JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
ಕರ್ನಾಟಕ ಎಂಎಲ್ಸಿ ಚುನಾವಣೆ: ಪರಿಷತ್ ಕದನದಲ್ಲಿ ಜೆಡಿಎಸ್‌ಗೆ ಡಬಲ್ ಟೆನ್ಷನ್
ಕರ್ನಾಟಕ ವಿಧಾನ ಪರಿಷತ್ ಚುನಾವಣಾ ರಣಕಣ ರಂಗೇರಿದೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಹೆಚ್.ಡಿ. ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಸವಾಲಾಗಿ ಪರಿಣಮಿಸಿದೆ. ಎನ್ಡಿಎ ಅಭ್ಯರ್ಥಿಗೆ ನಾಲ್ಕರಿಂದ ಐದು ಮತಗಳ ಕೊರತೆಯಿದ್ದು, ಕಾಂಗ್ರೆಸ್‌ನಿಂದ ಮತ ಸೆಳೆಯುವ ಅನಿವಾರ್ಯತೆ ಇದೆ. ಅಲ್ಲದೆ, ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡ ಮತ್ತು ಹನೂರು ಮಂಜುನಾಥ್ ಅವರಿಂದ ಅಡ್ಡ ಮತದಾನದ ಭೀತಿ ಎದುರಾಗಿದೆ.
- Sunil MH
- Updated on: Jun 11, 2026
- 11:16 am
ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್ ಪೋಸ್ಟ್ ಮೂಲಕ ಕಾಂಗ್ರೆಸ್ಗೆ ಕುಟುಕಿದ ಜೆಡಿಎಸ್
ಇಲ್ಲಸಲ್ಲದ ನೆಪ ಹೇಳಿ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಸರ್ಕಾರ ತಾಯಂದಿರ ಹೆಸರನ್ನು ಕೈಬಿಡುತ್ತಿರುವುದಾಗಿ ಎಕ್ಸ್ ಪೋಸ್ಟ್ ಮೂಲಕ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನು 'ವೋಟ್ ಬ್ಯಾಂಕ್ ವಂಚನೆ' ಎಂದು ಕರೆದಿರುವ ಜೆಡಿಎಸ್, 5,000 ಕೋಟಿ ರೂ. ಗೃಹಲಕ್ಷ್ಮಿ ಹಣವನ್ನು ತಿಂದು ತೇಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮತಕ್ಕಾಗಿ ಮಹಿಳೆಯರನ್ನು ಯಾಮಾರಿಸಿದೆ ಎಂದು ಕಿಡಿ ಕಾರಿದೆ.
- Prasanna Hegde
- Updated on: Jun 11, 2026
- 10:47 am
ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್ಡಿಡಿ
ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಳಿಕ ಮೌನ ಮುರಿದ ಹೆಚ್.ಡಿ. ದೇವೇಗೌಡರು, ಪಿಎಂ ಮೋದಿ ಮತ್ತು ತಮ್ಮ ನಡುವಿನ ಸಂಬಂಧ ಒಂದು ಸೀಟಿಗೆ ಸೀಮಿತವಲ್ಲ ಎಂದಿದ್ದಾರೆ. ಯಾರ ಹಂಗಿಲ್ಲದೆ ದೇಶದ ವಿಚಾರವಾಗಿ ಮಾತನಾಡುತ್ತೇನೆ. ಜೆಡಿಎಸ್ ಪಕ್ಷದ ಬೆಳವಣಿಗೆಗೂ ಶಕ್ತಿ ಮೀರಿ ಕೆಲಸ ಮಾಡ್ತೇನೆ. ರಾಜ್ಯ ಸಭಾ ಸದಸ್ಯ ಸ್ಥಾನ ಇಲ್ಲ ಅಂದರೂ ಮೋದಿಯವರ ಜೊತೆ ನನ್ನ ಪತ್ರ ವ್ಯವಹಾರ ಇರುತ್ತದೆ ಎಂದವರು ತಿಳಿಸಿದ್ದಾರೆ.
