
Kannada Sahitya Sammelana
ಕನ್ನಡ ನಾಡಿನ ಭಾಷೆ, ಸಾಹಿತ್ಯದ ಉಳಿವಿನ ಉದ್ದೇಶದೊಂದಿಗೆ ಕರ್ನಾಟಕದಲ್ಲಿ ಪ್ರತಿ ವರ್ಷ ರಾಜ್ಯ ಮಟ್ಟದ, ಆಯಾ ಜಿಲ್ಲೆ, ತಾಲೂಕು ಮಟ್ಟದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಲಾಗುತ್ತಿದೆ. ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತ್ಯ ಪ್ರೇಮಿಗಳಿಗೆ ಹಬ್ಬವೇ ಸರಿ. ಕನ್ನಡ ಸಾಹಿತ್ಯ ಪರಿಷತ್ತು ಅಖಿಲ ಭಾರತದ ಮಟ್ಟದಲ್ಲಿಯೂ ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ವನ್ನು ಆಯೋಜನೆ ಮಾಡುತ್ತಿದೆ. ಈ ವರ್ಷ ರಾಜ್ಯ ಸರ್ಕಾರ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ನಿರ್ಧರಿಸಿದೆ. ಐಕ್ಯತೆ, ಸಾಂಸ್ಕೃತಿಕ, ಸಾಹಿತ್ಯದ ಹಬ್ಬವನ್ನು ಈ ಬಾರಿ ಸಕ್ಕರೆ ನಾಡಿನಲ್ಲಿ ಆಯೋಜಿಸಲಾಗುತ್ತಿದೆ. ಡಿಸೆಂಬರ್ 20, 21 ಮತ್ತು 22ರಂದು ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಮಂಡ್ಯದ ನುಡಿಜಾತ್ರೆಗೆ ಭರದಿಂದ ಸಿದ್ಧತೆ ಸಾಗಿದೆ
87 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ರೂ. ಕೋಟಿ ಹಣ ಉಳಿತಾಯ: ಚಲುವರಾಯಸ್ವಾಮಿ
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 2.53 ಕೋಟಿ ರೂಪಾಯಿಗಳ ಉಳಿತಾಯವಾಗಿದೆ. ಸರ್ಕಾರದಿಂದ ಬಿಡುಗಡೆಯಾದ 30 ಕೋಟಿ ರೂಪಾಯಿಗಳಲ್ಲಿ 29.65 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಉಳಿತಾಯವಾದ ಹಣವನ್ನು ಕನ್ನಡ ಭವನ ನಿರ್ಮಾಣಕ್ಕೆ ಬಳಸಲು ಯೋಜಿಸಲಾಗಿದೆ. ಸಮ್ಮೇಳನದ ಆಯೋಜನೆಯು ಪಾರದರ್ಶಕವಾಗಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
- Prashantha B
- Updated on: Apr 5, 2025
- 7:44 pm
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಮಂಡ್ಯದ 87ನೇ ಕನ್ನಡ ಸಮ್ಮೇಳನದ ಕೊನೆ ದಿನವಾದ ಇಂದು(ಡಿಸೆಂಬರ್ 22) ಚಲುವರಾಯಸ್ವಾಮಿ ಹಾಗೂ ಎಚ್ಡಿ ಕುಮಾರಸ್ವಾಮಿ ವೇದಿಕೆ ಹಂಚಿಕೊಂಡಿದ್ದು, ಈ ವೇಳೆ ಕುಮಾರಣ್ಣ, ಚಲುವರಾಯಸ್ವಾಮಿ ಕಾರ್ಯವನ್ನು ಶ್ಲಾಘಿಸಿದ್ದಾರೆ. ವೇದಿಕೆ ಮೇಲೆ ಒಂದೇ ಒಂದು ಮಾತುಕತೆ ನಡೆಸದ ರಾಜಕೀಯ ಬದ್ಧ ವೈರಿಯಾಗಿರುವ ಚಲುವರಾಯಸ್ವಾಮಿ ಕೆಲಸವನ್ನು ಹೊಗಳಿರುವುದು ಅಚ್ಚರಿ ಮೂಡಿಸಿದೆ.
