿ ಧ್ವನಿ ಎತ್ತಲು ನಾನು ಸಿದ್ಧನಿದ್ದೇನೆ. ನಿಮ್ಮನ್ನು ದುರ್ಬಳಕೆ ಮಾಡಿಕೊಂಡು ನನಗೇನೂ ಆಗಬೇಕಾಗಿಲ್ಲ. ಈಗಾಗಲೇ ಆರೂವರೆ ಕೋಟಿ ಜನರ ಪ್ರೀತಿ ಸಂಪಾದನೆ ಮಾಡಿದ್ದೇನೆ ಎಂದರು.
- Ramesh B Jawalagera
- Updated on: Sep 27, 2026
- 4:54 pm
ಜೈಲಿನಲ್ಲಿರುವ ಪ್ರಜ್ವಲ್‌ಗೆ ಫೋನ್ ಕೊಟ್ಟವರ್‍ಯಾರು?: ಕೆಪಿಎಸ್‌ಸಿ, ನೈಸ್ ಹಗರಣ ಎತ್ತಿದ್ದಕ್ಕೇ ಟಾರ್ಗೆಟ್ ಎಂದ ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಪ್ರಕರಣ ತಮ್ಮ ಕುಟುಂಬವನ್ನು ಗುರಿಯಾಗಿಸುವ ರಾಜಕೀಯ ಷಡ್ಯಂತ್ರವೆಂದು ಆರೋಪಿಸಿದ್ದಾರೆ. ಕೆಪಿಎಸ್‌ಸಿ, ನೈಸ್ ಹಗರಣಗಳನ್ನು ಎತ್ತಿದ ನಂತರ ಈ ಹೊಸ ಬೆಳವಣಿಗೆಗಳು ಬರುತ್ತಿವೆ ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದೇವೇಗೌಡರ ಕುಟುಂಬವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆಪಾದಿಸಿದ್ದಾರೆ.
- Manjunath KB
- Updated on: Sep 15, 2026
- 1:44 pm
ದೇವೇಗೌಡ್ರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡ್ಲಿ: ನೈಸ್ʼ ಪತ್ರಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರಿನ ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದಿವೆ. ಯಾರು ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರು ಟೋಲ್ ಕಟ್ಟಲು ಹಿಂದೇಟು ಹಾಕುತ್ತಿದ್ದು, ಇದರಿಂದ ಟೋಲ್ ಸಿಬ್ಬಂದಿ ಜನರ ನಡುವೆ ಗಲಾಟೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಎಂಟ್ರಿ ಕೊಟ್ಟಿರುವ ದೇವೇಗೌಡ್ರಿಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
- Naveen Kumar
- Updated on: Sep 7, 2026
- 7:24 pm
ನೈಸ್ ಅಕ್ರಮ ನಿವೇಷನ ಹಂಚಿಕೆ: ಸಿಎಂ ಡಿ.ಕೆ. ಶಿವಕುಮಾರ್‌ಗೆ ದೇವೇಗೌಡರ ಸುದೀರ್ಘ ಪತ್ರ
ನೈಸ್ ಸಂಸ್ಥೆಗೆ ಸಂಬಂಧಿಸಿದಂತೆ 1,453 ನಿವೇಶನಗಳನ್ನು ಹಂಚಿಕೆ ಮಾಡಲು ರಾಜ್ಯ ಸಚಿವ ಸಂಪುಟ ನೀಡಿರುವ ಅನುಮತಿಯನ್ನು ವಿರೋಧಿಸಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ ನಿರ್ಧಾರವು ಸುಪ್ರೀಂ ಕೋರ್ಟ್ ತೀರ್ಪಿಗೆ ಹಾಗೂ ಕಾನೂನಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿರುವ ಅವರು, ಇದರಿಂದ ರೈತರಿಗಿಂತ ನೈಸ್ ಸಂಸ್ಥೆಗೆ ಹೆಚ್ಚಿನ ಲಾಭವಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
- Sunil MH
- Updated on: Sep 7, 2026
- 1:09 pm
Video: ಶ್ರಾವಣ ಶನಿವಾರ; ರಂಗನಾಥ ಸ್ವಾಮಿ ದೇವಾಲಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶೇಷ ಪೂಜೆ
ಮೂರನೇ ಶ್ರಾವಣ ಶನಿವಾರದ ಶುಭ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಕುಟುಂಬ ಸದಸ್ಯರಾದ ಎಚ್.ಡಿ. ರೇವಣ್ಣ ಮತ್ತು ಸೂರಜ್ ರೇವಣ್ಣ ಅವರೊಂದಿಗೆ ದೇವೇಗೌಡರು ರಂಗನಾಥಸ್ವಾಮಿಗೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
- Akshatha Vorkady
- Updated on: Aug 29, 2026
- 12:08 pm
ಟೌನ್‌ಶಿಪ್, ನೈಸ್ ರಸ್ತೆ ವಿವಾದ: ಬಹಿರಂಗ ಚರ್ಚೆಗೆ ನಾನು ಸಿದ್ಧ; ಸರ್ಕಾರಕ್ಕೆ ಸವಾಲೆಸೆದ ಹೆಚ್ಡಿ ಕುಮಾರಸ್ವಾಮಿ
