Karnataka
ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವಾಗಿದೆ ಹಾಗೂ ದೇಶದ ಆರನೆಯ ದೊಡ್ಡ ರಾಜ್ಯ. ಕರ್ನಾಟಕವನ್ನು ಹಿಂದೆ ಮೈಸೂರು ರಾಜ್ಯ ಎಂದು ಕರೆಯಲಾಗುತ್ತಿತ್ತು, ಇದು ಭಾರತದ ನೈಋತ್ಯ ಪ್ರದೇಶದ ರಾಜ್ಯವಾಗಿದೆ. ಇದು 1 ನವೆಂಬರ್ 1956 ರಂದು ರಾಜ್ಯಗಳ ಮರುಸಂಘಟನೆ ಕಾಯ್ದೆಯ ಅಂಗೀಕಾರದೊಂದಿಗೆ ಮೈಸೂರು ರಾಜ್ಯವಾಗಿ ರೂಪುಗೊಂಡಿತು ಮತ್ತು 1973 ರಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಇತರ ನಾಲ್ಕು ದಕ್ಷಿಣ ಭಾರತದ ಸಹೋದರಿ ರಾಜ್ಯಗಳೊಂದಿಗೆ ಭೂ ಗಡಿಯನ್ನು ಹೊಂದಿರುವ ಏಕೈಕ ದಕ್ಷಿಣ ರಾಜ್ಯ ಕರ್ನಾಟಕ. ಈ ರಾಜ್ಯವು 191,791 km2 (74,051 ಚದರ ಮೈಲಿ), ಅಥವಾ ಭಾರತದ ಒಟ್ಟು ಭೌಗೋಳಿಕ ಪ್ರದೇಶದ 5.83 ಪ್ರತಿಶತದಷ್ಟು ವಿಸ್ತೀರ್ಣವನ್ನು ಹೊಂದಿದೆ.
ಪ್ರವಾಸಿಗರೇ ಗಮನಿಸಿ, ಮಂಗಳೂರಿನ ಬೀಚ್‌ಗಳಲ್ಲಿ ಹೈಅಲರ್ಟ್: ವಾಟರ್ ಸ್ಪೋರ್ಟ್ಸ್ ಸಂಪೂರ್ಣ ಸ್ಥಗಿತ, ಸಮುದ್ರಕ್ಕಿಳಿಯುವಂತಿಲ್ಲ
ಮುಂಗಾರು ಮಳೆ ಆರಂಭವಾಗಿರುವುದರಿಂದ ಮಂಗಳೂರಿನ ಪಣಂಬೂರು, ತಣ್ಣೀರುಬಾವಿ ಹಾಗೂ ಸೋಮೇಶ್ವರ ಬೀಚ್‌ಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ತೇಲುವ ಸೇತುವೆ, ಬೋಟಿಂಗ್ ಸೇರಿದಂತೆ ಎಲ್ಲಾ ವಾಟರ್ ಸ್ಪೋರ್ಟ್ಸ್‌ಗಳನ್ನು ಸ್ಥಗಿತಗೊಳಿಸಲಾಗಿದ್ದು, ಪ್ರವಾಸಿಗರು ನೀರಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪೊಲೀಸರು ಮತ್ತು ಲೈಫ್ ಗಾರ್ಡ್‌ಗಳು ಹೆಚ್ಚಿನ ನಿಗಾ ಇರಿಸಿದ್ದಾರೆ.
- Pruthviraj
- Updated on: Jun 11, 2026
- 12:34 pm
6 ಸಾವಿರ ಕೊಟ್ರೆ ಒಂದು ವಿಷಯ ಪಾಸ್: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು
ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಫೇಲಾದ ವಿದ್ಯಾರ್ಥಿಗಳನ್ನು ಹಣ ಪಡೆದು ಪಾಸ್ ಮಾಡುವ ಹಗರಣ ಬಯಲಾಗಿದ್ದು, ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ತನಿಖೆಗೆ ಎಬಿವಿಪಿ (ABVP) ಆಗ್ರಹಿಸಿದೆ. ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿರುವ ಬಗ್ಗೆ ದೂರಲಾಗಿದ್ದು, ಅನೇಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗಿದೆ ಎಂಬ ಆರೋಪವೂ ಕೇಳಿಬಂದಿದೆ.