- Ramesh B Jawalagera
- Updated on: Dec 22, 2024
- 8:38 pm
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ಕಸಾಪ ತೆಗೆದುಕೊಂಡ 6 ನಿರ್ಣಾಯಗಳು ಹೀಗಿವೆ
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಭಾಷಾ ಅಭಿವೃದ್ಧಿ ಅಧಿನಿಯಮದ ಸಮಗ್ರ ಜಾರಿ, ರಾಷ್ಟ್ರಕವಿ ಪ್ರಶಸ್ತಿ ಘೋಷಣೆ, ಸರ್ಕಾರಿ ಕನ್ನಡ ಶಾಲೆಗಳ ಸುಧಾರಣೆ ಮುಂತಾದ ಆರು ಪ್ರಮುಖ ನಿರ್ಣಯಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನಿರ್ಣಯಗಳನ್ನು ಕೈಗೊಂಡಿದ್ದು, ಅನುಷ್ಠಾನಕ್ಕೆ ಸಿಎಂ ಸಿದ್ದರಾಮಯ್ಯರನ್ನು ಕಸಾಪ ಮನವಿ ಮಾಡಿದೆ.
- Prashantha B
- Updated on: Dec 22, 2024
- 6:18 pm
ಬಾಡೇ ನಮ್ಮ ಮನೆ ಗಾಡು: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೊನೆ ಹಂತಕ್ಕೆ ಬಂದಿದೆ. ಇಂದು (ಡಿಸೆಂಬರ್ 22) ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯುತ್ತಿದ್ದು, ಅತ ಪ್ರಗತಿಪರರ ತಮ್ಮ ಹಠ ಸಾಧಿಸಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡುಟ ಹಂಚಿ ಸಂಭ್ರಮಿಸಿದ್ದಾರೆ. ಆದ್ರೆ, ಇದಕ್ಕೆ ಪೊಲೀಸರು ಮಧ್ಯ ಪ್ರವೇಸಿದ್ದು, ಈ ವೇಳೆ ಬಾಡೂಟ ಮಾಡಿಸುವಂತೆ ಜಟಾಪಟಿ ಜೋರಾಗಿದೆ.
- Ramesh B Jawalagera
- Updated on: Dec 22, 2024
- 5:29 pm
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ತಿಂದೇಬಿಟ್ರು, ಮುಂದೇನಾಯ್ತು..?
ಮಂಡ್ಯದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆಯಿಂದಾಗಿ ಜಟಾಪಟಿಗೆ ಕಾರಣವಾಗಿದೆ. ಪ್ರಗತಿಪರರು ಮಾಂಸಾಹಾರವನ್ನು ವಿತರಿಸಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಘಟನೆಯಿಂದ ಸಮ್ಮೇಳನದಲ್ಲಿ ಪೊಲೀಸರು ಮತ್ತು ಪ್ರಗತಿಪರರ ಮಧ್ಯೆ ವಾಗ್ದಾದ ಉಂಟಾಗಿದೆ. ಇನ್ನು ಪ್ರತ್ಯೇಕ ಸಸ್ಯಹಾರ ಊಟದ ವ್ಯವಸ್ಥೆ ಕೂಡ ಇತ್ತು.
- Dileep CP
- Updated on: Dec 22, 2024
- 3:42 pm
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಚಿವ ಚಲುವರಾಯಸ್ವಾಮಿ ಅವರು ಉತ್ಸಾಹದಿಂದ ನೃತ್ಯ ಮಾಡಿದ್ದು, ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಗಣಿಗ ರವಿ ಅವರೂ ಸೇರಿ ಕುಣಿದರು. ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮ್ಮೇಳನದ ಯಶಸ್ಸನ್ನು ಆಚರಿಸುವ ಸಂಭ್ರಮದಲ್ಲಿ ಸಚಿವರು ಕುಣಿದರು.
