IPL
2008 ರಲ್ಲಿ ಆರಂಭವಾದ ವಿಶ್ವ ಕ್ರಿಕೆಟ್ನ ಅತ್ಯಂತ ಶ್ರೀಮಂತ ಟಿ20 ಲೀಗ್ ಐಪಿಎಲ್ ಇದುವರೆಗೆ 15 ಆವೃತ್ತಿಗಳನ್ನು ಪೂರೈಸಿದೆ. ಇದೀಗ ಲೀಗ್ನ 16ನೇ ಆವೃತ್ತಿ ಇದೇ ಮಾರ್ಚ್ ತಿಂಗಳಲ್ಲಿ ಆರಂಭವಾಗಲಿದೆ. ಈ ಲೀಗ್ನಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿವೆ. ಈ ಲೀಗ್ನ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ವರ್ಷದಿಂದ ವರ್ಷಕ್ಕೆ ತನ್ನ ಬ್ರಾಂಡ್ ಮೌಲ್ಯದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಾಣುತ್ತಿರುವ ಈ ಲೀಗ್ನ ಒಟ್ಟು ಬ್ರ್ಯಾಂಡ್ ಮೌಲ್ಯವು 28% ರಷ್ಟು 10.7 ಬಿಲಿಯನ್ ಡಾಲರ್ (ಸುಮಾರು ₹89,232 ಕೋಟಿ) ಹೆಚ್ಚಾಗಿದೆ. ತಂಡಗಳ ಪೈಕಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಬ್ರಾಂಡ್ ಮೌಲ್ಯ 87 ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಂದರೆ ಸುಮಾರು 725 ಕೋಟಿ ಆಗಿದೆ. ಹಾಗೆಯೇ ಒಮ್ಮೆಯೂ ಐಪಿಎಲ್ ಟ್ರೋಫಿ ಗೆಲ್ಲದ ಆರ್‌ಸಿಬಿ ತಂಡ 582 ಕೋಟಿ ರೂ. (69.8 ದಶಲಕ್ಷ ಡಾಲರ್) ಬ್ರಾಂಡ್ ಮೌಲ್ಯದೊಂದಿಗೆ 4ನೇ ಸ್ಥಾನದಲ್ಲಿದೆ.