AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways

Indian Railways

ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

ತುಮಕೂರು – ಚಿತ್ರದುರ್ಗ – ದಾವಣಗೆರೆ ನೇರ ರೈಲು ಮಾರ್ಗದ ಬಗ್ಗೆ ಸಚಿವ ಸೋಮಣ್ಣ ಬಿಗ್ ಅಪ್​ಡೇಟ್

ತುಮಕೂರು-ಚಿತ್ರದುರ್ಗ-ದಾವಣಗೆರೆ ನಡುವಿನ 191 ಕಿ.ಮೀ ನೂತನ ನೇರ ರೈಲು ಮಾರ್ಗದ ಬಗ್ಗೆ ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಅಪ್​ಡೇಟ್ ಕೊಟ್ಟಿದ್ದಾರೆ. ಯೋಜನೆ ಸಂಬಂಧ ಹಿರಿಯ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಶೇ 92 ರಷ್ಟು ಭೂಸ್ವಾಧೀನ ಮುಗಿದಿದೆ ಎಂದು ಸಚಿವರು ಹೇಳಿದ್ದು, ರೈಲು ಸಂಚಾರ ಯಾವಾಗ ಶುರುವಾಗಲಿದೆ ಎಂಬುದನ್ನೂ ತಿಳಿಸಿದ್ದಾರೆ.

ರೈಲುಗಳಲ್ಲಿ ಇನ್ಮುಂದೆ ಮತ್ತೆ ಅಡುಗೆ ಶುರು; ಆದರೆ, ಎಲ್​ಪಿಜಿ ಬದಲು ಇಂಡಕ್ಷನ್ ಸ್ಟೌವ್ ಬಳಲು ನಿರ್ಧಾರ

Indian Railways Shifts to Induction Stoves for Train Food: ಭಾರತೀಯ ರೈಲ್ವೆ ಮತ್ತು ಐಆರ್‌ಸಿಟಿಸಿ ರೈಲುಗಳಲ್ಲಿ ಅಡುಗೆ ವಿಧಾನವನ್ನು ಬದಲಾಯಿಸುತ್ತಿವೆ. ಅಗ್ನಿ ಅವಘಡ ತಪ್ಪಿಸಲು ಮತ್ತು ಸುರಕ್ಷತೆ ಹೆಚ್ಚಿಸಲು ಎಲ್‌ಪಿಜಿ ಬದಲು ಇಂಡಕ್ಷನ್ ಸ್ಟೌವ್‌ಗಳನ್ನು ಬಳಸಲು ನಿರ್ಧರಿಸಿದೆ. ಇದು ರೈಲು ಪ್ಯಾಂಟ್ರಿಗಳಲ್ಲಿ ವರ್ಷಗಳ ನಂತರ ಅಡುಗೆ ಭಾಗ್ಯವನ್ನು ಮರಳಿಸಲಿದೆ. ಈ ಬದಲಾವಣೆಯು ಅಡುಗೆಯನ್ನು ಹೆಚ್ಚು ಸುಸ್ಥಿರ, ಸುರಕ್ಷಿತ ಮತ್ತು ಆಧುನಿಕವನ್ನಾಗಿಸಲಿದೆ, ಪ್ರಯಾಣಿಕರಿಗೆ ಉತ್ತಮ ಆಹಾರ ಒದಗಿಸಲು ನೆರವಾಗಲಿದೆ.

ಪ್ರಯಾಣಿಕರೇ ಗಮನಿಸಿ: ಬೆಂಗಳೂರಿನ ಈ ಮಾರ್ಗದಲ್ಲಿ 2 ರೈಲುಗಳು ರದ್ದು, 6 ರೈಲುಗಳ ಸಂಚಾರ ಭಾಗಶಃ ರದ್ದು

ಬೆಂಗಳೂರಿನ ಕೆಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವೆ ನಡೆಯಲಿರುವ ರೈಲ್ವೆ ಇಂಜಿನಿಯರಿಂಗ್ ಕಾಮಗಾರಿಗಳ ಕಾರಣದಿಂದಾಗಿ ಜೂನ್ 7 ಮತ್ತು 8 ರಂದು ಅಶೋಕಪುರಂ ಎಕ್ಸ್‌ಪ್ರೆಸ್ ಸೇರಿದಂತೆ 2 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 6 ಮೆಮು ರೈಲುಗಳ ಸಂಚಾರ ಭಾಗಶಃ ರದ್ದಾಗಿವೆ. ರದ್ದಾದ ರೈಲುಗಳ ವಿವರ ಇಲ್ಲಿದೆ.

ಜೂನ್ 1ರಿಂದ ರೈಲ್ವೆ ವೈಟಿಂಗ್ ಲಿಸ್ಟ್ ನಿಯಮಗಳಲ್ಲಿ ಬದಲಾವಣೆ; ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಳ; ನಿಯಮ ಉಲ್ಲಂಘನೆಗೆ ಭಾರಿ ದಂಡ

Indian Railways ticket rules changes 2026: ಭಾರತೀಯ ರೈಲ್ವೆ ಜೂನ್ 1, 2026 ರಿಂದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಇನ್ನು ವೈಟಿಂಗ್ ಲಿಸ್ಟ್ ಟಿಕೆಟ್‌ಗಳಿಗೆ ಮಿತಿ ಇರಲಿದ್ದು, ಕನ್ಫರ್ಮ್ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ. ವೈಟಿಂಗ್ ಟಿಕೆಟ್ ಹೊಂದಿರುವವರು ಸ್ಲೀಪರ್ ಅಥವಾ ಎಸಿ ಕೋಚ್‌ಗಳಲ್ಲಿ ಪ್ರಯಾಣಿಸುವಂತಿಲ್ಲ, ಉಲ್ಲಂಘಿಸಿದರೆ ಭಾರೀ ದಂಡ ವಿಧಿಸಲಾಗುತ್ತದೆ. ಟಿಟಿಇಗೆ ದಂಡ ಮತ್ತು ಕೆಳಗಿಳಿಸುವ ಅಧಿಕಾರ ನೀಡಲಾಗಿದೆ. ಈ ಬದಲಾವಣೆಗಳು ಪ್ರಯಾಣಿಕರ ಸುರಕ್ಷಿತ ಹಾಗೂ ಸುಖಕರ ಪ್ರಯಾಣಕ್ಕೆ ಸಹಕಾರಿ.

ಜೂನ್ 1 ರಿಂದ ಘಾಟ್ ಸೆಕ್ಷ​ನಲ್ಲಿ ವಂದೇ ಭಾರತ್ ಟ್ರಯಲ್ ರನ್: ಬೆಂಗಳೂರು – ಸುಬ್ರಹ್ಮಣ್ಯ ಪ್ರಯಾಣಕ್ಕಿನ್ನು ನಾಲ್ಕೈದು ಗಂಟೆ ಸಾಕು!

Bengaluru Mangaluru Vande Bharat Express: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಬಹುದಿನಗಳ ಕನಸಾದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಜೂನ್‌ನಲ್ಲಿ ಆರಂಭವಾಗುವ ನಿರೀಕ್ಷೆ ಇದೆ. ಇದಕ್ಕಾಗಿ ಜೂನ್ 1 ರಿಂದ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವಿನ ಅತ್ಯಂತ ಕಠಿಣ ಘಾಟ್ ಮಾರ್ಗದಲ್ಲಿ ಅಂತಿಮ ಹಂತದ ಆರ್‌ಡಿಎಸ್‌ಒ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ.

ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೇಸಿಗೆ ವಿಶೇಷ ರೈಲುಗಳ ಸಂಚಾರ ಒಂದು ತಿಂಗಳು ವಿಸ್ತರಣೆ! ಇಲ್ಲಿದೆ ಪೂರ್ಣ ವಿವರ

ರೈಲು ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಹಾಗೂ ಸುಗಮ ಸಂಚಾರದ ಉದ್ದೇಶದಿಂದ ನೈಋತ್ಯ ರೈಲ್ವೆಯು ಹುಬ್ಬಳ್ಳಿ ಹಾಗೂ ಬೆಂಗಳೂರಿನಿಂದ ರಾಮೇಶ್ವರಂ, ಕೊಲ್ಲಂ ಮತ್ತು ತಿರುವನಂತಪುರಂಗೆ ಸಂಚರಿಸುವ ಬೇಸಿಗೆ ವಿಶೇಷ ರೈಲುಗಳ ಅವಧಿಯನ್ನು ಜೂನ್ ಕೊನೆಯವರೆಗೆ ವಿಸ್ತರಿಸಿದೆ. ವಿಶೇಷ ರೈಲುಗಳ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ; ಏನಿದರ ವಿಶೇಷತೆ?

ಬೆಂಗಳೂರು ಮತ್ತು ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಜುಲೈ ಅಥವಾ ಆಗಸ್ಟ್‌ನಿಂದ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಒಂದು ರೈಲಿನ ಬದಲಿಗೆ, ನಾವು ಎರಡು ರೈಲುಗಳನ್ನು ಓಡಿಸಲು ನಿರ್ಧರಿಸಿದ್ದೇವೆ. ವಂದೇ ಭಾರತ್ ಸ್ಲೀಪರ್ ರೈಲು ಸಂಜೆ ಬೆಂಗಳೂರಿನಿಂದ ಪ್ರಾರಂಭವಾಗಿ ಮರುದಿನ ಮುಂಜಾನೆ ಮುಂಬೈ ತಲುಪುತ್ತದೆ. ಅದೇ ರೀತಿ, ಇದು ಸಂಜೆ ಮುಂಬೈನಿಂದ ಪ್ರಾರಂಭವಾಗಿ ಮರುದಿನ ಮುಂಜಾನೆ ಬೆಂಗಳೂರು ತಲುಪುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬಿಹಾರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸೇರಿದಂತೆ 3 ರೈಲುಗಳ ಮೇಲೆ ಕಲ್ಲು ತೂರಾಟ; ಕಿಟಕಿ ಗಾಜುಗಳಿಗೆ ಹಾನಿ

