Lok Sabha Elections
ಸಾರ್ವತ್ರಿಕ ಚುನಾವಣೆ ಎಂದು ಕರೆಯಲ್ಪಡುವ ಲೋಕಸಭೆ ಚುನಾವಣೆಗಳು ಭಾರತದಲ್ಲಿ ನಿರ್ಣಾಯಕ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಆಗಿದೆ. ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಈ ಚುನಾವಣೆಗಳು ಭಾರತದ ಸಂಸತ್ತಿನ ಕೆಳಮನೆಯಾದ ಲೋಕಸಭೆಯ ಸದಸ್ಯರ ಚುನಾವಣೆ ಆಗಿದೆ. ಅತೀ ಹೆಚ್ಚು ಲೋಕಸಭಾ ಸ್ಥಾನವನ್ನು ಗೆದ್ದ ಪಕ್ಷವು ಕೇಂದ್ರದಲ್ಲಿ ಸರ್ಕಾರ ರೂಪಿಸುತ್ತದೆ. ವಿವಿಧ ಹಿನ್ನೆಲೆ ಮತ್ತು ಪ್ರದೇಶಗಳ ಅರ್ಹ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ, ವಿವಿಧ ರಾಜಕೀಯ ಪಕ್ಷಗಳನ್ನು ಪ್ರತಿನಿಧಿಸುವ ಅಭ್ಯರ್ಥಿಗಳಿಗೆ ತಮ್ಮ ಮತಗಳನ್ನು ಚಲಾಯಿಸುತ್ತಾರೆ. ಚುನಾವಣಾ ಫಲಿತಾಂಶಗಳ ಆಧಾರದಲ್ಲಿ ಕೇಂದ್ರ ಸರ್ಕಾರದ ರಚನೆ ಆಗುತ್ತಿದ್ದು, ಈ ಸರ್ಕಾರ ನೀತಿಗಳು, ಶಾಸನಗಳನ್ನು ರೂಪಿಸುತ್ತವೆ. ಚುನಾವಣಾ ಆಯೋಗವು ನ್ಯಾಯಯುತ ಮತ್ತು ಪಾರದರ್ಶಕ ನಡವಳಿಕೆಯನ್ನು ನೋಡಿಕೊಳ್ಳುತ್ತದೆ. ಈ ಚುನಾವಣೆಗಳು ಭಾರತೀಯ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತಿದ್ದು,ಜನಸಂಖ್ಯೆಯ ವೈವಿಧ್ಯಮಯ ಅಭಿಪ್ರಾಯಗಳು ಮತ್ತು ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತವೆ.