Mandya Violence

Mandya Violence

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ಸಂಜೆ ಗಣೇಶೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ಮೊದಲಿಗೆ, ಗಣೇಶ ಮೂರ್ತಿಯ ಮೆರವಣಿಗೆ ಸಂದರ್ಭ ಮಸೀದಿ ಬಳಿ ಡಿಜೆ ಹಾಕಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ನಂತರ ಗಲಾಟೆ ನಡೆದಿದೆ. ಮೆರವಣಿಗೆ ಮೇಲೆ ಮಸೀದಿಯೊಂದರಿಂದ ಕಲ್ಲು ತೂರಾಟ ಮಾಡಿದ ಆರೋಪ ಕೇಳಿಬಂದಿದೆ. ಹಲವಾರು ಅಂಗಡಿಮುಂಗಟ್ಟುಗಳು, ಬೈಕ್ ಹಾಗೂ ಇತರ ವಾಹನಗಳಿಗೆ ಹಾನಿ ಮಾಡಲಾಗಿದೆ. ಬೆಂಕಿ ಹಚ್ಚಿ, ಪೆಟ್ರೋಲ್ ಬಾಂಬ್ ಎಸೆದು ದಾಂಧಲೆ ಮಾಡಲಾಗಿದೆ. ಘಟನೆ ಕುರಿತ ಅಧಿಕೃತ ಮಾಹಿತಿ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.

ಇನ್ನೂ ಹೆಚ್ಚು ಓದಿ

ನಾಗಮಂಗಲ ಗಲಭೆ: ಕೇರಳ ಕೈವಾಡ ಬಗ್ಗೆ ಜೆಡಿಎಸ್ ನಿಲುವು ಬೇರೆ ಇರಬಹುದು ಎಂದ ಅಶೋಕ್!

ಮಂಡ್ಯದ ನಾಗಮಂಗಲ ಗಲಭೆಯಲ್ಲಿ ಕೇರಳ ಕೈವಾಡ ಬಗ್ಗೆ ಜೆಡಿಎಸ್ ನಿಲುವು ಬೇರೆ ಇರಬಹುದು. ಅವರ ನಿಲುವನ್ನು ಹೆಚ್​ಡಿ ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಹಾಗೆಂದು ನಮ್ಮ ನಿಲುವಿಗೆ ನಾವು ಬದ್ಧ. ಮೈತ್ರಿ ಮಾಡಿಕೊಂಡಿದ್ದೇವೆ. ಹಾಗೆಂದು ನಮ್ಮ ನಿಲುವಿಗೆ ನಾವು ಬದ್ಧ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಅವರ ಮಾತಿನ ಪೂರ್ಣ ವಿಡಿಯೋ ಹಾಗೂ ವಿವರ ಇಲ್ಲಿದೆ.

ನಾಗಮಂಗಲ: ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ, ಸಿಸಿಟಿವಿಗೆ ಕಲ್ಲೆಸೆದು ಸಾಕ್ಷ್ಯನಾಶಕ್ಕೆ ಯತ್ನ, ವಿಡಿಯೋ ಬಹಿರಂಗ

ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪೂರ್ವನಿಯೋಜಿತ ಕೃತ್ಯ ಎಂದು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಇದರ ಬೆನ್ನಲ್ಲೇ, ಈ ಆರೋಪಗಳಿಗೆ ಪುಷ್ಟಿ ಕೊಡುವಂಥ ಕೆಲವು ವಿಡಿಯೋಗಳು ಬಯಲಾಗಿವೆ. ಪಾತ್ರೆ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಸಿಸಿಟಿವಿಗೆ ಕಲ್ಲೆಸೆದು ಸಾಕ್ಷ್ಯನಾಶಕ್ಕೆ ಯತ್ನಿಸಿದ ವಿಡಿಯೋ ಇದೀಗ ಬಯಲಾಗಿವೆ.

ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ

ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ಸಂಭವಿಸಿದ ಗಲಭೆಯ ಕುರಿತು ಮಾಹಿತಿ ಸಂಗ್ರಹಿಸಲು ಬಿಜೆಪಿ ರಚಿಸಿರುವ ಶಾಸಕ ಡಾ. ಅಶ್ವತ್ಥನಾರಾಯಣ ನೇತೃತ್ವದ ಸತ್ಯಶೋಧನಾ ಸಮಿತಿ ಸೋಮವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿತು. ನಂತರ ಅಶ್ವತ್ಥನಾರಾಯಣ ಅವರು ಹೇಳಿದ್ದೇನೆಂಬ ವಿಡಿಯೋ ಇಲ್ಲಿದೆ.

ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ಅನುಮಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಅಶೋಕ್

ನಾಗಮಂಗಲ ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ. ಅಲ್ಲದೆ, ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಹೆಚ್ಚಾಗಿದೆ ಎಂದಿದ್ದಾರೆ. ನಾಗಮಂಗಲ ಗಲಭೆ ಸೇರಿದಂತೆ ರಾಜ್ಯದ ಎಲ್ಲ ಕೋಮು ಗಲಭೆ ಪ್ರಕರಣಗಳ ತನಿಖೆಯನ್ನು ದೇಶದ ಭದ್ರತೆ ದೃಷ್ಟಿಯಿಂದ ಎನ್​​ಐಎಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ನಾಗಮಂಗಲ ಕೋಮುಗಲಭೆ: ರಕ್ಷಣೆ ಮಾಡಿ ಎಂದು ಅಂಗಲಾಚಿದರೂ ಕೈ ಕಟ್ಟಿ ನಿಂತ ಪೊಲೀಸರು

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಚ್ಚುತ್ತಿದ್ದರು. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿ ಅಂತ ಅಂಗಲಾಚಿ ಬೇಡಿಕೊಂಡರೂ ಪೊಲೀಸರು ಮಾತ್ರ ತಮಗೆ ಸಂಬಂಧವೇ ಇಲ್ಲ ಎಂಬಂತೆ ನಿಂತು ನೋಡುತ್ತಿದ್ದ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಾಗಮಂಗಲ ಗಲಭೆ ಹಿಂದೆ ಕೇರಳ ಮೂಲದವರ ಕೈವಾಡ ಶಂಕೆ: ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್‌

ಈ ಕೋಮುಗಲಭೆಯಲ್ಲಿ ನಿಷೇಧಿತ ಸಂಘಟನೆಗಳು ಮತ್ತು ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂದೇಹವಿರುವುದರಿಂದ ಸ್ಥಳೀಯ ಪೋಲಿಸರು ಈ ಪ್ರಕರಣವನ್ನ ಬೇಧಿಸುವುದು ಕಷ್ಟಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಈ ಪ್ರಕರಣವನ್ನ NIA ಗೆ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ಅವರಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಒತ್ತಾಯಿಸಿದ್ದಾರೆ.

ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್​ಡಿಪಿಐ ಕರ್ನಾಟಕದ ಶಾಂತಿ ಕದಡಲು ಸದಾ “ಸಿದ್ದ”: ಬಿಜೆಪಿ ಕಿಡಿ

ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿರುವುದರಲ್ಲಿ ವಿಶೇಷವಾಗಿ ಇಬ್ಬರು ಕೇರಳ ಮೂಲದ ವ್ಯಕ್ತಿಗಳ ಹೆಸರಿದ್ದು, ಅವರು ಎಸ್‌ಡಿಪಿಐಗೆ ಸೇರಿದವರು ಎಂಬ ಅನುಮಾನವಿದೆ. ಗಳಸ್ಯ-ಕಂಠಸ್ಯ ದೋಸ್ತಿಗಳಾದ ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ಕರ್ನಾಟಕದ ಶಾಂತಿಯನ್ನು ಕದಡಲು ಸದಾ "ಸಿದ್ದ"ವಾಗಿವೆ. ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ನಾಸೀರ್ ಮತ್ತು ಯೂಸೂಫ್​ಗೆ ಕರ್ನಾಟಕದ ನಾಗಮಂಗಲದಲ್ಲಿ ಏನು ಕೆಲಸ ಎಂದು ಬಿಜೆಪಿ ಪ್ರಶ್ನಿಸಿದೆ.

ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಈ ಗಲಭೆಯಲ್ಲಿ ಕೇರಳ ಮೂಲದ ಪಿಎಫ್​ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಅಮಾಯಕರನ್ನು ಬಂಧಿಸಿರುವುದು‌ ನಿಜ, ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ: ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಕೇಸ್​ಗೆ ಸಂಬಂಧಿಸಿದಂತೆ ಇಂದು ನಾಗಮಂಗಲದಲ್ಲಿ ಶಾಂತಿಸಭೆ ಮಾಡಲಾಗಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಅಮಾಯಕರನ್ನು ಬಂಧಿಸಿರುವುದು‌ ನಿಜ. ಚಾರ್ಜ್​ಶೀಟ್​​ನಲ್ಲಿ ‌ಅವರ ಹೆಸರು ಕೈಬಿಡಲು ಸೂಚನೆ ‌ನೀಡಿದ್ದೇನೆ ಎಂದು ಹೇಳಿದ್ದಾರೆ.

ನಾಗಮಂಗಲ ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆ ನಡೆದಿರಬಹುದು: ಡಿಕೆ ಸುರೇಶ್ ಗಂಭೀರ ಆರೋಪ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕೋಮು ಗಲಭೆ ಸಂಬಂಧ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗಲಭೆ ಕುಮಾರಸ್ವಾಮಿ ನಿರ್ದೇಶನದಂತೆಯೇ ನಡೆದಿರಬಹುದು ಎಂದು ಅವರು ಆರೋಪಿಸಿದ್ದಾರೆ.

  • Sunil MH
  • Updated on: Sep 14, 2024
  • 12:40 pm