ಬಿಹಾರದ ಮುಜಾಫರ್‌ಪುರದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಇದರಿಂದ ಹಲವಾರು ಬೋಗಿಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಈ ಘಟನೆ ಪ್ರಯಾಣಿಕರಲ್ಲಿ ಭಯಭೀತಿ ಮೂಡಿಸಿದೆ. ಈ ಘಟನೆಯಲ್ಲಿ ವಂದೇ ಭಾರತ್‌ನ 3 ಬೋಗಿಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ. ಇದರ ಜೊತೆಗೆ ಇನ್ನೆರಡು ರೈಲುಗಳ ಮೇಲೂ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಎರಡೂ ರೈಲುಗಳ ಹಲವಾರು ಬೋಗಿಗಳ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ.

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಇಂದು ಸಂಜೆ ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ನ ಎರಡು ಎಸಿ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಆದರೆ ಆ ಹೊತ್ತಿಗೆ ಆ 2 ಬೋಗಿಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಆ ಬೋಗಿಗಳು ಖಾಲಿಯಾಗಿದ್ದರಿಂದ ಈ ಘಟನೆಯಲ್ಲಿ ಯಾವುದೇ ಸಾವುನೋವುಗಳು ಉಂಟಾಗಿಲ್ಲ. ಈ ಘಟನೆಯ ಸಮಯದಲ್ಲಿ ಬೋಗಿಗಳ ಒಳಗೆ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ, ಯಾವುದೇ ಗಾಯಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಕರ್ನಾಟಕ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಳಗಾವಿ, ಸಿಕಂದರಾಬಾದ್, ಚರ್ಲಪಲ್ಲಿ ವೀಕ್ಲಿ ವಿಶೇಷ ರೈಲುಗಳು ಇನ್ನು ಕಾಯಂ!

ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ನಡುವಿನ ರೈಲ್ವೆ ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಸಿಹಿ ಸುದ್ದಿ ನೀಡಿದೆ. ಬೆಳಗಾವಿಯಿಂದ ಸಿಕಂದರಾಬಾದ್ ಹಾಗೂ ಚರ್ಲಪಲ್ಲಿಗೆ ಸಂಚರಿಸುವ ವಿಶೇಷ ವೀಕ್ಲಿ ರೈಲುಗಳನ್ನು ರೈಲ್ವೆ ಮಂಡಳಿಯು ಈಗ ಕಾಯಂಗೊಳಿಸಿದೆ. ಈ ಮೂಲಕ ಮೂರು ರಾಜ್ಯಗಳ ನಡುವಿನ ಸಂಪರ್ಕ ವ್ಯವಸ್ಥೆ ಮತ್ತಷ್ಟು ಬಲಗೊಂಡಿದೆ.

ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ

ಕೇಂದ್ರ ಸಚಿವ ಸಂಪುಟವು ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ಮೂರು ಮಲ್ಟಿ-ಟ್ರ್ಯಾಕಿಂಗ್ ರೈಲ್ವೆ ಯೋಜನೆಗಳಿಗೆ ಅನುಮೋದನೆ ನೀಡಿದೆ. ಪ್ರಮುಖವಾಗಿ ಗುಂತಕಲ್-ವಾಡಿ ಮಾರ್ಗವು ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ಯೋಜನೆಯು 4,161 ಗ್ರಾಮಗಳಿಗೆ ರೈಲ್ವೆ ಸಂಪರ್ಕ ಒದಗಿಸುವ ಮೂಲಕ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ.

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ: ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವ ಎಚ್ಚರಿಕೆ ನೀಡಿದ ಕರವೇ

ನೈರುತ್ಯ ರೈಲ್ವೆ ಮುಂಬಡ್ತಿ ಪರೀಕ್ಷೆಯಲ್ಲಿ ಈ ಬಾರಿಯೂ ಕನ್ನಡವನ್ನು ಕಡೆಗಣಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಹಿಂದಿ ಮತ್ತು ಇಂಗ್ಲಿಷ್‌ಗೆ ಮಾತ್ರ ಆದ್ಯತೆ ನೀಡಿರುವುದನ್ನು ಖಂಡಿಸಿರುವ ಕರವೇ, ಕನ್ನಡಕ್ಕೆ ಅವಕಾಶ ನೀಡದಿದ್ದರೆ ರಾಜ್ಯಾದ್ಯಂತ ರೈಲು ಸಂಚಾರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