- Sunil MH
- Updated on: Jun 10, 2026
- 1:54 pm
ಉತ್ತರ ಕನ್ನಡದ 439 ಪ್ರದೇಶಗಳಲ್ಲಿ ಗುಡ್ಡ ಕುಸಿತದ ಭೀತಿ: 100 ಕೋಟಿ ರೂ. ಬಿಡುಗಡೆಯಾದ್ರೂ ಕಾಮಗಾರಿ ನಡೆಸಲಾಗದೆ ಸಂಕಷ್ಟ!
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆಗೆ ರಾಜ್ಯ ಸರ್ಕಾರ ಕೊನೇ ಕ್ಷಣದಲ್ಲಿ 100 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗದೆ ಜಿಲ್ಲಾಡಳಿತ ಕೇವಲ 40 ಕೋಟಿ ರೂ.ಗಳ ತುರ್ತು ಕೆಲಸಗಳಿಗಷ್ಟೇ ಈಗ ಹಮ್ಮಿಕೊಂಡಿದೆ. ಸರ್ಕಾರದ ವಿಳಂಬ ಧೋರಣೆಯಿಂದ ಕಾಮಗಾರಿ ಸಾಧ್ಯವಾಗದೇ ಜನ ಆತಂಕದಲ್ಲೇ ದಿನದೂಡುವಂತಾಗಿದೆ.
- Suraj Mahaveer Utture
- Updated on: Jun 10, 2026
- 7:26 am
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ್ದೇಕೆ?: ಅಸಲಿ ಸತ್ಯ ಬಹಿರಂಗಪಡಿಸಿದ ಕುಮಾರಸ್ವಾಮಿ
ಮಾಜಿ ಪ್ರಧಾನಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ಕೈತಪ್ಪಿದ ಕುರಿತು ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ದೇವೇಗೌಡರು ಟಿಕೆಟ್‌ಗೆ ಅರ್ಜಿಯನ್ನೇ ಹಾಕಿರಲಿಲ್ಲ ಎಂದಿರುವ ಅವರು, ಈ ವಿಚಾರವನ್ನು ಇಟ್ಟುಕೊಂಡು ಬಿಜೆಪಿ-ಜೆಡಿಎಸ್ ಮೈತ್ರಿ ಒಡೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ದೇವೇಗೌಡರ ಬಗ್ಗೆ ಕಾಂಗ್ರೆಸ್ಸಿಗರಿಗೆ ಈಗ ಅನುಕಂಪ ಬಂದಿದೆ ಎಂದು ವ್ಯಂಗ್ಯವಾಡಿದ್ದಾರೆ.
- Dileep CP
- Updated on: Jun 9, 2026
- 12:16 pm
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?
ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಡಿಕೆ ಶಿವಕುಮಾರ್ ಅವರು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೌದು...ಡಿಕೆ ಶಿವಕುಮಾರ್ ಅವರು ಯಾವುದೇ ಪಕ್ಷ ಎನ್ನುವುದನ್ನು ನೋಡದೇ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿದ್ದಾರೆ. ಸಿಎಂ ಆಗಿ ಪ್ರಮಾಣವಚನಕ್ಕೂ ಮುನ್ನವೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಎಚ್ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಸಲಹೆಗಳನ್ನು ಪಡೆದುಕೊಂಡಿದ್ದರು. ಇದನ್ನು ಡಿಕೆ ಶಿವಕುಮಾರ್ ಮುಂದುವರೆಸಿದ್ದು, ಇಂದು (ಜೂನ್ 08) ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಡಿವಿ ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಸದಾನಂದಗೌಡ ಅವರ ಕುಟುಂಬ ಡಿಕೆ ಶಿವಕುಮಾರ್ ಅವರನ್ನು ಆರತಿ ಬೆಳಗಿ ಮನೆಗೆ ಸ್ವಾಗತಿಸಿರುವುದು ವಿಶೇಷ
- Ramesh B Jawalagera
- Updated on: Jun 8, 2026
- 10:31 pm
ವಿಧಾನ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ಗೆ ಬಿಜೆಪಿ-ಜೆಡಿಎಸ್ ಶಾಕ್
ಕರ್ನಾಟಕ ವಿಧಾನಪರಿಷತ್‌ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟವು ಮೂರನೇ ಅಭ್ಯರ್ಥಿ ಗೋವಿಂದರಾಜು ಅವರನ್ನು ಕಣಕ್ಕಿಳಿಸಿ ಮಾಸ್ಟರ್‌ಸ್ಟ್ರೋಕ್ ನೀಡಿದೆ. ಇದು ಕಾಂಗ್ರೆಸ್‌ನ 5ನೇ ಅಭ್ಯರ್ಥಿಯ ಅವಿರೋಧ ಆಯ್ಕೆಯ ನಿರೀಕ್ಷೆಗೆ ದೊಡ್ಡ ತಿರುಗೇಟು ನೀಡಿದ್ದು, ಚುನಾವಣೆ ಕಣವನ್ನು ರಂಗೇರಿಸಿದೆ. ಪರಿಷತ್ ಚುನಾವಣೆ ಲೆಕ್ಕಾಚಾರ ಹೇಗಿದೆ ಎಂಬ ವಿವರ ಇಲ್ಲಿದೆ.