HD Kumaraswamy Challenges Congress: ಬೆಂಗಳೂರಿನ ನೈಸ್ ರಸ್ತೆ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಪ್ರತಿಪಕ್ಷಗಳು ಸಿಡಿದೆದ್ದಿವೆ. ಬಿಡದಿ ಟೌನ್‌ಶಿಪ್ ಮತ್ತು ನೈಸ್ ಯೋಜನೆಗಳ ಕುರಿತು ಕಾಂಗ್ರೆಸ್ ಆರೋಪಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಬಹಿರಂಗ ಚರ್ಚೆಗೆ ಬರುವಂತೆ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
- Sunil MH
- Updated on: Aug 18, 2026
- 4:13 pm
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣದ ಸನ್ನಿವೇಶ ಹೇಳಿ ಗದ್ಗದಿತರಾದ ದೇವೇಗೌಡ್ರು
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಪತ್ನಿ ಸಾವಿನ ನೋವಿನಿಂದ ಆಚೆ ಬಂದಂತಿಲ್ಲ. ಇಂದು (ಆಗಸ್ಟ್ 10) ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿರುವ ಪತ್ನಿ ಸಮಾಧಿಗೆ ಪೂಜೆ ನೆರವೇರಿಸಿದರು. ಹೂ, ಅರಿಸಿಣ ಕುಂಕುಮ ಸಮರ್ಪಣೆ ಮಾಡಿ ಭಾವುಕರಾದರು. ಪೂಜೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು, ನನ್ನ ಜೀವನದ ಬೆನ್ನೆಲುಬು ಈಕೆ. ಈಗ ಭೂದೇವಿಯ ಗರ್ಭದಲ್ಲಿ ಚಿರನಿದ್ರೆಯಲ್ಲಿ ಇದ್ದಾಳೆ.
- Manjunath KB
- Updated on: Aug 10, 2026
- 8:33 pm
ಬಿಡದಿ ಟೌನ್‌ಶಿಪ್ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂ ಡಿಕೆ ಶಿವಕುಮಾರ್‌ಗೆ ದೇವೇಗೌಡ ಪ್ರಶ್ನೆ
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರ ಆತುರವನ್ನು ಪ್ರಶ್ನಿಸಿದ್ದಾರೆ. ಜೆಡಿಎಸ್ ಹಮ್ಮಿಕೊಂಡಿರುವ ರೈತರ ಪರ ಪಾದಯಾತ್ರೆಯಲ್ಲಿ ಮಾತನಾಡಿದ ದೇವೇಗೌಡರು, ಬೆಂಗಳೂರಿನಲ್ಲಿ 20,000ಕ್ಕೂ ಹೆಚ್ಚು ಬಿಡಿಎ ನಿವೇಶನಗಳು ಖಾಲಿಯಿದ್ದರೂ, 60 ದಿನಗಳಲ್ಲಿ ಟೌನ್‌ಶಿಪ್ ಮಾಡುವ ಅವಶ್ಯಕತೆ ಏನು ಎಂದು ಪ್ರಶ್ನಿಸಿದ್ದಾರೆ.
- Sunil MH
- Updated on: Aug 10, 2026
- 3:54 pm
ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರಾಜ್ಯ ಸರ್ಕಾರದ ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಪಾದಯಾತ್ರೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭಾಗವಹಿಸಿದರು. 'ದೇಹಕ್ಕಷ್ಟೇ ವಯಸ್ಸಾಗಿದೆ, ಬುದ್ಧಿಗಲ್ಲ' ಎಂದ ಅವರು, ರೈತರ ಪರ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವೆ. ಪ್ರಾಯಶ್ಚಿತ್ತ ಯಾರಿಗೆ ಆಗಲಿದೆ ಎಂಬುದಾಗಿ ಕಾದು ನೋಡಿ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.
- Prashantha B
- Updated on: Aug 10, 2026
- 1:55 pm
Bidadi Township: ಬಿಡದಿ ಟೌನ್‌ಶಿಪ್ ವಿರುದ್ಧ ಜೆಡಿಎಸ್ ಪಾದಯಾತ್ರೆ: ಎರಡನೇ ದಿನಕ್ಕೆ ದೇವೇಗೌಡರ ಸಾಥ್
ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜನತಾ ದಳ (ಸೆಕ್ಯುಲರ್) ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ಮಹತ್ವದ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬೆಂಬಲವೂ ದೊರೆತಿದೆ. ನಿಖಿಲ್ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ಇಂದು 16 ಕಿಲೋಮೀಟರ್ ದೂರ ಹೆಜ್ಜೆ ಹಾಕಲಿದ್ದಾರೆ.
- Bhavana Hegde
- Updated on: Aug 10, 2026
- 9:04 am
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್ಎಂಟಿ ವಾಚ್ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.
- Manjunath KB
- Updated on: Jul 30, 2026
- 7:26 pm