JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಪ್ರಧಾನಿ ಮೋದಿ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್: ಹೆಚ್​ಡಿ ಕುಮಾರಸ್ವಾಮಿ ಅಚ್ಚರಿಯ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಲ್ಲದೆ, ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅದೇನೆಂಬುದು ಇಲ್ಲಿದೆ.

ಕೋರ್ಟ್ ಇನ್ನೇನು ಹೇಳಬೇಕು? ಮೊದಲು ರಾಜೀನಾಮೆ ನೀಡಿ: ಸಿಎಂಗೆ ಜೋಶಿ ಆಗ್ರಹ

ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ​ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್​ ವಜಾಗೊಳಿಸಿದೆ. ಇದರ ಬೆನ್ನಲ್ಲೇ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ‘ಕಾಂಗ್ರೆಸ್ ಡಿಎನ್‌ಎ ನಲ್ಲಿಯೇ ಭ್ರಷ್ಟಾಚಾರ ಇದೆ ಎಂದು ಹೇಳಿದ್ದೆ. ಅದೇ ರೀತಿ ಹೈಕೋರ್ಟ್ ಇಂದು ತೀರ್ಪು ನೀಡಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಸರಿ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ರಾಜೀನಾಮೆ ಕಾಂಗ್ರೆಸ್ ಮತ್ತು ಬಿಜೆಪಿ ಆಗ್ರಹಿಸಿವೆ. ಆದರೆ, ಅಚ್ಚರಿ ಎಂಬಂತೆ ಮುಖ್ಯಮಂತ್ರಿಗಳ ರಾಜೀನಾಮೆ ನಾನು ಆಗ್ರಹಿಸುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಕೋರ್ಟ್​​ ತೀರ್ಪಿನ ಬೆನ್ನಲ್ಲೇ ಡಿಸಿಎಂ, ಸಚಿವರ ಜತೆ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ

ಪ್ರಾಸಿಕ್ಯೂಷನ್​ಗೆ ಅನುಮತಿ​ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸಿದ್ದಾರಾಮಯ್ಯಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ 3 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರು ಸುದ್ದಿಗೋಷ್ಠಿ ನಡೆಸಿದ್ದು, ನೇರ ಪ್ರಸಾರ ಇಲ್ಲಿದೆ.

ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ

ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಅವರ ವಿರುದ್ಧ ವಾಗ್ದಾಳಿ ಆರಂಭಿಸಿವೆ. ಒಂದೆಡೆ ಬಿಜೆಪಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ, ಇತ್ತ ಜೆಡಿಎಸ್ ಟ್ವೀಟ್ ಮೂಲಕ ಕುಹಕವಾಡಿದೆ.

  • Sunil MH
  • Updated on: Sep 24, 2024
  • 2:12 pm

HD Kumaraswamy Press Meet Live: ಮೈಸೂರಿನಲ್ಲಿ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ

ಹೆಚ್​ಡಿ ಕುಮಾರಸ್ವಾಮಿ ಅವರು ಮೈಸರಿನಲ್ಲಿ ನಡೆದ ಸಿಲ್ಕ್ ಬೋರ್ಡ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮದ ಬಳಿಕ ಹೆಚ್​.ಡಿ.ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ.

ಪಾಪ ಪ್ರಜ್ವಲ್‌ಗೆ ಏನು ಗೊತ್ತಾಗಲ್ಲ, ಅವನು ಒಳ್ಳೆ ಹುಡುಗ ಎಂದ ರೇವಣ್ಣ: ಜೈಲಿನಲ್ಲಿರುವ ಮಗನ ಕುರಿತು ತಂದೆಯ ಮರುಕ

ಹಾಸನ ಜಿಲ್ಲೆಯ ಆಲೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ನೆನೆದು ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ ಮರುಕ ವ್ಯಕ್ತಪಡಿಸಿದ್ದಾರೆ. ಹಾಗೇ ಪ್ರತಿಕಾರದ ಮಾತುಗಳನ್ನೂ ಆಡಿದ್ದಾರೆ.

ಬಿಎಸ್‌ವೈ, ಎಚ್‌ಡಿಕೆ ವಿರುದ್ಧ ಅಕ್ರಮ ಡಿನೋಟಿಫಿಕೇಷನ್: ದಾಖಲೆ ಬಿಡುಗಡೆಗೊಳಿಸಿದ ಸಚಿವರು

ಹಗರಣ ಸಂಬಂಧ ವಿಪಕ್ಷಗಳು ಆಡಳಿತರೂಢ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಈ ಬಗ್ಗೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯ ಇದೀಗ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಎಚ್​ಡಿ ಕುಮಾರಸ್ವಾಮಿ ವಿರುದ್ಧದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ದಾಖಲೆ ಬಿಡುಗಡೆ ಮಾಡಿದ್ದಾರೆ.

ಯೋಗೇಶ್ವರ್​ಗೆ ಕೇಂದ್ರ ಮಟ್ಟದಲ್ಲಿ ಸ್ಥಾನಮಾನ? ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್​ಡಿಕೆ ಮತ್ತೊಂದು ತಂತ್ರ!

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಎನ್​ಡಿಎಯಿಂದ ಜೆಡಿಎಸ್​​ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂಬುದು ದಳ ನಾಯಕರ ಆಸೆ. ಆದರೆ, ಅತ್ತ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಟಿಕೆಟ್​ಗಾಗಿ ಪಟ್ಟು ಹಿಡಿದಿದ್ದಾರೆ. ಇದೀಗ ಅವರ ಮನವೊಲಿಕೆಗೆ ಕುಮಾರಸ್ವಾಮಿ ಹೊಸದೊಂದು ದಾಳ ಹೂಡಿದ್ದಾರೆ ಎನ್ನಲಾಗಿದೆ.

  • Sunil MH
  • Updated on: Sep 19, 2024
  • 10:09 am

Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಮಂಡ್ಯ, ಸೆಪ್ಟೆಂಬರ್ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಪ್ರದೇಶಕ್ಕೆ ಕೇಂದ್ರ ಸಚಿವ, ಮಂಡ್ಯ ಸಂಸದರೂ ಆಗಿರುವ ಹೆಚ್​ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು, ಘಟನೆಯಿಂದ ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ವೈಯಕ್ತಿಕ ನೆಲೆಯಿಂದ ಪರಿಹಾರ ವಿತರಣೆ ಮಾಡಿದರು.