- Sunil MH
- Updated on: Jun 8, 2026
- 12:40 pm
‘ಅಧಿಕಾರವೊಂದೇ ಜೆಡಿಎಸ್ ಮಂತ್ರ’: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ ಬೆನ್ನಲ್ಲೇ ಹೆಚ್ಡಿಕೆ ವಿರುದ್ಧ ಸುರ್ಜೇವಾಲ ವ್ಯಂಗ್ಯ
ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ಎನ್ಡಿಎ ರಾಜ್ಯಸಭಾ ಟಿಕೆಟ್ ನಿರಾಕರಿಸಿದ್ದನ್ನು ಅಸ್ತ್ರವಾಗಿಸಿಕೊಂಡಿರುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೇಂದ್ರ ಸಚಿವ ಸ್ಥಾನದ ಆಸೆಗೆ ಹೆಚ್ಡಿ ಕುಮಾರಸ್ವಾಮಿ ತಂದೆಗೆ ಆದ ಅಪಮಾನವನ್ನು ಸಹಿಸಿಕೊಳ್ಳುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದ್ದಾರೆ. ಎನ್ಡಿಎ ಅಭ್ಯರ್ಥಿಯಾಗಿ ಪ್ರೊ. ಎಂ ನಾಗರಾಜ ಅವರನ್ನು ಬಿಜೆಪಿ ಭಾನುವಾರ ತಡರಾತ್ರಿ ಘೋಷಣೆ ಮಾಡಿದೆ.
- Ganapathi Sharma
- Updated on: Jun 9, 2026
- 9:03 am
ಹೆಚ್ಡಿ ದೇವೇಗೌಡಗೆ ತಪ್ಪಿದ ಎನ್ಡಿಎ ರಾಜ್ಯಸಭೆ ಟಿಕೆಟ್: ಪ್ರೊ ಎಂ ನಾಗರಾಜಗೆ ಬಿಜೆಪಿ ಮಣೆ
ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ಪ್ರೊ. ಎಂ. ನಾಗರಾಜ ಹಾಗೂ ವಿಧಾನ ಪರಿಷತ್‌ಗೆ ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯ ಅವರಿಗೆ ಟಿಕೆಟ್ ಘೋಷಿಸಿದೆ. ಆದರೆ, ಮರುಆಯ್ಕೆ ಬಯಸಿದ್ದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರಿಗೆ ವಯಸ್ಸಿನ ಕಾರಣದಿಂದ ಟಿಕೆಟ್ ಕೈತಪ್ಪಿದ್ದು ಜೆಡಿಎಸ್‌ಗೆ ಭಾರಿ ಆಘಾತ ನೀಡಿದೆ.
