kannada Rajyotsava
ಕನ್ನಡ, ಕರ್ನಾಟಕ, ಕರುನಾಡು ಬರೀ ನೆಲವಲ್ಲ, ಕೇವಲ ಭಾಷೆಯಲ್ಲ, ಅದೊಂದು ಹೆಮ್ಮೆ, ಅದೊಂದು ಬಾಂಧವ್ಯ. ಕನ್ನಡ ನಿತ್ಯೋತ್ಸವವಾಗಬೇಕು ಎನ್ನುವುದು ಕರ್ನಾಟಕ ಏಕೀಕರಣಕ್ಕೆ ಹೋರಾಡಿದ, ಕನ್ನಡದ ಉಳಿವಿಗಾಗಿ, ಬೆಳವಣಿಗೆಗಾಗಿ ಶ್ರಮಿಸಿದ ಹಲವು ಹಿರಿಜೀವಗಳ ಹೆಬ್ಬಯಕೆ. ಕನ್ನಡ ಬೆಳೆಸಬೇಕು ಎಂದು ದುಡಿದವರನ್ನು ನೆನೆಯುವ ದಿನವಿದು. ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ನಮ್ಮ ಮುಂದಿನ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಇದು ಕನ್ನಡಿಗರಿಗೆ ಹಬ್ಬ ಇದನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತದೆ. ಈ ದಿನಕ್ಕೆ ಸಂಬಂಧಪಟ್ಟಂತೆ ಕೆಲವು ವಿಶೇಷ ಮಾಹಿತಿಗಳು ಇಲ್ಲಿವೆ.