- Prashantha B
- Updated on: Dec 22, 2024
- 10:04 am
ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ
ಕನ್ನಡ ಸಾಹಿತ್ಯ ಪರಿಷತ್ತಿನ ಶನಿವಾರದ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬಳ್ಳಾರಿ, ಕೋಲಾರ, ಯಾದಗಿರಿ ಜಿಲ್ಲೆಗಳು ಅತಿಥ್ಯಕ್ಕೆ ಅರ್ಜಿ ಸಲ್ಲಿಸಿದ್ದವು. ಆದರೆ, 66 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಈ ಸಮ್ಮೇಳನದ ಅವಕಾಶ ದೊರೆತಿದೆ. 1926, 1938 ಮತ್ತು 1958ರಲ್ಲಿ ಬಳ್ಳಾರಿಯಲ್ಲಿ ಈ ಸಮ್ಮೇಳನ ನಡೆದಿತ್ತು.
- Web contact
- Updated on: Dec 22, 2024
- 8:37 am
ಸಾಹಿತ್ಯ ಸಮ್ಮೇಳನಕ್ಕೆ ಈಗ ಕೋಟಿ ಕೋಟಿ ಹಂಚಿಕೆ; 1945ರಲ್ಲಿ ಮದರಾಸಿನಲ್ಲಿ ನಡೆದ 29ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ಎಷ್ಟು ಗೊತ್ತಾ?
ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಹೌದು, ಡಿಸೆಂಬರ್ 20, 21 ಹಾಗೂ 22 ರ ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ವಿವಿಧ ಸಾಹಿತ್ಯ ಕಾರ್ಯಕ್ರಮಗಳು, ಪುಸ್ತಕ ಮಳಿಗೆಗಳು ಸೇರಿದಂತೆ ವಾಣಿಜ್ಯ ಮಳಿಗೆಗಳು ಕನ್ನಡ ಅಭಿಮಾನಿಗಳ ಗಮನ ಸೆಳೆಯಲಿದೆ. ಈ ನಡುವೆ 1945 ರಲ್ಲಿ ಮದರಾಸಿನಲ್ಲಿ ನಡೆದ 29 ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ವೆಚ್ಚಗಳ ಫೋಟೋವೊಂದು ವೈರಲ್ ಆಗಿದೆ. ಅಂದು ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚಾದ ಒಟ್ಟು ಮೊತ್ತವೆಷ್ಟು ಗೊತ್ತಾ? ಈ ಕುರಿತಾದ ಕುತೂಹಲಕಾರಿ ಮಾಹಿತಿಯೂ ಇಲ್ಲಿದೆ.
- Sainandha P
- Updated on: Dec 20, 2024
- 5:02 pm
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ
ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಸಮ್ಮೇಳನವು ಮೂರು ದಿನಗಳ ಕಾಲ ನಡೆಯುತ್ತಿದೆ. ವಿವಿಧ ಸಾಹಿತ್ಯ ಕಾರ್ಯಕ್ರಮಗಳು, ಪುಸ್ತಕ ಮಳಿಗೆಗಳು ಮತ್ತು ವಾಣಿಜ್ಯ ಮಳಿಗೆಗಳಿವೆ. ಲಕ್ಷಾಂತರ ಜನರು ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್ ಇದೆ.
- Prashantha B
- Updated on: Dec 20, 2024
- 1:48 pm
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗ ಬದಲಾವಣೆ
ಮಂಡ್ಯದಲ್ಲಿ ಇದೇ ಡಿಸೆಂಬರ್ 20 ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 20ರ ಬೆಳಗ್ಗೆ 5 ಗಂಟೆಯಿಂದ 23ರ ಬೆಳಗ್ಗೆ 6 ಗಂಟೆಯವರೆಗೆ ಮಾರ್ಗ ಬದಲಾವಣೆಯಾಗಲಿದೆ.
- Prashantha B
- Updated on: Dec 19, 2024
- 9:06 am