- Ganapathi Sharma
- Updated on: Jun 9, 2026
- 9:03 am
ಸ್ವಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ಕೊಟ್ಟ ಸಿಎಂ ಡಿಕೆ ಶಿವಕುಮಾರ್, ಜತೆಗೊಂದು ಕಿವಿಮಾತು
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭಾನುವಾರ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಕನಕನಪುರ ಕ್ಷೇತ್ರದ ಜನರಿಗೆ ಪಂಚ ವಚನಗಳನ್ನು ನೀಡಿದ್ದಾರೆ. ಅಲ್ಲದೇ ಯಾವುದೇ ಕಾರಣಕ್ಕೂ ವಿರೋಧ ಪಕ್ಷದವರ ಜೊತೆ ಜಗಳ ಮಾಡಬೇಡಿ ಎಂದು ಕಿವಿಮಾತು ಹೇಳಿದ್ದಾರೆ. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಕಾಂಗ್ರೆಸ್ ಆಹ್ವಾನ ಕೊಟ್ಟು ಗಮನಸೆಳೆದಿದ್ದಾರೆ.
- Ramesh B Jawalagera
- Updated on: Jun 7, 2026
- 9:47 pm
ರಾಜ್ಯಸಭೆ ಚುನಾವಣೆ ನಾಮಪತ್ರಕ್ಕೆ ನಾಳೆ ಕೊನೆ ದಿನ: ಅಭ್ಯರ್ಥಿಯನ್ನ ಅಂತಿಮಗೊಳಿಸದ ಬಿಜೆಪಿ, ಜೆಡಿಎಸ್; ಇಂದು ಘೋಷಣೆ ಸಾಧ್ಯತೆ
ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಹೆಚ್.ಡಿ. ದೇವೇಗೌಡ ಸ್ಪರ್ಧೆ ಮೇಲೆ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿ ನಿಲ್ಲಿಸಬೇಕೇ ಎಂಬುದು ನಿರ್ಧಾರವಾಗಲಿದೆ. ಸದ್ಯ ಸದಾನಂದ ಗೌಡ, ಸುಮಲತಾ, ಶ್ರುತಿ, ಮಂಜುಳಾ ಸೇರಿದಂತೆ ಹಲವು ನಾಯಕರ ಹೆಸರು ರೇಸ್‌ನಲ್ಲಿವೆ. ಇಂದು ಮಧ್ಯಾಹ್ನದ ಬಳಿಕ ಬಿಜೆಪಿಯಿಂದ ಅಭ್ಯರ್ಥಿ ಘೋಷಣೆ ಸಾಧ್ಯತೆ ಇದೆ.
- Kiran Haniyadka
- Updated on: Jun 7, 2026
- 11:21 am
ರಾಮಲಿಂಗಾರೆಡ್ಡಿ ರಾಜೀನಾಮೆ: ಬೆಂಗಳೂರು ನಗರಾಭಿವೃದ್ಧಿ ಖಾತೆಗೆ ಯಾಕಿಷ್ಟು ಡಿಮ್ಯಾಂಡ್?
ಕರ್ನಾಟಕದಲ್ಲಿ ಯಾವುದೇ ಸರ್ಕಾರದ ಬರಲಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಖಾತೆಗೆ ಭಾರೀ ಪೈಪೋಟಿ ಇರುತ್ತೆ. ಉತ್ತರ ಕರ್ನಾಟಕ, ಮದ್ಯ ಕರ್ನಾಟಕದ ನಾಯಕರು ಯಾರು ಈ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಕೇಳಲ್ಲ. ಕೇವಲ ಈ ಖಾತೆ ಬೆಂಗಳೂರು ನಗರ ಪ್ರಭಾವಿ ನಾಯಕರಿಗೆ ಅಚ್ಚುಮೆಚ್ಚು. ಇದಕ್ಕೆ ಪೂರಕವೆಂಬಂತೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರು ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಷ್ಟಕ್ಕೂ ಈ ಖಾತೆಗೆ ಯಾಕಿಷ್ಟು ಬೇಡಿಕೆ? ಅಂತಹದ್ದೇನಿದೆ? ಎನ್ನುವ ಡಿಟೇಲ್ಸ್ ಇಲ್ಲಿದೆ.
- Ramesh B Jawalagera
- Updated on: Jun 5, 2026
- 3:36 pm