- Vinayak Badiger
- Updated on: Jun 11, 2026
- 12:34 pm
ನಾಪತ್ತೆಯಾಗಿ 26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಹಿಂದೆ ಸರ್ಕಸ್ ತಂಡದೊಂದಿಗೆ ಹೋಗಿ ನಾಪತ್ತೆಯಾಗಿದ್ದ ಮಗ 26 ವರ್ಷಗಳ ಬಳಿಕ ಮನೆಗೆ ಮರಳಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಮಗ ಸತೀಶ್ ಅಲಿಯಾಸ್ ಸಲೀಂ ಆಗಮನದಿಂದ ತಾಯಿ ಅಪಾರ ಸಂತಸಗೊಂಡಿದ್ದು, ಧರ್ಮಸ್ಥಳ, ಕಟೀಲು ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿನ ಹರಕೆಗಳನ್ನು ತೀರಿಸಲು ಸಿದ್ಧರಾಗಿದ್ದಾರೆ. ತನ್ನ ಆಸೆ ಕೊನೆಗೂ ಈಡೇರಿದ್ದಕ್ಕೆ ತಾಯಿ ಭಾವುಕರಾಗಿದ್ದಾರೆ.
- Pruthviraj
- Updated on: Jun 11, 2026
- 11:54 am
ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ! ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಪತ್ತೆ
ಬೆಂಗಳೂರಿನ ಕೋರಮಂಗಲದಲ್ಲಿ ‘ಡಿಜಿಟಲ್ ಡಿಸ್ಟೆನ್ಸ್ ಎಜುಕೇಶನ್ ಮಿಷನ್’ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ರಾಜಾರೆಡ್ಡಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿಗಳ ನಕಲಿ ಮಾರ್ಕ್ಸ್ ಕಾರ್ಡ್‌ಗಳನ್ನು 30 ರಿಂದ 50 ಸಾವಿರ ರೂ.ಗೆ ಮಾರಾಟ ಮಾಡುತ್ತಿದ್ದ ಈ ಜಾಲದಿಂದ 50ಕ್ಕೂ ಹೆಚ್ಚು ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.
- Rachappaji Naik S
- Updated on: Jun 11, 2026
- 11:16 am
ಕರ್ನಾಟಕ ಎಂಎಲ್ಸಿ ಚುನಾವಣೆ: ಪರಿಷತ್ ಕದನದಲ್ಲಿ ಜೆಡಿಎಸ್ಗೆ ಡಬಲ್ ಟೆನ್ಷನ್
ಕರ್ನಾಟಕ ವಿಧಾನ ಪರಿಷತ್ ಚುನಾವಣಾ ರಣಕಣ ರಂಗೇರಿದೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಹೆಚ್.ಡಿ. ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಸವಾಲಾಗಿ ಪರಿಣಮಿಸಿದೆ. ಎನ್ಡಿಎ ಅಭ್ಯರ್ಥಿಗೆ ನಾಲ್ಕರಿಂದ ಐದು ಮತಗಳ ಕೊರತೆಯಿದ್ದು, ಕಾಂಗ್ರೆಸ್‌ನಿಂದ ಮತ ಸೆಳೆಯುವ ಅನಿವಾರ್ಯತೆ ಇದೆ. ಅಲ್ಲದೆ, ಜೆಡಿಎಸ್ ಶಾಸಕರಾದ ಜಿ.ಟಿ. ದೇವೇಗೌಡ ಮತ್ತು ಹನೂರು ಮಂಜುನಾಥ್ ಅವರಿಂದ ಅಡ್ಡ ಮತದಾನದ ಭೀತಿ ಎದುರಾಗಿದೆ.
- Sunil MH
- Updated on: Jun 11, 2026
- 11:16 am
ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್ ಪೋಸ್ಟ್ ಮೂಲಕ ಕಾಂಗ್ರೆಸ್ಗೆ ಕುಟುಕಿದ ಜೆಡಿಎಸ್
ಇಲ್ಲಸಲ್ಲದ ನೆಪ ಹೇಳಿ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಸರ್ಕಾರ ತಾಯಂದಿರ ಹೆಸರನ್ನು ಕೈಬಿಡುತ್ತಿರುವುದಾಗಿ ಎಕ್ಸ್ ಪೋಸ್ಟ್ ಮೂಲಕ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನು 'ವೋಟ್ ಬ್ಯಾಂಕ್ ವಂಚನೆ' ಎಂದು ಕರೆದಿರುವ ಜೆಡಿಎಸ್, 5,000 ಕೋಟಿ ರೂ. ಗೃಹಲಕ್ಷ್ಮಿ ಹಣವನ್ನು ತಿಂದು ತೇಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮತಕ್ಕಾಗಿ ಮಹಿಳೆಯರನ್ನು ಯಾಮಾರಿಸಿದೆ ಎಂದು ಕಿಡಿ ಕಾರಿದೆ.
- Prasanna Hegde
- Updated on: Jun 11, 2026
- 10:47 am
ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ!
ಇದು ಯಾವ ಸಿನಿಮಾ ಕಥೆಗೂ ಕಡಿಮೆಯಿಲ್ಲದ ನೈಜ ಘಟನೆ. ಧರ್ಮಸ್ಥಳದಲ್ಲಿ 26 ವರ್ಷಗಳ ಹಿಂದೆ ಸರ್ಕಸ್ ತಂಡದೊಂದಿಗೆ ಓಡಿಹೋಗಿ ಮಹಾರಾಷ್ಟ್ರದಲ್ಲಿ ‘ಸಲೀಂ ಅಬ್ದುಲ್ ಅನ್ಸಾರಿ’ ಆಗಿ ಬದಲಾಗಿದ್ದ ಸತೀಶ್ ಎಂಬ ಯುವಕ, ಪ್ರವಾಸಕ್ಕೆ ಬಂದಾಗ ಹಳೆಯ ನೆನಪು ಮರುಕಳಿಸಿ ಇದೀಗ ಮನೆಗೆ ಮರಳಿದ್ದಾನೆ! ತಾಯಿಯನ್ನು ಭೇಟಿಯಾಗಿದ್ದಾನೆ. ಧರ್ಮಸ್ಥಳದಲ್ಲಿ ನಡೆದ ವಿಸ್ಮಯಕಾರಿ ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ.
- Pruthviraj
- Updated on: Jun 11, 2026
- 10:51 am
ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮಗಳು ಜಾರಿಯಾಗಿದ್ದು, ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಒಂದು ತಿಂಗಳೊಳಗೆ ಬಯೋಮೆಟ್ರಿಕ್ ಮಾಡಿಸುವುದು ಕಡ್ಡಾಯವಾಗಿದ್ದು, ತಪ್ಪಿದರೆ ಖಾತೆಗೆ 2,000 ರೂಪಾಯಿ ಹಣ ಬರುವುದು ನಿಲ್ಲಲಿದೆ. ಮೃತಪಟ್ಟವರು ಹಾಗೂ ಅನರ್ಹ ಫಲಾನುಭವಿಗಳನ್ನು ಪತ್ತೆ ಹಚ್ಚಲು ಈ ಕ್ರಮ ಕೈಗೊಳ್ಳಲಾಗಿದೆ.
- Prasanna Gaonkar
- Updated on: Jun 11, 2026
- 9:58 am
ಚಡಚಣ ಬ್ಯಾಂಕ್ ದರೋಡೆಯಾಗಿ 9 ತಿಂಗಳಾದರೂ ಸಿಗದ ಚಿನ್ನ: ಬ್ಯಾಂಕ್‌ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ
ವಿಜಯಪುರ ಜಿಲ್ಲೆಯ ಚಡಚಣ ಎಸ್‌ಬಿಐ ಬ್ಯಾಂಕ್‌ನಲ್ಲಿ 9 ತಿಂಗಳ ಹಿಂದೆ ನಡೆದಿದ್ದ 20 ಕೆಜಿ ಚಿನ್ನದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾತು ಕೊಟ್ಟರೂ ಪರಿಹಾರ ನೀಡದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗ್ರಾಹಕರು ರಾತ್ರಿಯಿಡೀ ಬ್ಯಾಂಕ್‌ಗೆ ಬೀಗ ಹಾಕಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಸಂಧಾನ ನಡೆಸಿದ್ದಾರೆ.
- Ashok Yadalli
- Updated on: Jun 11, 2026
- 9:48 am
TV9 Kannada Live: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ
Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿವೆ.
- Prasanna Hegde
- Updated on: Jun 11, 2026
- 12:01 pm
ಹಾವೇರಿ ಬಳಿಕ ತುಮಕೂರಿನಲ್ಲೂ SLV ಮಹಿಳಾ ಮಾರ್ಟ್ ಭಾರೀ ವಂಚನೆ: ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ
ಹಾವೇರಿ ಬೆನ್ನಲ್ಲೇ ತುಮಕೂರಿನ ಜಯನಗರದಲ್ಲೂ ‘ಎಸ್‌ಎಲ್‌ವಿ ಮಹಿಳಾ ಮಾರ್ಟ್’ ಗೃಹ ಉದ್ಯೋಗದ ನೆಪದಲ್ಲಿ ನೂರಾರು ಮಹಿಳೆಯರಿಗೆ 5 ಲಕ್ಷದಿಂದ ಕೋಟಿ ರೂ.ವರೆಗೂ ವಂಚಿಸಿದೆ. ಮನೆಯ ಪತ್ರ ಅಡವಿಟ್ಟು ಹಣ ಹೂಡಿದ್ದ ಮಹಿಳೆಯರು ಈಗ ಬೀದಿಗೆ ಬಿದ್ದಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
- Jagadisha B
- Updated on: Jun 11, 2026
- 9:15 am
ಬೆಂಗಳೂರಿಗರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ
ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್ ಯೋಜನೆಗೆ RITES ಸಕಾರಾತ್ಮಕ ವರದಿ ನೀಡಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ದಟ್ಟವಾಗಿದೆ. ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಈ ಹಿಂದೆ ಪ್ರಶ್ನೆ ಎತ್ತಿತ್ತು.
- Prasanna Hegde
- Updated on: Jun 11, 2026
- 9:06 am